ಕೋಲಾರದಲ್ಲಿ ‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್

ಸಾವಯವ ಕೃಷಿ ಮಾಡುತ್ತಿರುವ ರೈತ ಮಹಿಳೆ ಅಶ್ವತ್ಥಮ್ಮ ತೋಟಕ್ಕೆ ಭೇಟಿ ನೀಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್ ರೈತ ಮಹಿಳೆಯ ಕೃಷಿ ಕಾರ್ಯದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕೋಲಾರದಲ್ಲಿ ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್
ರೈತರೊಂದಿಗೆ ಒಂದು ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಿ.ಸಿ.ಪಾಟೀಲ್
Edited By:

Updated on: Apr 06, 2022 | 10:58 PM

ಕೋಲಾರ: ‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮ ಹಿನ್ನೆಲೆಯಲ್ಲಿ ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಬೇವಹಳ್ಳಿ ಭೇಟಿ ನೀಡಿದ್ದಾರೆ. ‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಸಾವಯವ ಕೃಷಿ ಮಾಡುತ್ತಿರುವ ರೈತ ಮಹಿಳೆ ಅಶ್ವತ್ಥಮ್ಮ ತೋಟಕ್ಕೆ ಭೇಟಿ ನೀಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್ ರೈತ ಮಹಿಳೆಯ ಕೃಷಿ ಕಾರ್ಯದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸಾವಯವ‌ ಹಾಗೂ ಸಮಗ್ರ ಕೃಷಿ ಪದ್ಧತಿಯಲ್ಲಿ ಬೇಸಾಯ ಮಾಡುತ್ತಿರುವ ಅಶ್ವತ್ಥಮ್ಮ ರಾಗಿ, ಭತ್ತ, ವಿವಿಧ ತರಕಾರಿ ಹಾಗೂ ಹಣ್ಣುಗಳನ್ನು ಬೆಳೆದಿದ್ದಾರೆ. ಹೈನುಗಾರಿಕೆ ಹಾಗೂ ಕುರಿ ಸಾಕಾಣಿಕೆಯನ್ನು ಮಾಡುತ್ತಿರುವ ಅವರು ಮಾದರಿ ರೈತ ಮಹಿಳೆ ಅನಿಸಿಕೊಂಡಿದ್ದಾರೆ.

ತೋಟವು ತಳಿರು ತೋರಣಗಳಿಂದ ಸಿಂಗಾರಗೊಂಡಿದ್ದು, ಸಂಭ್ರಮದಿಂದ ಕಂಗೊಳಿಸುತ್ತಿದೆ. ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ನಾಗೇಶ್, ಸಂಸದ ಮುನಿಸ್ವಾಮಿ ಭಾಗಿಯಾಗಿದ್ದಾರೆ. ಕೃಷಿ ಸಚಿವರಿಗೆ ಸಾಥ್ ನೀಡಿದ್ದಾರೆ.







ಔಷಧೀಯ ಸಸ್ಯಗಳ ಕೃಷಿ ಮಾಡಿ ಇತರ ರೈತರಿಗೆ ಮಾದರಿಯಾದ ಇಂಗ್ಲಿಷ್ ಉಪನ್ಯಾಸಕ

Published On - 12:17 pm, Wed, 6 January 21