AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಬೆನ್ನಿಗೆ ಅಹಿಂದ ನಾಯಕರ ಬಲ: ಅಧಿಕಾರ ಹಂಚಿಕೆ ವಿಚಾರ ಬಂದರೆ 2 ಅಸ್ತ್ರ ಪ್ರಯೋಗಕ್ಕೆ ತಂತ್ರ!

ಹೈಕಮಾಂಡ್ ತೀರ್ಮಾನ ಮಾಡಿದರೆ ಐದು ವರ್ಷ ಸಿಎಂ ಆಗಿರುತ್ತೇನೆ ಎನ್ನುವ ಮೂಲಕ ನಾಯಕತ್ವ ಬದಲಾವಣೆ ವಿಚಾರದಲ್ಲಿ ಸಿದ್ದರಾಮಯ್ಯ ಮೆತ್ತಗಾದರೇ ಅಥವಾ ಎಚ್ಚರಿಕೆಯ ಹೆಜ್ಜೆ ಇಟ್ಟರೇ ಎಂಬುದು ರಹಸ್ಯವಾಗಿದೆ. ಆದರೆ, ಸಿದ್ದರಾಮಯ್ಯ ಪಡೆ ಅವರೇ ಐದು ವರ್ಷ ಸಿಎಂ ಆಗಿರಬೇಕು. ಸಿದ್ದರಾಮಯ್ಯ ಅನಿವಾರ್ಯ ಎನ್ನುತ್ತಿದೆ. ಜತೆಗೆ, ಅಧಿಕಾರ ಹಂಚಿಕೆ ವಿಚಾರ ಮುನ್ನೆಲೆಗೆ ಬಂದರೆ 2 ಅಸ್ತ್ರ ಪ್ರಯೋಗಕ್ಕೆ ತಂತ್ರ ಹೂಡಿದೆ.

ಸಿದ್ದರಾಮಯ್ಯ ಬೆನ್ನಿಗೆ ಅಹಿಂದ ನಾಯಕರ ಬಲ: ಅಧಿಕಾರ ಹಂಚಿಕೆ ವಿಚಾರ ಬಂದರೆ 2 ಅಸ್ತ್ರ ಪ್ರಯೋಗಕ್ಕೆ ತಂತ್ರ!
ಸಿದ್ದರಾಮಯ್ಯ ಬೆನ್ನಿಗೆ ಅಹಿಂದ ನಾಯಕರ ಬಲ
ಪ್ರಸನ್ನ ಗಾಂವ್ಕರ್​
| Updated By: Ganapathi Sharma|

Updated on: Oct 29, 2025 | 7:59 AM

Share

ಬೆಂಗಳೂರು, ಅಕ್ಟೋಬರ್ 29: ಹೈಕಮಾಂಡ್ ತೀರ್ಮಾನಿಸಿದರೆ ಐದು ವರ್ಷ ಮುಖ್ಯಮಂತ್ರಿ ಆಗೀರುತ್ತೇನೆ ಎಂದು ಸಿದ್ದರಾಮಯ್ಯ (Siddaramaiah) ಹೇಳಿರುವುದು ನಾನಾ ಚರ್ಚೆಗೆ ಕಾರಣವಾಗಿದೆ. ಆದರೆ ಸಿದ್ದರಾಮಯ್ಯ ಬೆನ್ನಿಗೆ ನಿಂತಿರುವ ಅಹಿಂದ ನಾಯಕರು (Ahinda Leaders), ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ. ಯಾವ ಪವರ್ ಶೇರಿಂಗ್ ಚರ್ಚೆಯೂ ಇಲ್ಲ ಎನ್ನುತ್ತಿದ್ದಾರೆ. ಹಾಗೇನಾದರೂ ಇದ್ದರೆ ಎದ್ದಿರುವ ಗೊಂದಲ ಪರಿಹರಿಸಿ ಎಂದಿದ್ದಾರೆ.

ಅಧಿಕಾರ ಹಂಚಿಕೆ ಬಗ್ಗೆ ಯಾವುದೂ ತೀರ್ಮಾನವಾಗಿಲ್ಲ ಎಂದು ಸಿದ್ದರಾಮಯ್ಯ ಬಣದ ನಾಯಕರು ಹೇಳಿದ್ದಾರೆ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದಿವರಿಯುವುದು ಅನಿವಾರ್ಯ ಎಂಬ ದಾಳವೂ ಅಖಾಡದಲ್ಲಿ ಉರುಳಿದೆ. ಕೆಎನ್​ ರಾಜಣ್ಣ ನೀಡಿದ್ದ ಹೇಳಿಕೆಗೆ ಯತೀಂದ್ರ ಸಿದ್ದರಾಮಯ್ಯ ದನಿಗೂಡಿಸಿದ್ದು, ಸಿದ್ದರಾಮಯ್ಯ ರಾಜ್ಯಕ್ಕೆ ಅನಿವಾರ್ಯ ಎಂದಿದ್ದಾರೆ.

ಸಿಎಂ ಹೇಳಿಕೆಯಲ್ಲಿ ಯಾವುದೇ ವ್ಯಾತ್ಯಾಸವಿಲ್ಲ ಎಂದಿರುವ ನಾಯಕರು, ಪ್ಲ್ಯಾನ್ ಬಿ ಕೂಡಾ ರೆಡಿ ಮಾಡಿಟ್ಟುಕೊಂಡಿದ್ದಾರೆ. ಒಂದು ವೇಳೆ ಹೈಕಮಾಂಡ್ ಮಟ್ಟದಲ್ಲಿ ಅಧಿಕಾರ ಹಂಚಿಕೆ ವಿಚಾರ ಚರ್ಚೆಗೆ ಬಂದರೆ, 2 ಅಸ್ತ್ರಗಳ ಪ್ರಯೋಗಕ್ಕೆ ಸಿಎಂ ಸಿದ್ದರಾಮಯ್ಯ ಬಣ ರೆಡಿ ಆಗಿದೆ.

ಸಿದ್ದರಾಮಯ್ಯ ಬತ್ತಳಿಕೆಯಲ್ಲಿವೆ 2 ಬಾಣ!

ಸಿಎಂ ಸಿದ್ದರಾಮಯ್ಯ ಬಣ ಹೆಚ್ಚುವರಿ ಡಿಸಿಎಂ ಆಯ್ಕೆಗೆ ಪಟ್ಟು ಹಿಡಿಯುವ ಸಾಧ್ಯತೆಯಿದೆ. ಇದರ ಜೊತೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಒತ್ತಾಯ ಮಾಡಲಿದೆ ಎನ್ನಲಾಗಿದೆ. ಈ 2 ವಿಷಯಗಳನ್ನು ಮುನ್ನಲೆಗೆ ತರಲು ಸಿಎಂ ಬಣ ಚಿಂತನೆ ನಡೆಸಿದ್ದು, ಸಂಪುಟ ಪುನಾರಚನೆ ವೇಳೆ ಹೆಚ್ಚುವರಿ ಡಿಸಿಎಂ ಆಯ್ಕೆಗೆ ಪಟ್ಟು ಹಿಡಿಯಲಿದೆ. ಸಮುದಾಯವಾರು ಡಿಸಿಎಂ ಸ್ಥಾನಕ್ಕೆ ಒತ್ತಡ ಹೇರುವ ಸಾಧ್ಯತೆ ಇದೆ. ಮುಂದಿನ ತಿಂಗಳ ದೆಹಲಿ ಭೇಟಿ ವೇಳೆ ಇದೇ ವಿಷಯ ಪ್ರಸ್ತಾಪ ಸಾಧ್ಯತೆ ಇದೆ ಎನ್ನಲಾಗಿದೆ.

ಡಿಕೆ ಶಿವಕುಮಾರ್ ಮೌನದಾಟ: ಗಡುವಿನ ತನಕ ಮೌನವಾಗಿರಲು ನಿರ್ಧಾರ?

ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆಯ ಹೆಜ್ಜೆ ಇಡುತ್ತಿದ್ದಾರೆ. ಗಡುವಿನ ತನಕ ಮೌನವಾಗಿರಲು ಅವರು ನಿರ್ಧರಿಸಿದಂತಿದೆ. ಯಾಕೆಂದರೆ, ತಾನೆಷ್ಟು ನಿಷ್ಠನಾಗಿದ್ದೇನೆಂದು ಹೈಕಮಾಂಡ್​ಗೆ ತೋರಿಸುವುದು ತಂತ್ರದ ಒಂದು ಭಾಗವಾಗಿರಬಹುದು. ಇದನ್ನೇ ವರಿಷ್ಠರ ಮುಂದಿಡುವ ಸಾಧ್ಯತೆಗಳನ್ನೂ ಅಲ್ಲಗಳೆಯುವಂತಿಲ್ಲ. ರಾಜಕೀಯದಲ್ಲಿ ಕೊನೆಯ ಸಮಯದಲ್ಲಿ ಆಡುವ ಮಾತುಗಳು ಬಹಳ ಮಹತ್ವ ಪಡೆಯುತ್ತವೆ. ಹೀಗಾಗಿಯೇ ತನ್ನ ಬೆಂಬಲಿಗರಿಗೂ ಡೆಡ್​​ಲೈನ್ ವರೆಗೆ ಸುಮ್ಮನಿರಿ ಎಂಬ ಸಂದೇಶ ಸಾರಿದ್ದಾರೆ.

ಇದನ್ನೂ ಓದಿ: ಹೈಕಮಾಂಡ್ ತೀರ್ಮಾನ ಮಾಡಿದ್ರೆ! ಸಿಎಂ ಸಿದ್ದರಾಮಯ್ಯ ದಿಢೀರ್ ಮಾತಿನ ವರಸೆ ಬದಲಿಸಿದ್ದೇಕೆ?

ಕುರ್ಚಿ ಆಟ ಕ್ಲೈಮ್ಯಾಕ್ಸ್‌ಗೆ ಬರುತ್ತಿದ್ದಂತೆಯೇ ತಂತ್ರ ಪ್ರತಿತಂತ್ರಗಳು ಜೋರಾಗಿಯೇ ನಡೆಯುತ್ತಿವೆ. ರಾಜಕೀಯ ಬತ್ತಳಿಕೆಯಲ್ಲಿರುವ ಹಳೇ ಪಟ್ಟುಗಳು ಜೀವ ಪಡೆದುಕೊಂಡಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ