AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಕಾಂಗ್ರೆಸ್ ಸೇರಲು ಅಹ್ಮದ್ ಪಟೇಲ್ ಕಾರಣ: ಸಿದ್ದರಾಮಯ್ಯ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಇಂದು ಸಾಯಂಕಾಲ ಬುಧವಾರ ಬೆಳಗ್ಗೆ ನಿಧನರಾದ ಪಕ್ಷದ ಹಿರಿಯ ನಾಯಕ ಮತ್ತು ಟ್ರಬಲ್ ಶೂಟರ್ ಎಂದೇ ಖ್ಯಾತರಾಗಿದ್ದ ಅಹ್ಮದ್ ಪಟೇಲ್ ಅವರ ಶೋಕಸಭೆಯಲ್ಲಿ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಶ್ರದ್ಧಾಂಜಲಿ ಅರ್ಪಿಸಿದರು.

ನಾನು ಕಾಂಗ್ರೆಸ್ ಸೇರಲು ಅಹ್ಮದ್ ಪಟೇಲ್ ಕಾರಣ: ಸಿದ್ದರಾಮಯ್ಯ
ಅರುಣ್​ ಕುಮಾರ್​ ಬೆಳ್ಳಿ
|

Updated on:Nov 25, 2020 | 8:57 PM

Share

ಕಾಂಗ್ರೆಸ್ ಹಿರಿಯ ಧರೀಣ ಅಹ್ಮದ್ ಪಟೇಲ್​ ಅವರ ಸಾವಿನ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಇಂದು ಸಾಯಂಕಾಲ ಆಯೋಜಿಸಿದ ಸಂತಾಪ ಸೂಚಕ ಸಭೆಯಲ್ಲಿ ಪಕ್ಷದ ರಾಜ್ಯ ನಾಯಕರು ಭಾವಪೂರ್ಣ ಶದ್ಧಾಂಜಲಿಯನ್ನು ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ‘ಪಟೇಲ್ ಅವರ ಸಾವಿನಿಂದ ಪಕ್ಷಕ್ಕೆ ಅಪಾರ ನಷ್ಟವಾಗಿದೆ, ಅವರು ಪಕ್ಷದ ಆಧಾರ ಸ್ತಂಭವಾಗಿದ್ದರು ಮತ್ತು ಒಗ್ಗಟ್ಟು, ಐಕ್ಯತೆಗಾಗಿ ತಮ್ಮ ಬದುಕಿನಡೀ ಶ್ರಮಿಸಿದರು. ಯಾವುದೇ ರಾಜಕೀಯ ಸಮಸ್ಯೆಯಿದ್ದರೂ ಅದಕ್ಕೆ ಪರಿಹಾರ ಕಂಡುಹಿಡಿಯುತ್ತಿದ್ದರು, ಸಮಸ್ಯೆಯನ್ನು ಮುನ್ನೆಲೆಗೆ ತಾರದೆ ಪಕ್ಷದ ಚೌಕಟ್ಟಿನೊಳಗೆ ಅದನ್ನು ಬಗೆಹರಿಸುತ್ತಿದ್ದರು. 2006ರಲ್ಲಿ ನಾನು ಕಾಂಗ್ರೆಸ್ ಸೇರಲು ಪಟೇಲ್ ಅವರೇ ಕಾರಣ, ನಿಜವಾದ ರಾಜಕೀಯ ಚಾಣಕ್ಯ ಅಂದರೆ ಅಹ್ಮದ್ ಪಟೇಲ್. ಅವರ ಸ್ಥಾನ ತುಂಬುವಂಥವರು ಬೇಱರೂ ಕಾಣಿಸುತ್ತಿಲ್ಲ,’ ಎಂದು ಹೇಳಿದರು.

ನಂತರ ಮಾತಾಡಿದ, ಪಕ್ಷದ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ‘ಅಹ್ಮದ್​ ಪಟೇಲ್​ರಲ್ಲಿ ಮೆಚ್ಚಿಕೊಳ್ಳುವಂಥ ಹಲವಾರು ಗುಣಗಳಿದ್ದವು. ಬೇರೆ ಬೇರೆ ಪಕ್ಷಗಳ ನಾಯಕರಲ್ಲೂ ಹೊಂದಾಣಿಕೆ ಹುಟ್ಟಿಸುವ ಕೆಲಸವನ್ನೂ ಪಟೇಲ್ ಸುರಳೀತವಾಗಿ ಮಾಡುತ್ತಿದ್ದರು. ಪಕ್ಷದಲ್ಲಿ ಯಾವುದೇ ತೊಂದರೆ ಎದುರಾದರೂ ಎಲ್ಲವನ್ನೂ ಸಹಿಸಿಕೊಂಡು ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸವನ್ನು ಅವರು ಕೊನೆವರೆಗೂ ಮಾಡಿದರು,’ ಎಂದರು.

Published On - 8:41 pm, Wed, 25 November 20

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!