AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹಮದಾಬಾದ್‌ ವಿಮಾನ ಪತನ: ಕರ್ನಾಟಕ ಮೂಲದ ಕೋ ಪೈಲಟ್ ಸಾವು

Ahmedabad Plane Crash: ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದ್ದು ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ವಿಜಯ ರೂಪಾನಿ ಸೇರಿದಂತೆ ಹಲವರು 242 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ದುರ್ಘಟನೆಯಲ್ಲಿ ಕರ್ನಾಟಕ ಮೂಲದ ಕೋ ಪೈಲಟ್​ ಸಹ ಮೃತಪಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅಹಮದಾಬಾದ್‌ ವಿಮಾನ ಪತನ: ಕರ್ನಾಟಕ ಮೂಲದ ಕೋ ಪೈಲಟ್ ಸಾವು
ವಿಮಾನ ಪತನ, ಕ್ಲೈವ್​ ಕುಂದರ್​
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ವಿವೇಕ ಬಿರಾದಾರ|

Updated on:Jun 12, 2025 | 7:14 PM

Share

ಮಂಗಳೂರು, ಜೂನ್​ 12: ಗುಜರಾತನ ಅಹಮದಾಬಾದ್​ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ (Ahmedabad Plane Crash) ಕರ್ನಾಟಕ (Karnataka) ಮೂಲದ ಸಹ ಪೈಲಟ್ ಕ್ಲೈವ್‌ ಕುಂದರ್‌ (Clive Kunder) ಮೃತಪಟ್ಟಿದ್ದಾರೆ. ಕರ್ನಾಟಕದ ಕರಾವಳಿ ಮೂಲದವಾರದ ಕ್ಲೈವ್‌ ಕುಂದರ್‌ ಅವರು ಮುಂಬೈನಲ್ಲಿ ವಾಸವಾಗಿದ್ದರು. ಕ್ಲೈವ್ ಕುಂದರ್ ಫಸ್ಟ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕ್ಲೈವ್​ ಕುಂದರ್‌ ಅವರಿಗೆ 1100 ಗಂಟೆ ವಿಮಾನ ಹಾರಾಟ ನಡೆಸಿದ ಅನುಭವವಿತ್ತು. ಕ್ಲೈವ್‌ ಕುಂದರ್‌ ಅವರು ಪತನಗೊಂಡ ಏರ್ ಇಂಡಿಯಾದ AI-171 ವಿಮಾನದ ಕೋ ಪೈಲಟ್ ಆಗಿದ್ದರು.

ಈ ದುರಂತದಲ್ಲಿ ಗುಜರಾತನ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ವಿಜಯ್​ ರೂಪಾನಿ ಸೇರಿದಂತೆ 242 ಜನರು ಮೃತಪಟ್ಟಿದ್ದಾರೆ ಎಂದು ಅಹಮದಾಬಾದ್ ನಗರ ಪೊಲೀಸ್ ಕಮಿಷನರ್​​​ ಮಾಹಿತಿ ನೀಡಿದ್ದಾರೆ.  ಗುರುವಾರ (ಜೂ.12) ಅಹಮದಾಬಾದ್​ ವಿಮಾನ ನಿಲ್ದಾಣದಿಂದ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್​ ಇಂಡಿಯಾ ವಿಮಾನ ಟೇಕ್​ ಆಫ್​ ಆದ ಐದೇ ನಿಮಿಷಕ್ಕೆ ಅಪಘತಕ್ಕೀಡಾಗಿದೆ.

ಇದನ್ನೂ ಓದಿ
Image
ಅಹಮದಾಬಾದ್​​ನಲ್ಲಿ ಏರ್ ಇಂಡಿಯಾ ವಿಮಾನ ಪತನ; 241 ಪ್ರಯಾಣಿಕರ ಸಾವು
Image
Plane Crash: ಗುಜರಾತ್​ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಾವು
Image
ಒಂದು ವಾರದ ಹಿಂದೆಯೇ ವಿಮಾನ ಅಪಘಾತದ ಭವಿಷ್ಯ ನುಡಿದಿದ್ದ ಜ್ಯೋತಿಷಿ!
Image
ವಿಮಾನದ ರಹಸ್ಯ ಇರುವ ಬ್ಲ್ಯಾಕ್ ಬಾಕ್ಸ್ ಎಂದರೇನು?

ಹೆಚ್​ಡಿ ಕುಮಾರಸ್ವಾಮಿ ಸಂತಾಪ

ಅಹಮದಾಬಾದ್‌ನಿಂದ ಲಂಡನ್‌ಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನ (AI-171) ದುರಂತವು ನನಗೆ ತೀವ್ರ ಆಘಾತ, ದಿಗ್ಭ್ರಮೆ ಉಂಟು ಮಾಡಿದೆ. ಅತ್ಯಂತ ಹೃದಯವಿದ್ರಾವಕವಾದ ಈ ದುರ್ಘಟನೆಯಲ್ಲಿ ಅಸುನೀಗಿದ ಪ್ರಯಾಣಿಕರ ಕುಟುಂಬಗಳಿಗೆ ನನ್ನ ದುಃಖತಪ್ತ ಸಂತಾಪಗಳು. ದೇವರ ದಯೆಯಿಂದ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಬೇಡ ಬೇಡ ಎಂದರೂ ವಿಮಾನ ಇಳಿಸಿದ್ದನಾ ಪೈಲಟ್? ಮಂಗಳೂರು ವಿಮಾನ ದುರಂತದ ಕರಾಳ ನೆನಪು

ಅತ್ಯಂತ ದುರದೃಷ್ಟಕರ ಘಟನೆ: ಸಿಎಂ

ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹ್ಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾಗಿದೆ.ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಗಳಿಗೆ. ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ ಎಂದು ಪ್ರಾರ್ಥಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:00 pm, Thu, 12 June 25

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ