ಸರ್ಕಾರಿ ಶಾಲೆ ಹಾಜರಾತಿ , ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​ ಅಪ್ಡೇಟ್​ ನೀಡಿದ ಶಿಕ್ಷಣ ಸಚಿವ

ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಮತ್ತು ಶಿಕ್ಷಕರ ಹಾಜರಾತಿ ಹಾಗೂ ಶಿಕ್ಷಕರ ನೇಮಕಾತಿ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬಿಗ್​ ಅಪ್ಡೇಟ್​ ನೀಡಿದ್ದಾರೆ . ಪಠ್ಯಕ್ರಮದಲ್ಲಿ ನೀತಿ ವಿಜ್ಞಾನ ವಿಷಯವನ್ನು ಮತ್ತೆ ಪರಿಚಯಿಸುವ ಯೋಜನೆಯೂ ಇದೆ. ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ CET ಮತ್ತು NEET ತರಬೇತಿಯನ್ನು ಒದಗಿಸಲಾಗುವುದು ಎಂದರು.

ಸರ್ಕಾರಿ ಶಾಲೆ ಹಾಜರಾತಿ , ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​ ಅಪ್ಡೇಟ್​ ನೀಡಿದ ಶಿಕ್ಷಣ ಸಚಿವ
ಸಚಿವ ಮಧು ಬಂಗಾರಪ್ಪ
Edited By: ವಿವೇಕ ಬಿರಾದಾರ

Updated on: Jun 10, 2025 | 9:42 PM

ಬಾಗಲಕೋಟೆ, ಜೂನ್​ 10: ಸರ್ಕಾರಿ ಶಾಲಾ (Government School) ದಾಖಲಾತಿ ಮತ್ತು ಶಿಕ್ಷಕರ ನೇಮಕ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಬಿಗ್​ ಅಪ್ಡೇಟ್​ ನೀಡಿದ್ದಾರೆ. ಇನ್ಮುಂದೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಎಐ ಆಧಾರಿತ ಹಾಜರಾತಿ (AI Attendance) ಜಾರಿ ಮಾಡಲಾಗುವುದು. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಎಐ ಆಧಾರಿತ ಹಾಜರಾತಿ ಜಾರಿಯಲ್ಲಿದೆ ಎಂದು ತಿಳಿಸಿದರು.

ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ ಈ ವರ್ಷವೇ ಕೆಲವು ಬದಲಾವಣೆ ಮಾಡುತ್ತೇವೆ. ಒಂದೂವರೆ ಎರಡು ತಿಂಗಳಲ್ಲಿ ಎಲ್ಲ ಗೊತ್ತಾಗಲಿದೆ. ಸರಕಾರಿ ಶಾಲೆಯಲ್ಲೇ 25 ಸಾವಿರ ಮಕ್ಕಳಿಗೆ ಸಿಇಟಿ ಮತ್ತು ನೀಟ್ ತರಬೇತಿ ಕೊಡುತ್ತಿದ್ದೇವೆ. ಆಸಕ್ತ ಎಲ್ಲ ವಿದ್ಯಾರ್ಥಿಗಳಿಗೂ ಸಿಇಟಿ ಮತ್ತು ನೀಟಿ ತರಬೇತಿ ಕೊಡಿ ಅಂತ ಹೇಳಿದ್ದೇನೆ ಎಂದು ಹೇಳಿದರು.

16,500 ಶಿಕ್ಷಕರ ನೇಮಕ

ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ನಂತರ 16, 500 ಶಿಕ್ಷಕರ ನೇಮಕ ಮಾಡುತ್ತೇವೆ. ಆದರ್ಶ ಶಾಲೆಗಳಲ್ಲಿ ಈ ವರ್ಷದಿಂದಲೇ ಪಿಯುಸಿ ಕಾಲೇಜು ಆರಂಭಿಸಲು ಅನುಮತಿ ನೀಡಲಾಗಿದೆ. ಶಾಲೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದರು.

ಇದನ್ನೂ ಓದಿ
KEA ಎಷ್ಟೇ ರೂಲ್ಸ್ ಮಾಡಿದ್ರೂ ನೋ ಯೂಸ್​! ವಿದ್ಯಾರ್ಥಿಗಳಿಂದ ರೂಲ್ಸ್ ಬ್ರೇಕ್
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
KCET Exam ಹಾಲ್ ಟಿಕೆಟ್​ ಬಿಡುಗಡೆ, ಆನ್​ಲೈನ್​ನಲ್ಲಿ ಡೌನ್‌ಲೋಡ್ ಮಾಡಿ
ಇನ್ಮುಂದೆ ಸಿಇಟಿ ಪರೀಕ್ಷೆಗಳಿಗೆ ಆಧಾರ್ ಆಧಾರಿತ ನೋಂದಣಿ: ಕೆಇಎ ಹೊಸ ನಿಯಮ

ಇದನ್ನೂ ಓದಿ: ಒಂದನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಿಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ

ಪಠ್ಯದಲ್ಲಿ ನೈತಿಕ ವಿಜ್ಞಾನ ಅಳವಡಿಕೆಗೆ ಚಿಂತನೆ

ರಾಜ್ಯದಲ್ಲಿ ಬಾಲ ಗರ್ಭಿಣಿಯರ ಪ್ರಕರಣ ಹೆಚ್ಚಾದ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಎರಡೂವರೆ ತಿಂಗಳ ಹಿಂದೆ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಅವರ ಜತೆ ಚರ್ಚಿಸಿದ್ದೇನೆ. ಪಠ್ಯದಲ್ಲಿ ನೈತಿಕ ವಿಜ್ಞಾನ ಅಳವಡಿಸುವ ಬಗ್ಗೆ ಚರ್ಚಿಸಿದ್ದೇವೆ. ಮೊದಲು ನೈತಿಕ ವಿಜ್ಞಾನ ಅಂತ ವಿಷಯ ಇತ್ತು. 10-15 ವರ್ಷದಿಂದ ನೈತಿಕ ವಿಜ್ಞಾನ ಇಲ್ಲ. ಮಕ್ಕಳಲ್ಲೂ ನೈತಿಕ ಇಲ್ಲ ಅದು ಕಳೆದು ಹೋಗಿದೆ. ಈ ವರ್ಷದಿಂದ ಮತ್ತೆ ಅದನ್ನ ಜಾರಿಗೊಳಿಸಲು ತೀರ್ಮಾನ ಮಾಡಲಾಗಿದೆ. ಪಠ್ಯಪುಸ್ತಕ ಕೂಡ ತಯಾರಾಗುತ್ತಿದೆ ಎಂದು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us