AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಎಐ ಕ್ಯಾಮೆರಾಗಳು; ಅಶಿಸ್ತಿನ ಚಾಲನೆ ಮಾಡಿದರೆ ಸಿಕ್ಕಿಬೀಳುವುದು ಖಂಡಿತ!

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ವೇಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಉಪಕ್ರಮವು ಅಪಘಾತಗಳ ಮತ್ತು ಸಾವುನೋವುಗಳ ಸಂಖ್ಯೆ ಕಡಿಮೆ ಮಾಡಲು ಸಹಾಯ ಮಾಡಲಿದೆ ಎಂದು ಭಾವಿಸುತ್ತೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಎಐ ಕ್ಯಾಮೆರಾಗಳು; ಅಶಿಸ್ತಿನ ಚಾಲನೆ ಮಾಡಿದರೆ ಸಿಕ್ಕಿಬೀಳುವುದು ಖಂಡಿತ!
ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಎಐ ಕ್ಯಾಮೆರಾಗಳುImage Credit source: Twitter
ಗಣಪತಿ ಶರ್ಮಾ
|

Updated on: Jul 29, 2023 | 4:16 PM

Share

ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bengaluru Mysuru Expressway) ಸಂಚಾರ ಉಲ್ಲಂಘನೆ ಪತ್ತೆ ಹಚ್ಚಲು ಕೃತಕ ಬುದ್ಧಿಮತ್ತೆ (Artificial Intelligence) ಆಧಾರಿತ ಕ್ಯಾಮೆರಾಗಳ ಪ್ರಾಯೋಗಿಕ ಚಾಲನೆ ಶುಕ್ರವಾರ ಆರಂಭವಾಗಿದೆ. ಈ ಕ್ಯಾಮೆರಾಗಳು ವೇಗದ ಮಿತಿಯನ್ನು ಅಳೆಯುತ್ತವೆ ಮತ್ತು ಅತಿವೇಗ, ಸೀಟ್ ಬೆಲ್ಟ್ ಧರಿಸದಿರುವುದು, ಚಾಲನೆ ವೇಳೆ ಮೊಬೈಲ್ ಫೋನ್‌ಗಳನ್ನು ಬಳಸುವುದು ಮುಂತಾದ ಉಲ್ಲಂಘನೆಗಳನ್ನು ಸೆರೆಹಿಡಿದು ದಾಖಲಿಸಿಕೊಳ್ಳಲಿವೆ.

ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಅಲೋಕ್ ಕುಮಾರ್ ಅವರು ಎಐ ಕ್ಯಾಮೆರಾಗಳ ವೀಡಿಯೊವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ವೇಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಉಪಕ್ರಮವು ಅಪಘಾತಗಳ ಮತ್ತು ಸಾವುನೋವುಗಳ ಸಂಖ್ಯೆ ಕಡಿಮೆ ಮಾಡಲು ಸಹಾಯ ಮಾಡಲಿದೆ ಎಂದು ಭಾವಿಸುತ್ತೇವೆ. ಭಾರತೀಯ ರಸ್ತೆಗಳಲ್ಲಿ ಅತಿವೇಗವೇ ಆಪಘಾತ, ಸಾವುಗಳಿಗೆ ಪ್ರಮುಖ ಕಾರಣ ಎಂದು ಅವರು ಟ್ವೀಟ್​​ನಲ್ಲಿ ಉಲ್ಲೇಖಿಸಿದ್ದಾರೆ.

ಎಕ್ಸ್‌ಪ್ರೆಸ್‌ವೇ ಲೇನ್‌ಗಳಲ್ಲಿ ವೇಗದ ಮಿತಿಯ ಬಗ್ಗೆ ಮಾಹಿತಿ ನೀಡಿದ ಅವರು, ಬಲ ಲೇನ್‌ಗೆ 100 ಕಿಮೀ, ಮಧ್ಯಕ್ಕೆ 80 ಕಿಮೀ ಮತ್ತು ಎಡ ಲೇನ್‌ಗೆ 60 ಕಿಮೀ ಮಿತಿ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇನಲ್ಲಿ150 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿ ಕೈಗೊಳ್ಳಲು ಕೇಂದ್ರಕ್ಕೆ ಪ್ರಸ್ತಾವನೆ: ಸಿಎಂ ಸಿದ್ದರಾಮಯ್ಯ

ಎಐ ಕ್ಯಾಮೆರಾಗಳು ನಂಬರ್ ಪ್ಲೇಟ್ ಅನ್ನು ಸಹ ರೀಡ್ ಮಾಡಲಿದೆಯೇ ಮತ್ತು ಅತಿವೇಗದ ವಾಹನಗಳನ್ನು ಗುರುತಿಸಿ ದತ್ತಾಂಶ ದಾಖಲಿಸಿಡಲಿದೆಯೇ ಎಂದು ಟ್ವಿಟರ್ ಬಳಕೆದಾರರು ಪ್ರಶ್ನಿಸಿದ್ದಾರೆ. ಹಾಗೆ ಮಾಡುತ್ತದೆ ಎಂದಾದಲ್ಲಿ ಅದು ತುಂಬಾ ಒಳ್ಳೆಯ ಉಪಕ್ರಮ ಎಂದು ಉಲ್ಲೇಖಿಸಿದ್ದಾರೆ. ಈ ಟ್ವೀಟ್​​ಗೆ ಕುಮಾರ್ ಸಕಾರಾತ್ಮಕವಾಗಿ ಉತ್ತರಿಸಿದ್ದಾರೆ.

ಕಟ್ಟುನಿಟ್ಟಾದ ಲೇನ್​ ಶಿಸ್ತನ್ನು ಅನುಷ್ಠಾನಗೊಳಿಸಲು ಮತ್ತು ಅತಿ ನಿಧಾನವಾಗಿ ಚಲಿಸುವ ವಾಹನಗಳನ್ನು ನಿಷೇಧಿಸುವಂತೆ ಮತ್ತೊಬ್ಬರು ಬಳಕೆದಾರರು ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ.

ಏತನ್ಮಧ್ಯೆ, ಅಪಘಾತಗಳು ಹೆಚ್ಚಾದ ವರದಿಗಳ ನಂತರ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡ್ಯ ಬಳಿ ಎಕ್ಸ್‌ಪ್ರೆಸ್‌ವೇಯನ್ನು ಪರಿಶೀಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ