ಪದತ್ಯಾಗಕ್ಕೆ ಬಂಪರ್ ಗಿಫ್ಟ್​​: ಸಿದ್ದರಾಮಯ್ಯಗೆ ಮಹತ್ವದ ಸ್ಥಾನಮಾನ ನೀಡಿದ ಹೈಕಮಾಂಡ್

ಯಾವುದೇ ತಂಟೆ ತಗಾದೆ ತೆಗೆಯದೇ ಒಂದೇ ಮಾತಿಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟು ಕೊಟ್ಟ ಸಿದ್ದರಾಮಯ್ಯನವಿರಗೆ ಹೈಕಮಾಂಡ್ ಮಹತ್ವದ ಹುದ್ದೆ ನೀಡಿದೆ. ರಾಜ್ಯಸಭೆ ಆಫರ್ ನಿರಾಕರಿಸಿದ್ದ ಸಿದ್ದರಾಮಯ್ಯನವರಿಗೆ ಎಐಸಿಸಿಯಲ್ಲಿ ಸ್ಥಾನಮಾನ ನೀಡಲಾಗಿದೆ. ಡಿಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮುನ್ನವೆ ಸಿದ್ದರಾಮಯ್ಯನವರಿಗೆ ಮಹತ್ವದ ಹುದ್ದೆ ನೀಡಿ ಎಐಸಿಸಿ ಆದೇಶ ಹೊರಡಿಸಿದೆ. ಏನಿದು ಹುದ್ದೆ? ಎಷ್ಟು ಮಹತ್ವ ಹೊಂದಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ಪದತ್ಯಾಗಕ್ಕೆ ಬಂಪರ್ ಗಿಫ್ಟ್​​: ಸಿದ್ದರಾಮಯ್ಯಗೆ ಮಹತ್ವದ ಸ್ಥಾನಮಾನ ನೀಡಿದ ಹೈಕಮಾಂಡ್
Siddaramaiah And Rahul Gandhi
Edited By:

Updated on: Jun 02, 2026 | 10:59 PM

ನವದೆಹಲಿ, (ಜೂನ್ 02): ರಾಹುಲ್ ಗಾಂಧಿ ನೀಡಿದ್ದ ರಾಜ್ಯಸಭೆ ಆಫರ್ ತಿರಸ್ಕರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿದ್ದರಾಮಯ್ಯಗೆ (Siddaramaiah) ಹೈಕಮಾಂಡ್ ಮಹತ್ವದ ಹುದ್ದೆಯನ್ನು ನೀಡಿದೆ. ಉದಾರ ಅಂತಕರಣದಿಂದ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಮೂಲಕ ಮುತ್ಸದ್ದಿತನ ತೋರಿದ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (congress working committee )ಸದಸ್ಯ ಸ್ಥಾನ ನೀಡಲಾಗಿದೆ. ಹೌದು… ಸಿದ್ದರಾಮಯ್ಯನವರನ್ನು CWC ಸದಸ್ಯರಾಗಿ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆದೇಶ ಹೊರಡಿಸಿದ್ದಾರೆ. ಈ ಕಾರ್ಯಕಾರಿ ಸಮಿತಿ ಪಕ್ಷದ ಪರಮೋಚ್ಚ ನೀತಿ ನಿರೂಪಣಾ ಮಂಡಳಿಯಾಗಿದ್ದು, ಪಕ್ಷದ ಪ್ರಮುಖ ರಾಜಕೀಯ ಕಾರ್ಯತಂತ್ರಗಳ ಅಂತಿಮ ನಿರ್ಧಾರ ಈ ಸಮಿತಿ ಸಭೆಯಲ್ಲಿ ಆಗಲಿದೆ. ಹೀಗಾಗಿ ಸಿದ್ದರಾಮಯ್ಯನವರಿಗೆ ಮಹತ್ವದ ಸ್ಥಾನಮಾನ ಸಿಕ್ಕಂತಾಗಿದೆ.

ಮುಖ್ಯಾಂಶಗಳು

  • ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಕ
  • CWC ಸದಸ್ಯರಾಗಿ ಸಿದ್ದರಾಮಯ್ಯರನ್ನು ನೇಮಕ ಮಾಡಿದ ಎಐಸಿಸಿ
  • ಕಾಂಗ್ರೆಸ್​ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಖರ್ಗೆ ಆದೇಶ

ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸಿದ್ದರಾಮಯ್ಯ ಅವರನ್ನು ನೇಮಿಸಲಾಗಿದ್ದು, ಕಾಂಗ್ರೆಸ್‌ನ ಅತ್ಯುನ್ನತ ಕಾರ್ಯಕಾರಿ ಸಮಿತಿ ಇದಾಗಿದ್ದು, ರಾಷ್ಟ್ರಮಟ್ಟದಲ್ಲಿ ಪಕ್ಷದ ನೀತಿ, ಸಂಘಟನೆ, ಪ್ರಚಾರದ ಕುರಿತು ಕೆಲಸ ಮಾಡಲಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಪತ್ನಿಗೆ ರಾಜ್ಯಸಭಾ ಆಫರ್ ನೀಡಿದ್ದ ರಾಹುಲ್ ಗಾಂಧಿ: ಬೇಡವೆಂದಿದ್ದ ಮಾಜಿ ಸಿಎಂ ಇಟ್ಟಿದ್ದು ಬೇರೆಯೇ ಬೇಡಿಕೆ!

ಖುದ್ದು ರಾಹುಲ್ ಗಾಂಧಿ ಅವರೇ ಸಿದ್ದರಾಮಯ್ಯನವರಿಗೆ ರಾಜ್ಯಸಭೆ ಆಫರ್ ನೀಡಿ ಸಿಎಂ ಸ್ಥಾನ ಬಿಟ್ಟು ಕೊಡುವಂತೆ ಕೇಳಿಕೊಂಡಿದ್ದರು. ಆದ್ರೆ, ಸಿದ್ದರಾಮಯ್ಯನವರು ರಾಜ್ಯಸಭೆ ಆಫರ್ ನಿರಾಕರಿಸಿ ನೇರವಾಗಿ ದೆಹಲಿಯಿಂದ ಬಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ರಾಜ್ಯಸಭೆ ಆಫರ್ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಬಹಿರಂಗಪಡಿಸಿದ್ದರು. ಅಲ್ಲದೇ ರಾಜ್ಯಸಭೆಗೆ ಹೋಗಲ್ಲ ಎಂದು ಹೈಕಮಾಂಡ್ ಆಫರ್ ತಿರಸ್ಕರಿಸಿದ್ದರು. ಹೀಗಾಗಿ ಅವರನ್ನು ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

CWC ಸದಸ್ಯತ್ವದ ಮಹತ್ವವೇನು?

CWC ಕಾಂಗ್ರೆಸ್ ಪಕ್ಷದ ಉನ್ನತ ಮಟ್ಟದ ಸಮಿತಿಯಾಗಿದ್ದು, ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಿತಿ ಇದಾಗಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನ ಶಕ್ತಿಶಾಲಿ ಸ್ಥಾನಮಾನವಾಗಿದ್ದು, ಕಾರ್ಯಕಾರಿ ಸಮಿತಿಯು ಪಕ್ಷದ ಪರಮೋಚ್ಚ ನೀತಿ ನಿರೂಪಣಾ ಮಂಡಳಿ. ಪಕ್ಷದ ಪ್ರಮುಖ ರಾಜಕೀಯ ಕಾರ್ಯತಂತ್ರಗಳ ಅಂತಿಮ ನಿರ್ಧಾರಗಳು ಈ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆಗುತ್ತವೆ. ಸದಸ್ಯರಾಗುವುದರಿಂದ ಕೇವಲ ಪ್ರಾದೇಶಿಕ ನಾಯಕತ್ವ ಮಾತ್ರವಲ್ಲದೆ, ರಾಷ್ಟ್ರಮಟ್ಟದಲ್ಲಿ ದೊಡ್ಡ ಮನ್ನಣೆ ಮತ್ತು ಪ್ರಭಾವ ಸಿಗುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:46 pm, Tue, 2 June 26

Harish GR
Follow Us