ಬಾಯ್ತಪ್ಪಿ ಇಂದಿರಾಗಾಂಧಿ ಬದಲು ಸೋನಿಯಾಗಾಂಧಿಗೆ ಶೃದ್ಧಾಂಜಲಿ ಸಲ್ಲಿಸಿದ ಖರ್ಗೆ

ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಇಂದು(ಅಕ್ಟೋಬರ್ 31) ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಹಾಗೂ ಮಾಜಿ ಉಪಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಕಾರ್ಯಕ್ರಮ ನಡೆಯಿತು. ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಡವಟ್ಟಿನ ಮೇಲೆ ಎಡವಟ್ಟು ಮಾಡಿಕೊಂಡಿದ್ದಾರೆ.

ಬಾಯ್ತಪ್ಪಿ ಇಂದಿರಾಗಾಂಧಿ ಬದಲು ಸೋನಿಯಾಗಾಂಧಿಗೆ ಶೃದ್ಧಾಂಜಲಿ ಸಲ್ಲಿಸಿದ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Follow us
Sunil MH
| Updated By: ರಮೇಶ್ ಬಿ. ಜವಳಗೇರಾ

Updated on:Oct 31, 2024 | 4:52 PM

ಬೆಂಗಳೂರು, (ಅಕ್ಟೋಬರ್ 31): ಇಂದಿರಾಗಾಂಧಿಯವರ ಪುಣ್ಯಸ್ಮರಣೆ ಹಾಗೂ ಮಾಜಿ ಉಪಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಡವಟ್ಟು ಮಾಡಿಕೊಂಡಿದ್ದಾರೆ. ಭಾರತದ ಇಬ್ಬರು ಮಹಾನ್ ಚೇತನಗಳಿಗೆ ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಖರ್ಗೆ, ಮಾತಿನ ಭರದಲ್ಲಿ ಇಂದಿರಾಗಾಂಧಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು ಎನ್ನುವ ಬದಲು ಬಾಯ್ತಪ್ಪಿನಿಂದ ಸೋನಿಯಾ ಗಾಂಧಿ ಎಂದು ಎಂದಿದ್ದಾರೆ. ತಪ್ಪಿನ ಅರಿವಾಗಿ ಕೂಡಲೇ ಸಾರಿ ಕೇಳಿ, ಇಂದಿರಾಗಾಂಧಿ ಅವರಿಗೆ ಶ್ರದ್ಧಾಂಜಲಿ ಎಂದರು.

ಮಾತು ಮುಂದುವರಿಸಿದ ಖರ್ಗೆ, ಶ್ರೀಮತಿ ಇಂದಿರಾಗಾಂಧಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಈ ಇಬ್ಬರು ಮಹಾಪುರುಷರು ನಮಗೆ ಪ್ರೇರಣೆ. ಮಹಾಚೇತನಗಳಿಂದ ಪ್ರೇರಣೆ ಪಡೆಯಲು ನಾವಿಲ್ಲಿ ಸೇರಿದ್ದೇವೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಜವಾಹರಲಾಲ್ ಅವರ ಜೊತೆ ಗಟ್ಟಿಯಾಗಿ ನಿಂತ ನಾಯಕ. ಹೈದ್ರಾಬಾದ್ ಕರ್ನಾಟಕಕ್ಕೆ ಲೇಟ್ ಆಗಿ ನಮಗೆ ಸ್ವಾತಂತ್ರ್ಯ ಸಿಕ್ತು. ವಲ್ಲಭಭಾಯಿ ಪಟೇಲ್ ಅವರು ಒಗ್ಗೂಡಿಸುವುದಕ್ಕೆ ಪ್ರಯತ್ನ ಪಟ್ಟರು. ಆ ಒಗ್ಗಟ್ಟನ್ನ ಕಾಪಾಡುವುದಕ್ಕೆ ಇಂದಿರಾಗಾಂಧಿ, ಸೋನಿಯಾಗಾಂಧಿ , ರಾಹುಲ್ ಗಾಂಧಿ ಪ್ರಾಣ ಕೊಟ್ಟರು ಎನ್ನುವ ಮೂಲಕ ಎಡವಟ್ಟಿನ ಮೇಲೆ ಎಡವಟ್ಟು ಮಾಡಿಕೊಂಡರು. ಬಳಿಕ ಸಾವರಿಸಿಕೊಂಡ ಖರ್ಗೆ, ದಿನ ಹೇಳಿ ಹೇಳಿ ಈ ರೀತಿ ಆಗುತ್ತಿದೆ. ಮೀಡಿಯಾದವರು ಇದನ್ನ ನೀವು ಹೈಲೈಟ್ ಮಾಡಬೇಡಿ ಎಂದು ಮನವಿ ಮಾಡಿದರು.

ಇದನ್ನೂ ಓದಿ: ಖರ್ಗೆ ಖಡಕ್​ ಮಾತಿನ ನಂತರ ಶಕ್ತಿ ಯೋಜನೆ ಬಗ್ಗೆ ಡಿಕೆಶಿ ವರಸೆ ಬದಲು

ನಾನು ಮಾತನಾಡಿದ ಮೇಲೆ ಯಾರೂ ಮಾತನಾಡಬೇಡಿ

ನಾನು ಮಾತನಾಡಿದ ಮೇಲೆ ಯಾರೂ ಮಾತನಾಡುವಂತಿಲ್ಲ ಎಂದು ಸಭೆ ಆಯೋಜಕರಿಗೆ ಮಲ್ಲಿಕಾರ್ಜುನ ಖರ್ಗೆ ಸೂಚಿಸಿದರು. ಇದಕ್ಕೂ ಮೊದಲು ವೀರಪ್ಪ ಮೊಯ್ಲಿ ಮಾತನಾಡಿದ್ರು, ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ನಂತರ ಡಿಸಿಎಂ ಡಿಕೆ ಶಿವಕುಮಾರ ಮಾತನಾಡ್ತಾರೆ ಎಂದು ಸಂಸದ ಜಿಸಿ ಚಂದ್ರಶೇಖರ್ ಹೇಳಿದರು. ಈ ವೇಳೆ ಎಐಸಿಸಿ ಅಧ್ಯಕ್ಷರು ಮಾತನಾಡಲಿ ಬಳಿಕ ಮಾತನಾಡ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು. ಆದರೆ ಭಾಷಣ ಆರಂಭಿಸುವ ಮುನ್ನ ನಾನು ಮಾತನಾಡಿದ ಮೇಲೆ ಯಾರೂ ಮಾತನಾಡುವಂತಿಲ್ಲ ಎಂದು ಖರ್ಗೆ ಹೇಳಿದರು. ಅಷ್ಟಾದರೂ ಖರ್ಗೆ ಭಾಷಣ ಬಳಿಕ ಡಿಕೆ ಶಿವಕುಮಾರ ಮಾತನಾಡಿದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಹಾಗೂ ಮಾಜಿ ಉಪಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್​ ನಾಯಕರು ಭಾಗವಹಿಸಿದ್ದರು.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:52 pm, Thu, 31 October 24

ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ