Karnataka Assembly Poll 2023: AIMIM ಪಕ್ಷದ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ ಓವೈಸಿ

|

Updated on: Mar 06, 2023 | 3:44 PM

ಕರ್ನಾಟಕ ವಿಧಾನಸಭೆ ಚುನಾವಣೆಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮೂರು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Karnataka Assembly Poll 2023: AIMIM ಪಕ್ಷದ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ ಓವೈಸಿ
ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ
Follow us on

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ (Karnataka Assembly Election) ದಿನಾಂಕ ಘೋಷಣೆಗೆ ರಾಜಕೀಯ ಪಕ್ಷಗಳು ಕಾಯುತ್ತಿವೆ. ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸುತ್ತಿವೆ. ಈ ನಡುವೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮೂರು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನುಳಿದ ಅಭ್ಯರ್ಥಿಗಳ ಪಟ್ಟಿ ಸಿದ್ದವಾಗುತ್ತಿದೆ.

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ 3 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್​ 5 ರಂದು ಪ್ರಕಟಿಸಿದ್ದಾರೆ. ಬೆಳಗಾವಿ ಉತ್ತರದಿಂದ, ಲತೀಫ್ಖಾನ್ ಅಮೀರ್ಖಾನ್ ಪಠಾಣ್, ಹುಬ್ಬಳ್ಳಿ-ಧಾರವಾಡ ಪೂರ್ವದಿಂದ ದುರ್ಗಪ್ಪ ಕಾಶಪ್ಪ ಬಿಜವಾಡ ಮತ್ತು ಬಿಜಾಪುರ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದಿಂದ ಅಲ್ಲಾಬಕ್ಷ್ ಮೆಹಬೂಬ್ ಸಾಬ್ ಸ್ಪರ್ಧಿಸಲಿದ್ದಾರೆ. ಟಿಕೆಟ್ ಘೋಷಣೆ ಬೆನ್ನಲ್ಲೆ ದುರ್ಗಪ್ಪ ಕಾಶಪ್ಪ ಬಿಜವಾಡ ಬೃಹತ್ ಬೈಕ್ ರ್ಯಾಲಿ ನಡೆಸಿದ್ದಾರೆ. ಎಐಎಂಐಎಂ ಈ ಹಿಂದೆ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಕಾರ್ಪೂರೇಟ್​ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು.

ಈ ಬಗ್ಗೆ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಮಾತನಾಡಿ ಓವೈಸಿ ಕಾರ್ನಾಟಕ ಮತ್ತು ರಾಜಸ್ಥಾನದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಮುಂದೆ ಅವರು ಎರಡು ರಾಜ್ಯ ಸರಣಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:39 pm, Mon, 6 March 23