ರ‍್ಯಾಂಪ್ ವಾಕ್ ಆದ ಮೇಲೆ ಕುಸಿದು ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವು

|

Updated on: Oct 19, 2019 | 4:27 PM

ಬೆಂಗಳೂರು: ರ‍್ಯಾಂಪ್ ವಾಕ್ ಅಭ್ಯಾಸ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪೀಣ್ಯದ ಏಮ್ಸ್ ಕಾಲೇಜಿನಲ್ಲಿ ನಡೆದಿದೆ. ಎಂಬಿಎ ಓದುತ್ತಿದ್ದ ಶಾಲಿನಿ (21) ಮೃತ ದುರ್ದೈವಿ.ಕಾಲೇಜ್​ನ ಫ್ರೆಶರ್ಸ್​ ಡೇಗೆ ರ‍್ಯಾಂಪ್ ವಾಕ್ ಪ್ರಾಕ್ಟೀಸ್ ಮಾಡುತ್ತಿದ್ದರು. ಈ ವೇಳೆ ಸ್ಟೇಜ್​ ಮೇಲೆ ಶಾಲಿನಿ ಕುಸಿದು ಬಿದ್ದಿದ್ದಾಳೆ. ತಕ್ಷಣ ಶಾಲಾ ಸಿಬ್ಬಂದಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ದಾರಿ ಮಧ್ಯೆಯೇ ಮೃತಪಟ್ಟಿರುವ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರ‍್ಯಾಂಪ್ ವಾಕ್ ಆದ ಮೇಲೆ ಕುಸಿದು ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವು
Follow us on

ಬೆಂಗಳೂರು: ರ‍್ಯಾಂಪ್ ವಾಕ್ ಅಭ್ಯಾಸ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪೀಣ್ಯದ ಏಮ್ಸ್ ಕಾಲೇಜಿನಲ್ಲಿ ನಡೆದಿದೆ.

ಎಂಬಿಎ ಓದುತ್ತಿದ್ದ ಶಾಲಿನಿ (21) ಮೃತ ದುರ್ದೈವಿ.ಕಾಲೇಜ್​ನ ಫ್ರೆಶರ್ಸ್​ ಡೇಗೆ ರ‍್ಯಾಂಪ್ ವಾಕ್ ಪ್ರಾಕ್ಟೀಸ್ ಮಾಡುತ್ತಿದ್ದರು. ಈ ವೇಳೆ ಸ್ಟೇಜ್​ ಮೇಲೆ ಶಾಲಿನಿ ಕುಸಿದು ಬಿದ್ದಿದ್ದಾಳೆ. ತಕ್ಷಣ ಶಾಲಾ ಸಿಬ್ಬಂದಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ದಾರಿ ಮಧ್ಯೆಯೇ ಮೃತಪಟ್ಟಿರುವ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.