ಬೆಂಗಳೂರಿನಿಂದ ಹೊರಟ ಐರಾವತ ಬಸ್ ಅರಣ್ಯಕ್ಕೆ ನುಗ್ಗಿ, ಮರಕ್ಕೆ ಡಿಕ್ಕಿ: ಚಾಲಕ ಸ್ಥಳದಲ್ಲೇ ದುರ್ಮರಣ
Airavat ksrtc bus accident: ಚಾಲಕನ ನಿಯಂತ್ರಣ ತಪ್ಪಿದ ಐರಾವತ ಬಸ್ ಅರಣ್ಯಕ್ಕೆ ನುಗ್ಗಿದೆ. ಮರಕ್ಕೆ ಬಸ್ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿರಾಜಪೇಟೆ: ಇಂದು ಬೆಳಗ್ಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಅರಣ್ಯಕ್ಕೆ ನುಗ್ಗಿದ ಐರಾವತ ಬಸ್, ಮರಕ್ಕೆ ಬಸ್ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಬೆಂಗಳೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಐರಾವತ ಬಸ್ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಪೆರುಂಬಾಡಿ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಬ್ರೇಕ್ ವಿಫಲವಾಗಿ ಅಪಘಾತವಾಗಿರುವ ಅನುಮಾನ ವ್ಯಕ್ತವಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಐರಾವತ ಬಸ್ ಅರಣ್ಯಕ್ಕೆ ನುಗ್ಗಿದೆ. ಮರಕ್ಕೆ ಬಸ್ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಚಾಲಕನನ್ನು ಅಪಘಾತಕ್ಕೀಡಾದ ಬಸ್ನಿಂದ ಹೊರತೆಗೆಯಲು ಹರ ಸಾಹಸ ಪಟ್ಟಿದ್ದಾರೆ.
(Airavat ksrtc bus from bangalore accident at virajpet bus driver spot death)
Published On - 9:49 am, Mon, 19 July 21