Aero India 2021: ಆಗಸದಲ್ಲಿ ಆತ್ಮನಿರ್ಭರ ಪರಿಕಲ್ಪನೆ ಮೂಡಿಸಿದ ಏರ್​ಕ್ರಾಫ್ಟ್!

Aero India 2021: ‘ಏರೋ ಇಂಡಿಯಾ 2021’ರಲ್ಲಿ ನಡೆದ Flypast ವೇಳೆ ಏರ್​ಕ್ರಾಫ್ಟ್​ಗಳು ಆತ್ಮನಿರ್ಭರ ಪರಿಕಲ್ಪನೆಯನ್ನು ಆಗಸದಲ್ಲಿ ಮೂಡಿಸುವೆ.

Aero India 2021: ಆಗಸದಲ್ಲಿ ಆತ್ಮನಿರ್ಭರ ಪರಿಕಲ್ಪನೆ ಮೂಡಿಸಿದ ಏರ್​ಕ್ರಾಫ್ಟ್!
ಏರೋ ಇಂಡಿಯಾ 2021
Follow us
Skanda
|

Updated on:Feb 03, 2021 | 12:02 PM

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ‘ಏರೋ ಇಂಡಿಯಾ 2021’ರಲ್ಲಿ ನಡೆದ Flypast ವೇಳೆ ಏರ್​ಕ್ರಾಫ್ಟ್​ಗಳು ಆತ್ಮನಿರ್ಭರ ಪರಿಕಲ್ಪನೆಯನ್ನು ಆಗಸದಲ್ಲಿ ಮೂಡಿಸುವ ಮೂಲಕ ಕೇಂದ್ರ ಸರ್ಕಾರದ ಬಹು ಆಕಾಂಕ್ಷಿ ಯೋಜನೆಯ ಮಹತ್ವ ಸಾರಿದವು.

ಇತ್ತೀಚೆಗಷ್ಟೇ ಆಕ್ಸ್​ಫರ್ಡ್ ಭಾಷೆಗಳಲ್ಲಿ​, ಆತ್ಮನಿರ್ಭರತಾ ಪದವನ್ನು ವರ್ಷದ ಹಿಂದಿ ಪದವೆಂದು ಘೋಷಿಸಿದೆ. ಇದೀಗ ಏರೋ ಇಂಡಿಯಾ 2021ರಲ್ಲಿ ಕೂಡಾ ಆತ್ಮನಿರ್ಭರ ಪರಿಕಲ್ಪನೆಗೆ ಆದ್ಯತೆ ನೀಡಲಾಗಿದೆ. ಏರ್​ ಶೋ ಉದ್ಘಾಟಿಸುವ ವೇಳೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಆತ್ಮನಿರ್ಭರ ಭಾರತದ ಆಲೋಚನೆಯ ಕುರಿತು ಮಾತನಾಡಿದ್ದರು.

ಭಾರತವು ಅತ್ಯುತ್ಕೃಷ್ಟ ಯುದ್ಧ ವಿಮಾನಗಳನ್ನು ತಯಾರಿಸುವ ಸಾಮರ್ಥ್ಯ ಹೊಂದಿದೆ. ಇದು ಭಾರತ ಸ್ವಾವಲಂಬಿ ಆಗಿರುವುದರ ಸಂಕೇತ. ಇದು ನಮ್ಮ ದೇಶಕ್ಕೆ ಹೆಮ್ಮೆಯಷ್ಟೇ ಅಲ್ಲದೇ, ಬೇರೆ ದೇಶಗಳಿಗೆ ಕೊಡುವ ಸಂದೇಶವೂ ಆಗಿದೆ ಎಂದು ರಕ್ಷಣಾ ಸಚಿವರು ಹೇಳಿದ್ದರು.

ಈ ಬಾರಿ ಒಟ್ಟು 63 ವಿಮಾನಗಳಿಂದ ಪ್ರದರ್ಶನ ನಡೆಯಲಿದ್ದು ದಿನಕ್ಕೆ ಎರಡು ಬಾರಿ 42 ವಿಮಾನಗಳು ಹಾರಾಟ ನಡೆಸಿ ವೈಮಾನಿಕ ಪ್ರದರ್ಶನ ನೀಡಲಿವೆ. ಡಕೋಟಾ, ಸುಖೋಯ್, ರಫೆಲ್, ಎಲ್​ಸಿಹೆಚ್, ಎಲ್​ಯುಎಚ್, ಜಾಗ್ವಾರ್, ಹಾಕ್ ಸೇರಿ ಇನ್ನಿತರ ಫೈಟರ್ ಜೆಟ್ ಏರ್ ಕ್ರಾಫ್ಟ್, ಹೆಲಿಕಾಫ್ಟರ್​ಗಳಿಂದ ಪ್ರದರ್ಶನ ನಡೆಯಲಿದೆ.

Atmanirbharta word in oxford languages 2020 ಆತ್ಮನಿರ್ಭರತಾ ಪದ ಆಕ್ಸ್​ಫರ್ಡ್ ಭಾಷಾ ಪಟ್ಟಿಗೆ ಸೇರ್ಪಡೆಯಾಯ್ತು!

Published On - 11:58 am, Wed, 3 February 21

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ