Aishwarya Amartya Reception: ಐಶ್ವರ್ಯಾ-ಅಮರ್ತ್ಯ ಆರತಕ್ಷತೆಗೆ ರಾಹುಲ್, ಪ್ರಿಯಾಂಕ ಸೇರಿ ಗಣ್ಯಾತಿಗಣ್ಯರು ಭಾಗಿ
ಪ್ರೇಮಿಗಳ ದಿನದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಡಿಕೆಶಿ ಪುತ್ರಿ ಐಶ್ವರ್ಯಾ ಹಾಗೂ ಅಮರ್ಥ್ಯ ಹೆಗ್ಡೆ ಆರತಕ್ಷತೆ ಅದ್ಧೂರಿಯಾಗಿ ನಡೆಯಿತು. ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ ಗಣ್ಯಾತಿಗಣ್ಯರು ಆಗಮಿಸಿ ನವ ವಧುವರರಿಗೆ ಹಾರೈಸಿದ್ರು.

ಬಣ್ಣ ಬಣ್ಣದ ದೀಪಾಲಂಕಾರ.. ಕಲರ್ ಫುಲ್ ಆಗಿ ಕಂಗೊಳಿಸುತ್ತಿರುವ ರೆಸಾರ್ಟ್.. ಆರತಕ್ಷತೆ ವೇದಿಕೆ ಒಂದು ಕಡೆಯಾದ್ರೆ, ಮತ್ತೊಂದೆಡೆ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ ಘಟಾನುಘಟಿ ನಾಯಕರ ಆಗಮನ ಗಣ್ಯಾತಿಗಣ್ಯರಿಂದ ತುಂಬಿರುವ ರೆಸಾರ್ಟ್. ಅಂದಹಾಗೆ ಇಂತಹ ಅದ್ದೂರಿ ಆರತಕ್ಷತೆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಅಮರ್ತ್ಯ ಹೆಗ್ಡೆ ಆರತಕ್ಷತೆ.
ಕೆಲ ದಿನಗಳ ಹಿಂದೆಯಷ್ಟೇ ಡಿಕೆಶಿ ಪುತ್ರಿ ಮತ್ತು ಮಾಜಿ ಸಿಎಂ ಎಸ್ಎಂ ಕೃಷ್ಣ ಮೊಮ್ಮಗನ ಮದುವೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನೆರವೇರಿತ್ತು. ಇದೀಗ ನವಜೋಡಿಯ ಆರತಕ್ಷತೆ ದೇವನಹಳ್ಳಿ ಬಳಿಯ ರೆಸಾರ್ಟ್‌ವೊಂದರಲ್ಲಿ ನಿನ್ನೆ ನಡೆಯಿತು. ನೂತನ ದಂಪತಿಗೆ ಹಾರೈಸಲು ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಕೆ.ಸಿ.ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಆರತಕ್ಷತೆಯಲ್ಲಿ ಭಾಗವಹಿಸಿ ನವಜೋಡಿಗೆ ಶುಭ ಹಾರೈಸಿದ್ರು.

ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಅಮರ್ತ್ಯ ಹೆಗ್ಡೆ ಆರತಕ್ಷತೆಯಲ್ಲಿ ಭಾಗಿಯಾದ ಸಿದ್ದರಾಮಯ್ಯ ಹಾಗೂ ಇತರರು.

ಏರ್ಪೋರ್ಟ್ನಲ್ಲಿ ರಾಹುಲ್ ಗಾಂಧಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ

ಐಶ್ವರ್ಯ ಮತ್ತು ಅಮರ್ತ್ಯ ಹೆಗ್ಡೆ ಆರತಕ್ಷತೆಗೆ ಬಂದ ರಾಹುಲ್ ಗಾಂಧಿಯವರಿಗೆ ಅದ್ದೂರಿ ಸ್ವಾಗತ
ಇನ್ನು ಈ ಅದ್ದೂರಿ ಆರತಕ್ಷತೆ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ, ಸಚಿವರಾದ ಆರ್ ಅಶೋಕ್, ನಾರಾಯಣಗೌಡ, ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಾಯಕರು ಭಾಗವಹಿಸಿ ದಂಪತಿಗೆ ಶುಭ ಕೋರಿದ್ರು.
Published On - 7:01 am, Thu, 18 February 21