ಬೆಳಗಾವಿ: ಅಕ್ಕಲಕೋಟ, ಜತ್ ಹಾಗೂ ಸೊಲ್ಲಾಪುರ ಕರ್ನಾಟಕಕ್ಕೆ ಸೇರಬೇಕು ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿಕೆಗೆ ಕರ್ನಾಟಕ ಮಹಾರಾಷ್ಟ್ರ ಗಡಿ ಭಾಗದ ಕನ್ನಡಿಗರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಹಾರಾಷ್ಟ್ರದ ಜತ್ ತಾಲೂಕಿನ ಕನ್ನಡ ಹೋರಾಟಗಾರ ಮಹದೇವ ಅಂಕಲಗಿ, 44 ಹಳ್ಳಿಗಳ ಪರ ಮುಖ್ಯಮಂತ್ರಿಯವರು ಮಾತನಾಡಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಮಹಾಜನ್ ವರದಿ ಪ್ರಕಾರ ಜತ್ ತಾಲೂಕಿನ 44 ಹಳ್ಳಿಗಳು ಕರ್ನಾಟಕಕ್ಕೆ ಸೇರಬೇಕು. ನಾವು ಮಹಾರಾಷ್ಟ್ರದಲ್ಲಿದ್ದರೂ ನಮ್ಮ ಮೇಲೆ ಪ್ರೇಮ ತೋರಿಸಿದ್ದೀರಿ. ಗಡಿ ಭಾಗದಲ್ಲಿ ಕನ್ನಡಿಗರ ಅಭಿವೃದ್ಧಿಗೆ ಅನುದಾನ ನೀಡಿರುವುದಕ್ಕೆ ಆಭಾರಿಯಾಗಿದ್ದೇವೆ. ಜತ್ ತಾಲೂಕು ಯಾವಾಗಲೂ ತೀವ್ರ ಬರಗಾಲದಲ್ಲಿಯೇ ಇದೆ. ಸರ್ಕಾರ (Maharashtra Govt) ನಮ್ಮನ್ನು ನಿರ್ಲಕ್ಷ್ಯ ಮಾಡುತ್ತಲೇ ಬಂದಿದೆ ಎಂದು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು
ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‌ಗಳಿಗೆ ಕಪ್ಪು ಮಸಿ ಬಳಿದ ಕಿಡಿಗೇಡಿಗಳು
ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‌ಗಳಿಗೆ ಕಪ್ಪು ಮಸಿ ಬಳಿದ ಘಟನೆ ನಡೆದಿರುವ ಹಿನ್ನೆಲೆ ಬೆಳಗಾವಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಬಿಗಿ ಭದ್ರತಾ ಕ್ರಮ ಕೈಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಮಹಾರಾಷ್ಟ್ರದ ಬಸ್‌ಗಳು ನಿಲ್ಲುವ ಸ್ಥಳಗಳಲ್ಲಿ ಒಂದು ಡಿಆರ್ ತುಕಡಿ ನಿಯೋಜಿಸಲಾಗಿದೆ. ಬಸ್ ನಿಲ್ದಾಣ ಸೇರಿ ಸುತ್ತಮುತ್ತ 50ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ. ಅಲ್ಲದೆ ಮಹಾರಾಷ್ಟ್ರ ಬಸ್‌ಗಳಿಗೆ ಕಪ್ಪು ಕಸಿ ಬಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುವ ಬಸ್‌ಗಳು ತಾತ್ಕಾಲಿಕ ಸ್ಥಗಿತ
ಬೆಳಗಾವಿ-ಮಹಾರಾಷ್ಟ್ರ ಗಡಿಯಲ್ಲಿ ಪರಿಸ್ಥಿತಿ ತೀವ್ರ ಉದ್ವಿಗ್ನವಾಗಿರುವ ಹಿನ್ನೆಲೆ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುವ ಬಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಹಾರಾಷ್ಟ್ರ ಬಸ್‌ಗಳಿಗೂ ಕಪ್ಪು ಮಸಿ ಬಳಿಯೂ ಭೀತಿ ಹಿನ್ನೆಲೆ ಮಹಾರಾಷ್ಟ್ರ ರಸ್ತೆ ಸಾರಿಗೆ ಸಂಸ್ಥೆಯು ರಾಜ್ಯದ ಹಲವು ಭಾಗಗಳಿಗೆ ಸಂಚರಿಸುತ್ತಿದ್ದ 300ಕ್ಕೂ ಹೆಚ್ಚು ಮಹಾರಾಷ್ಟ್ರ ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅದಾಗ್ಯೂ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಎಂದಿನಂತೆ ಬಸ್‌ಗಳು ಸಂಚಾರ ನಡೆಸುತ್ತಿವೆ.
ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:18 pm, Fri, 25 November 22