AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ಕಾರ್ಯಾಚರಿಸುತ್ತಿದ್ದ ಶಂಕಿತ ಅಲ್ ಕೈದಾ ಭಯೋತ್ಪಾದಕಿ ಶಮಾ ಪರ್ವೀನ್ ಬಂಧಿಸಿದ ಗುಜರಾತ್ ಎಟಿಎಸ್

ಗುಜರಾತ್ ಭಯೋತ್ಪಾದನೆ ನಿಗ್ರಹ ದಳವು ಅಲ್-ಕೈದಾ ಜೊತೆ ಸಂಪರ್ಕ ಹೊಂದಿರುವ ಆರೋಪದಲ್ಲಿ ಬೆಂಗಳೂರಿನ ಶಮಾ ಪರ್ವೀನ್ ಎಂಬಾಕೆಯನ್ನು ಬಂಧಿಸಿದೆ. ಆಕೆ ಉಗ್ರ ಚಟುವಟಿಕೆಗಳಲ್ಲಿ ಶಾಮೀಲಾಗಿದ್ದಳು ಮತ್ತು ಆನ್​ಲೈನ್​ನಲ್ಲಿ ಜಿಹಾದಿ ಕೃತ್ಯಗಳಲ್ಲಿ ತೊಡಗಿದ್ದಳು ಎನ್ನಲಾಗಿದೆ. ಇನ್‌ಸ್ಟಾಗ್ರಾಮ್‌ ಮೂಲಕ ಜಿಹಾದಿ ವಿಷಯ ಹಂಚಿಕೊಂಡು ಯುವಕರನ್ನು ಪ್ರಚೋದಿಸುತ್ತಿದ್ದಳು ಎಂದು ಗುಜರಾತ್ ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನಿಂದ ಕಾರ್ಯಾಚರಿಸುತ್ತಿದ್ದ ಶಂಕಿತ ಅಲ್ ಕೈದಾ ಭಯೋತ್ಪಾದಕಿ ಶಮಾ ಪರ್ವೀನ್ ಬಂಧಿಸಿದ ಗುಜರಾತ್ ಎಟಿಎಸ್
ಸಮಾ ಪರ್ವೀನ್
Ganapathi Sharma
|

Updated on:Jul 31, 2025 | 8:56 AM

Share

ಅಹಮದಾಬಾದ್, ಜುಲೈ 30: ಅಲ್ ಕೈದಾ (Al Qaeda) ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪದಲ್ಲಿ ಶಮಾ ಪರ್ವೀನ್ (Sama Parveen) ಎಂಬಾಕೆಯನ್ನು ಗುಜರಾತ್ ಭಯೋತ್ಪಾದನೆ ನಿಗ್ರಹ ದಳದ (Gujrat ATS) ಪೊಲೀಸರು ಬೆಂಗಳೂರಿನಿಂದ ಬಂಧಿಸಿದ್ದಾರೆ. ಈಕೆ ದೇಶ ವಿರೋಧಿ ಕೃತ್ಯಗಳನ್ನು ಮಾಡುವ ಮೂಲಕ ಜಿಹಾದಿ ಚಟುವಟಿಕೆಗಳಲ್ಲಿ ಶಾಮೀಲಾಗಿದ್ದಳು ಎಂಬ ಆರೋಪವಿದೆ. ಗುಜರಾತ್ ಎಟಿಎಸ್ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಈ ಹಿಂದೆ ಬಂಧಿಸಲಾದ ನಾಲ್ವರು ಭಯೋತ್ಪಾದಕರೊಂದಿಗೆ ಶಮಾ ಪರ್ವೀನ್ ಸಂಪರ್ಕದಲ್ಲಿದ್ದಳು. ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದ ಇನ್‌ಸ್ಟಾಗ್ರಾಂ ಗುಂಪಿನಲ್ಲಿ ಸಕ್ರಿಯಳಾಗಿದ್ದಳು ಮತ್ತು ದೇಶ ವಿರೋಧಿ ವೀಡಿಯೊಗಳನ್ನು ಅಪ್‌ಲೋಡ್ ಮಾಡುವ ಮೂಲಕ ಯುವಕರನ್ನು ಜಿಹಾದಿ ಕೃತ್ಯಗಳಿಗೆ ಪ್ರಚೋದಿಸುತ್ತಿದ್ದಳು.

ಶಮಾ ಪರ್ವೀನ್ ಭಯೋತ್ಪಾದಕ ಚಟುವಟಿಕೆಗಳಲ್ಲಿ ಶಾಮಿಲಾಗಿರುವುದು ರಹಸ್ಯ ತನಿಖೆಯಲ್ಲಿ ತಿಳಿದುಬಂದಿದೆ. ಆನ್‌ಲೈನ್ ವೇದಿಕೆಗಳಲ್ಲಿ ಜಿಹಾದಿ ಪಿತೂರಿ ನಡೆಸಿದ್ದಾಗಿ ವಿಚಾರಣೆ ವೇಳೆ ಆಕೆ ಒಪ್ಪಿಕೊಂಡಿದ್ದಾಳೆ ಎಂದು ಗುಜರಾತ್ ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.

ಶಮಾ ಪರ್ವೀನ್ ಆನ್​​ಲೈನ್ ಮೂಲಕ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ತನಿಖೆಯ ಸಮಯದಲ್ಲಿ ಆಕೆಯಿಂದ ವಿವರವಾದ ಪುರಾವೆಗಳು ಮತ್ತು ಡಿಜಿಟಲ್ ಡೇಟಾವನ್ನು ವಶಪಡಿಸಿಕೊಳ್ಳಲಾಗಿದೆ. ಈಗ ಹೆಚ್ಚಿನ ಮಾಹಿತಿಯನ್ನು ಪಡೆಯಲು ಆಂತರಿಕ ವಿಚಾರಣೆಯನ್ನು ಪ್ರಾರಂಭಿಸುತ್ತಿದೆ ಎಂದು ಎಟಿಎಸ್ ತಿಳಿಸಿದೆ.

ಬಂಧಿತ ಭಯೋತ್ಪಾದಕರ ವಿಚಾರಣೆ ವೇಳೆ ಹೊರಬಂದ ರಹಸ್ಯ

ಅಲ್ ಕೈದಾ ಜೊತೆ ನಂಟು ಹೊಂದಿರುವ ನಾಲ್ವರನ್ನು ಈ ಹಿಂದೆ ಗುಜರಾತ್ ಎಟಿಎಸ್ ಬಂಧಿಸಿತ್ತು. ಬಂಧಿತ ನಾಲ್ವರಲ್ಲಿ ಇಬ್ಬರು ಗುಜರಾತ್‌ನ ಅಹಮದಾಬಾದ್ ಮತ್ತು ಮೋಡಸಾದವರು. ಇನ್ನಿಬ್ಬರು ದೆಹಲಿ ಮತ್ತು ನೋಯ್ಡಾದವರು. ಈ ನಾಲ್ವರೂ ಅಲ್ ಕೈದಾ ಜತೆ ಸಂಪರ್ಕ ಹೊಂದಿದ್ದರು. ಈ ಭಯೋತ್ಪಾದಕರು ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ವಿಷಯವನ್ನು ಹಂಚಿಕೊಳ್ಳುತ್ತಿದ್ದರು. ಅವರು ‘ಘಜ್ವಾ-ಎ-ಹಿಂದ್’ ಬಗ್ಗೆ ವೀಡಿಯೊಗಳು ಮತ್ತು ಭಾಷಣಗಳ ಮೂಲಕ ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡಲು ಪ್ರಯತ್ನಿಸಿದ್ದರು. ಈ ನಾಲ್ವರ ವಿಚಾರಣೆ ವೇಳೆ ಬೆಂಗಳೂರಿನಿಂದ ಕಾರ್ಯಾಚರಿಸುತ್ತಿರುವ ಶಮಾ ಪರ್ವೀನ್ ಬಗ್ಗೆ ಮಾಹಿತಿ ದೊರೆತಿದೆ.

ಇದನ್ನೂ ಓದಿ: ಅಲ್​ಖೈದಾ ಜೊತೆ ನಂಟು ಆರೋಪ, ಬೆಂಗಳೂರಿನ ಥಣಿಸಂದ್ರದಲ್ಲಿ ಶಂಕಿತನ ಬಂಧನ

ಶಂಕಿತ ಉಗ್ರರ ಬಂಧನದ ನಂತರ ಚೋದನಕಾರಿ, ಜಿಹಾದಿ ವಿಡಿಯೋಗಳನ್ನು ಪ್ರಸಾರ ಮಾಡುವ ಐದು ಇನ್‌ಸ್ಟಾಗ್ರಾಮ್ ಖಾತೆಗಳ ಮೇಲೆ ಎಟಿಎಸ್‌ ಕಟ್ಟಿತ್ತು. ಅವುಗಳನ್ನು ಒಬ್ಬನೇ ಆರೋಪಿ ನಿರ್ವಹಿಸುತ್ತಿರುವುದು ಗೊತ್ತಾಗಿತ್ತು. ಖಾತೆಯ ಮೂಲ ಪತ್ತೆಹಚ್ಚಿದ ನಂತರ, ಎಫ್‌ಎಸ್‌ಎಲ್ ಸೇರಿದಂತೆ ನಾಲ್ಕು ವಿಭಿನ್ನ ತಂಡಗಳನ್ನು ರಚಿಸಲಾಗಿತ್ತು. ನಂತರ ಎಟಿಎಸ್ ಅಧಿಕಾರಿಗಳು ಆರೋಪಿಗಳ ಬೆನ್ನತ್ತಿ ಬಂಧಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:52 am, Wed, 30 July 25