Karnataka Dam Water Level: ಆಲಮಟ್ಟಿ ಡ್ಯಾಂ ಬಹುತೇಕ ಭರ್ತಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ
ಕರ್ನಾಟಕ ಸೇರಿದಂತೆ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಕೃಷ್ಣ ನದಿಗೆ ಅಡ್ಡಲಾಗಿ ಕಟ್ಟಿರುವ ಆಲಮಟ್ಟಿ ಜಲಾಶಯಕ್ಕೆ ಒಳಹರಿವು, ಹೊರಹರಿವಿನಲ್ಲೂ ಹೆಚ್ಚಳವಾಗಿದೆ. ಆಲಮಟ್ಟಿ ಜಲಾಶಯ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ನೀರನ ಮಟ್ಟ ಎಷ್ಟಿದೆ ಎಂದು ತಿಳಿಯಲು ಈ ಸುದ್ದಿ ಓದಿ.
ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಮೊದಲ ಬಾರಿಗೆ 14 ಗೇಟ್ಗಳು ಹಾಗೂ ವಿದ್ಯುದಾಗಾರದ ಮೂಲಕ 65 ಸಾವಿರ ಕ್ಯುಸೆಕ್ ನೀರು ಹೊರಬಿಡಲಾಗುತ್ತದೆ. ಹಾಗಾದರೆ 123.81 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯದ ಜಲಾಶಯದಲ್ಲಿ ಶನಿವಾರ ಎಷ್ಟು ನೀರು ಸಂಗ್ರಹವಾಗಿದೆ ಜೊತೆಗೆ ರಾಜ್ಯದ 14 ಡ್ಯಾಂಗಳಲ್ಲೂ ಎಷ್ಟು ನೀರಿದೆ (Karnataka Dam Water Level) ? ಇಲ್ಲಿದೆ ವಿವರ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 97.42 | 28.76 | 43478 | 65480 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 55.97 | 11.77 | 106723 | 592 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 15.93 | 7.17 | 10935 | 194 |
ಕೆ.ಆರ್.ಎಸ್ (KRS Dam) | 38.04 | 49.45 | 38.90 | 15.88 | 44617 | 2566 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 76.44 | 26.59 | 77496 | 0 |
ಕಬಿನಿ ಜಲಾಶಯ (Kabini Dam) | 696.13 | 19.52 | 17.05 | 12.16 | 49334 | 61200 |
ಭದ್ರಾ ಜಲಾಶಯ (Bhadra Dam) | 657.73 | 71.54 | 41.01 | 27.99 | 49555 | 181 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 31.57 | 9.28 | 21455 | 1680 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 31.63 | 16.47 | 35871 | 1500 |
ವರಾಹಿ ಜಲಾಶಯ (Varahi Dam) | 594.36 | 31.10 | 10.87 | 5.35 | 65559 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 6.82 | 5.34 | 13188 | 10000 |
ಸೂಫಾ (Supa Dam) | 564.00 | 145.33 | 64.37 | 38.05 | 47385 | 0 |
ನಾರಾಯಣಪುರ ಜಲಾಶಯ (Narayanpura Dam) | 492.25 | 33.31 | 30.57 | 13.94 | 65801 | 70931 |
ವಾಣಿವಿಲಾಸ ಸಾಗರ (VaniVilas Sagar Dam) | 652.24 | 30.42 | 17.96 | 24.81 | 0 | 147 |
ರಾಜ್ಯದ ಎಲ್ಲ ಜಲಾಶಯಗಳಿಗೆ ಒಳಹರಿವು ಮತ್ತು ಹೊರಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತಗಳು ಸೂಚನೆ ನೀಡಿವೆ. ಕೆಲವು ಕಡೆ ಈಗಾಗಲೆ ಪ್ರವಾಹ ಬಂದಿದ್ದು ರಕ್ಷಣಾ ಕಾರ್ಯ ನಡೆಯುತ್ತಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ