Karnataka Dam Water Level: ಆಲಮಟ್ಟಿ ಡ್ಯಾಂ ಬಹುತೇಕ ಭರ್ತಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ

|

Updated on: Jul 20, 2024 | 7:28 AM

ಕರ್ನಾಟಕ ಸೇರಿದಂತೆ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಕೃಷ್ಣ ನದಿಗೆ ಅಡ್ಡಲಾಗಿ ಕಟ್ಟಿರುವ ಆಲಮಟ್ಟಿ ಜಲಾಶಯಕ್ಕೆ ಒಳಹರಿವು, ಹೊರಹರಿವಿನಲ್ಲೂ ಹೆಚ್ಚಳವಾಗಿದೆ. ಆಲಮಟ್ಟಿ ಜಲಾಶಯ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ನೀರನ ಮಟ್ಟ ಎಷ್ಟಿದೆ ಎಂದು ತಿಳಿಯಲು ಈ ಸುದ್ದಿ ಓದಿ.

Karnataka Dam Water Level: ಆಲಮಟ್ಟಿ ಡ್ಯಾಂ ಬಹುತೇಕ ಭರ್ತಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ
ಆಲಮಟ್ಟಿ ಜಲಾಶಯ
Follow us on

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಮೊದಲ ಬಾರಿಗೆ 14 ಗೇಟ್​ಗಳು ಹಾಗೂ ವಿದ್ಯುದಾಗಾರದ ಮೂಲಕ 65 ಸಾವಿರ ಕ್ಯುಸೆಕ್​ ನೀರು ಹೊರಬಿಡಲಾಗುತ್ತದೆ. ಹಾಗಾದರೆ 123.81 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯದ ಜಲಾಶಯದಲ್ಲಿ ಶನಿವಾರ ಎಷ್ಟು ನೀರು ಸಂಗ್ರಹವಾಗಿದೆ ಜೊತೆಗೆ ರಾಜ್ಯದ 14 ಡ್ಯಾಂಗಳಲ್ಲೂ ಎಷ್ಟು ನೀರಿದೆ (Karnataka Dam Water Level) ? ಇಲ್ಲಿದೆ ವಿವರ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 97.42 28.76 43478 65480
ತುಂಗಭದ್ರಾ ಜಲಾಶಯ (Tungabhadra Dam) 497.71 105.79 55.97 11.77 106723 592
ಮಲಪ್ರಭಾ ಜಲಾಶಯ (Malaprabha Dam) 633.80 37.73 15.93 7.17 10935 194
ಕೆ.ಆರ್.ಎಸ್ (KRS Dam) 38.04 49.45 38.90 15.88 44617 2566
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 76.44 26.59 77496 0
ಕಬಿನಿ ಜಲಾಶಯ (Kabini Dam) 696.13 19.52 17.05 12.16 49334 61200
ಭದ್ರಾ ಜಲಾಶಯ (Bhadra Dam) 657.73 71.54 41.01 27.99 49555 181
ಘಟಪ್ರಭಾ ಜಲಾಶಯ (Ghataprabha Dam) 662.91 51.00 31.57 9.28 21455 1680
ಹೇಮಾವತಿ ಜಲಾಶಯ (Hemavathi Dam) 890.58 37.10 31.63 16.47 35871 1500
ವರಾಹಿ ಜಲಾಶಯ (Varahi Dam) 594.36 31.10 10.87 5.35 65559 0
ಹಾರಂಗಿ ಜಲಾಶಯ (Harangi Dam)​​ 871.38 8.50 6.82 5.34 13188 10000
ಸೂಫಾ (Supa Dam) 564.00 145.33 64.37 38.05 47385 0
ನಾರಾಯಣಪುರ ಜಲಾಶಯ (Narayanpura Dam) 492.25 33.31 30.57 13.94 65801 70931
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 17.96 24.81 0 147

ರಾಜ್ಯದ ಎಲ್ಲ ಜಲಾಶಯಗಳಿಗೆ ಒಳಹರಿವು ಮತ್ತು ಹೊರಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತಗಳು ಸೂಚನೆ ನೀಡಿವೆ. ಕೆಲವು ಕಡೆ ಈಗಾಗಲೆ ಪ್ರವಾಹ ಬಂದಿದ್ದು ರಕ್ಷಣಾ ಕಾರ್ಯ ನಡೆಯುತ್ತಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ