AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ: ಬಿಜೆಪಿ ಮಾಜಿ ಶಾಸಕರ ಮನೆ ಮೇಲೆ SIT ದಾಳಿ

ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಿಡಿಸಿರುವ ಮತಗಳ್ಳತನ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದ್ದು,ರಾಷ್ಟ್ರ ರಾಜ್ಯಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಈ ಸಂಬಂಧ ದೇಶಾದ್ಯಂತ ಬಿಜೆಪಿ ವಿರುದ್ಧ ಆರಂಭಿಸಿರುವ ಮತಗಳ್ಳತನ ಆಭಿಯಾನಕ್ಕೆ ಪ್ರಮುಖ ಸಾಕ್ಷಿಯಾಗಿ ಬಳಕೆಯಾಗಿದ್ದ ಕರ್ನಾಟಕದ ಆಳಂದ ಕ್ಷೇತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ತನಿಖೆ ಚುರುಕು ಪಡೆದುಕೊಂಡಿದೆ. ಇದೀಗ ಆಳಂದ ಕ್ಷೇತ್ರದ ಬಿಜೆಪಿ ಶಾಸಕನ ಮನೆ ಮೇಲೆ ಎಸ್​​ಐಟಿ ದಾಳಿ ಮಾಡಿದೆ.

ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ: ಬಿಜೆಪಿ ಮಾಜಿ ಶಾಸಕರ ಮನೆ ಮೇಲೆ SIT ದಾಳಿ
Subhash Guttedar
ದತ್ತಾತ್ರೇಯ ಪಾಟೀಲ್​
| Edited By: |

Updated on:Oct 17, 2025 | 3:15 PM

Share

ಕಲಬುರಗಿ, (ಅಕ್ಟೋಬರ್ 17):  ಕಲಬುರಗಿ, (ಅಕ್ಟೋಬರ್ 17): ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣಕ್ಕೆ (Aland Vote Theft Case) ಸಂಬಂಧಿಸಿದಂತೆ ಎಸ್​​ಐಟಿ ಅಧಿಕಾರಿಗಳು ತನಿಖೆ ತೀವ್ರಗೊಳಡಿಸಿದ್ದು, ಇಂದು (ಅಕ್ಟೋಬರ್ 17) ಆಳಂದ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ (subhash guttedar) ಮನೆ ಸೇರಿದಂತೆ ಮೂರು ಕಡೆ ದಾಳಿ ಮಾಡಿದೆ. ಎಸ್​ಐಟಿ ಎಸ್​​ಪಿ ಶುಭಾನ್ವಿತಾ ನೇತೃತ್ವದ ತಂಡ ಕಲಬುರಗಿಯ ಗುಬ್ಬಿ ಕಾಲೋನಿಯಲ್ಲಿರುವ ಸುಭಾಷ್ ಗುತ್ತೇದಾರ್ ಮನೆ ಹಾಗೂ ಸಿಎ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ನಿನ್ನೆ ಅಷ್ಟೇ ಎಸ್​ಐಟಿ ಅಧಿಕಾರಿಗಳು ಕಲಬುರಗಿಯಲ್ಲಿ ಅಕ್ರಂ ಎನ್ನುವಾತನ ಮನೆಯಲ್ಲಿ ದಾಳಿ ಮಾಡಿತ್ತು. ಆ ವೇಳೆ ರಾಶಿ ರಾಶಿ ವೋಟರ್ ಐಡಿಗಳು ಪತ್ತೆ ಆಗಿದ್ದವು. ಒಟ್ಟು 15 ಮೊಬೈಲ್ ಫೋನ್, 7 ಲ್ಯಾಪ್​ ಟಾಪ್​​ಗಳನ್ನು ಎಸ್ಐಟಿ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ಎಸ್​ಐಟಿ ಮಾಜಿ ಶಾಸಕರ ಮನೆ ಮೇಲೂ ದಾಳಿ ನಡೆಸಿದೆ.

ಇದನ್ನೂ ಓದಿ: ವೋಟ್ ಚೋರಿ ಕೇಸ್​​: ಕಲಬುರಗಿಯ 5 ಮನೆಗಳ ಮೇಲೆ ಎಸ್​ಐಟಿ ದಾಳಿ, ಸಾವಿರಾರು ವೋಟರ್ ಐಡಿ ಪತ್ತೆ

ಆಳಂದ ಕ್ಷೇತ್ರದ ಜೊತೆ ಕಲಬುರಗಿಯ ಇನ್ನು ಎರಡು ಕ್ಷೇತ್ರಗಳಲ್ಲಿ ನಡೆದ ಮತ ಅಕ್ರಮ ಪ್ರಕರಣದಲ್ಲಿ ಎಸ್ ಐಟಿ ಕೈಹಾಕಿದ್ದು ತನಿಖೆ ತೀವ್ರಗೊಳಿಸಿದೆ. ಬಿಜೆಪಿಯ ಇಬ್ಬರು ನಾಯಕರ ಚಾರ್ಟೆಡ್ ಅಕೌಂಟೆಂಟ್ ಆಗಿರುವ ಮಲ್ಲಿಕಾರ್ಜುನ ಮಹಾಂತಗೋಳ ಮನೆ ಹಾಗೂ ಕಚೇರಿ ಮೇಲೂ ಎಸ್​ಐಟಿ ದಾಳಿ ಮಾಡಿದೆ. 2023ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಮತದಾರರ ಸೇರ್ಪಡೆಗೆ ಮಲ್ಲಿಕಾರ್ಜುನ, ಅಕ್ರಂ ಎಂಬ ವ್ಯಕ್ತಿ‌ಗೆ ಡೀಲ್ ಕೊಟ್ಟಿದ್ದ ಎನ್ನುವ ಅಂಶ ತಿಳಿದುಬಂದಿದೆ. ಹೀಗಾಗಿ ಎಸ್​ಐಟಿ ಮಲ್ಲಿಕಾರ್ಜುನ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ.

2023ರಲ್ಲಿ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆಗಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ದೂರು ನೀಡಿದ್ದು, ಈ ಸಂಬಂಧ ಎಫ್​ಐಆರ್ ದಾಖಲಾಗಿತ್ತು. ಮತ್ತೊಂದೆಡೆ ಈ ಮತಗಳ್ಳತನ ಸಂಬಂಧ ರಾಹುಲ್ ಗಾಂಧಿ ಧ್ವನಿ ಎತ್ತಿದ್ದು, ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಬಹಿರಂಗ ಆರೋಪ ಮಾಡಿದ್ದು, ಇದು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ರಾಹುಲ್ ಗಾಂಧಿ ಮೊದಲು ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳನವಾಗಿದೆ ಎಂದು ಆರೋಪ ಮಾಡಿದ್ದರು. ಬಳಿಕ ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನವಾಗಿದೆ ಎಂದು ಆರೋಪಿಸಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಆಳಂದ ಕ್ಷೇತ್ರದ ಮತಗಳ್ಳತನ ಪ್ರಕರಣವನ್ನು ಎಸ್​ಐಟಿಗೆ ವಹಿಸಿತ್ತು.

Published On - 3:01 pm, Fri, 17 October 25

Follow Us
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!