ಬೆಳಗಾವಿ ರಾಣಿ ಚೆನ್ನಮ್ಮ ವಿವಿಯ ಎಲ್ಲ ಪರೀಕ್ಷೆ, ದಾವಣಗೆರೆ ವಿವಿ ಬಿಇಡಿ ಪರೀಕ್ಷೆ ಮುಂದೂಡಿಕೆ
ನಾಳೆಯಿಂದ ಆರಂಭವಾಗಬೇಕಿದ್ದ ಪದವಿ, ಸ್ನಾತಕೋತ್ತರ, ಎಂಬಿಎ ಪರೀಕ್ಷೆಗಳನ್ನು ಮುಂದೂಡಿ ರಾಣಿ ಚೆನ್ನಮ್ಮ ವಿವಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ಕೊರೊನಾ ಸೋಂಕಿನ 2ನೇ ಅಲೆ ತಡೆಗೆಂದು ರಾಜ್ಯ ಸರ್ಕಾರ ಕೊವಿಡ್ ಕರ್ಫ್ಯೂ ಹೆಸರಿನಲ್ಲಿ ಬಿಗಿ ನಿಯಮಗಳನ್ನು ಘೋಷಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ನಾಳೆಯಿಂದ ಆರಂಭವಾಗಬೇಕಿದ್ದ ಪದವಿ, ಸ್ನಾತಕೋತ್ತರ, ಎಂಬಿಎ ಪರೀಕ್ಷೆಗಳನ್ನು ಮುಂದೂಡಿ ರಾಣಿ ಚೆನ್ನಮ್ಮ ವಿವಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.
ನಾಳೆಯಿಂದ ನಡೆಯಬೇಕಿದ್ದ ದಾವಣಗೆರೆ ವಿಶ್ವವಿದ್ಯಾಲಯದ ಬಿಇಡಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರ ಪ್ರಕಟಿಸಲಾಗುವುದು ಎಂದು ಪರೀಕ್ಷಾಂಗ ಕುಲಪತಿ ಎಚ್.ಎಸ್.ಅನಿತ ಮಾಹಿತಿ ನೀಡಿದ್ದಾರೆ.
ನಾಳೆಯಿಂದ 14 ದಿನ ರಾಜ್ಯದಲ್ಲಿ ಟೈಟ್ರೂಲ್ಸ್ ಜಾರಿ ಹಿನ್ನೆಲೆಯಲ್ಲಿ ವಿಟಿಯು ಪರೀಕ್ಷೆ ನಡೆಸುವ ಬಗ್ಗೆ ಇನ್ನು ತೀರ್ಮಾನ ಆಗಿಲ್ಲ ಎಂದು ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಮಾಹಿತಿ ನೀಡಿದ್ದಾರೆ. ಗೈಡ್ಲೈನ್ಸ್ ಬಿಡುಗಡೆ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಏಪ್ರಿಲ್ 19ರಿಂದ ವಿಟಿಯು ಪರೀಕ್ಷೆ ಆರಂಭವಾಗಿದೆ.
ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಪರೀಕ್ಷೆ ನಡೆಯುತ್ತಿದ್ದು, ವಿದ್ಯಾರ್ಥಿಗಳಲ್ಲಿ ಸೋಂಕಿನ ಆತಂಕ ವ್ಯಕ್ತವಾಗಿದೆ. ಕೊರೋನಾ ಭಯ ಇದೆ ಎಂದು ವಿದ್ಯಾರ್ಥಿಗಳು ಹೇಳುತ್ತಿದ್ದಾರೆ. ಮೂರ್ನಾಲ್ಕು ವಿದ್ಯಾರ್ಥಿಗಳಿಗೆ ಈ ಹಿಂದೆ ಕೊರೊನಾ ಪಾಸಿಟಿವ್ ಬಂದಿದೆ. ಆದರೂ ಪರೀಕ್ಷೆ ನಡೆಸುತ್ತಿದ್ದಾರೆ. ಪರೀಕ್ಷೆಯನ್ನು ಮುಂದೂಡಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಕೊವಿಡ್ ಕರ್ಫ್ಯೂ ವೇಳೆ ಏನಿರುತ್ತೆ? ಏನಿರಲ್ಲ ಎಂಬ ಮಾಹಿತಿ ಇಲ್ಲಿದೆ..
ಏನಿರುತ್ತೆ? – ಅಂಗಡಿ ಮತ್ತು ದಿನಬಳಕೆ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ 10 ಗಂಟೆಯವರೆಗೆ ಅವಕಾಶ – ಗಾರ್ಮೆಂಟ್ಸ್, ಉತ್ಪಾದನಾ ವಲಯ, ಕಟ್ಟಡ ನಿರ್ಮಾಣಕ್ಕೆ ಅವಕಾಶ – ಆಸ್ಪತ್ರೆ, ಮೆಡಿಕಲ್ ಸ್ಟೋರ್, ಲ್ಯಾಬ್ಗಳು ಕಾರ್ಯನಿರ್ವಹಿಸುತ್ತವೆ – ಗೂಡ್ಸ್ ವಾಹನಗಳ ಸಂಚಾರ – ಬಾರ್, ವೈನ್ಶಾಪ್ಗಳಲ್ಲಿ ಪಾರ್ಸೆಲ್ಗೆ ಮಾತ್ರ ಅವಕಾಶ
ಏನಿರಲ್ಲ – 9 ಗಂಟೆಯ ನಂತರ ರಾಜ್ಯದಲ್ಲಿ ಕರ್ಫ್ಯೂ ಜಾರಿಗೆ ಬರುತ್ತದೆ. – ಜನಸಂಚಾರ, ವಾಹನ ಸಂಚಾರಕ್ಕೆ ಕಡಿವಾಣ – ಸಾರಿಗೆ ಬಸ್, ಮೆಟ್ರೊ ರೈಲು ಸಂಚಾರ ಇರುವುದಿಲ್ಲ – ಬೆಳಿಗ್ಗೆ 10 ಗಂಟೆಯ ನಂತರ ಎಲ್ಲ ಅಂಗಡಿಗಳೂ ಬಾಗಿಲು ಹಾಕಬೇಕು
(All Exams of Belagavi Rani Channamma University Postponed)
ಇದನ್ನೂ ಓದಿ: ‘ಉಪಚುನಾವಣೆ ಮುಗೀತಾ ಮುಖ್ಯಮಂತ್ರಿಗಳೇ’: ಲಾಕ್ಡೌನ್ ಘೋಷಣೆಯ ಬೆನ್ನಲ್ಲೇ ಟ್ವಿಟರ್ನಲ್ಲಿ ಮೀಮ್ಗಳ ಸುರಿಮಳೆ
ಇದನ್ನೂ ಓದಿ: ರಾಜ್ಯದಲ್ಲಿ ಕೊವಿಡ್ ಕರ್ಫ್ಯೂ: ಏನಿರುತ್ತೆ? ಏನಿರಲ್ಲ?