ಮನೆಯಲ್ಲೇ ಕುಳಿತು ಜಾತಿ ಗಣತಿ ವರದಿ ಸಿದ್ಧಪಡಿಸಿದ್ದಾರೆ: ತಮ್ಮದೇ ಸರ್ಕಾರದ ವಿರುದ್ಧ ಶಾಮನೂರು ಶಿವಶಂಕರಪ್ಪ ಕಿಡಿ

| Updated By: ಗಣಪತಿ ಶರ್ಮ

Updated on: Nov 09, 2023 | 4:05 PM

ಬೆಂಗಳೂರಿನ ಸದಾಶಿವನಗರದಲ್ಲಿರುವ ಮಹಾಸಭಾದ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಮಾಹಿತಿ ನೀಡಿದ ಅವರು, ಜಾತಿ ಜನಗಣತಿ ಲೋಪದೋಷ ಪರಿಹರಿಸಲು ವೀರಶೈವ ಲಿಂಗಾಯತ ಮಹಾಸಭಾ ಒತ್ತಾಯಿಸುತ್ತಿದೆ. ಜನಗಣತಿಯ ಅಂಕಿ ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿವೆ. ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿ ಗಣತಿ ಮಾಡಬೇಕು ಎಂದು ಹೇಳಿದ್ದಾರೆ.

ಮನೆಯಲ್ಲೇ ಕುಳಿತು ಜಾತಿ ಗಣತಿ ವರದಿ ಸಿದ್ಧಪಡಿಸಿದ್ದಾರೆ: ತಮ್ಮದೇ ಸರ್ಕಾರದ ವಿರುದ್ಧ ಶಾಮನೂರು ಶಿವಶಂಕರಪ್ಪ ಕಿಡಿ
ಶಾಮನೂರು ಶಿವಶಂಕರಪ್ಪ
Follow us on

ಬೆಂಗಳೂರು, ನವೆಂಬರ್ 9: ರಾಜ್ಯ ಸರ್ಕಾರದ ಮಹತ್ವದ ಜಾತಿ ಗಣತಿ (Caste Census) ವರದಿಗೆ ಒಕ್ಕಲಿಗರ ಪ್ರಬಲ ವಿರೋಧದ ಬೆನ್ನಲ್ಲೇ ಇದೀಗ ಲಿಂಗಾಯತ ಸಮುದಾಯವೂ ತೀವ್ರ ವಿರೋಧ ವ್ಯಕ್ತಪಡಿಸಿದೆ. ನಮ್ಮ ಸಮುದಾಯದ ಮನೆ ಮನೆಗಳಿಗೆ ಹೋಗಿ ಸಮೀಕ್ಷೆ ನಡೆಸಿಲ್ಲ. ಮನೆಯಲ್ಲೇ ಕುಳಿತು ವರದಿ ಸಿದ್ಧಪಡಿಸಲಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ (All India Veerashaiva Mahasabha) ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (Shamanur Shivashankarappa) ಗುರುವಾರ ಆರೋಪಿಸಿದ್ದಾರೆ. ಈ ಮೂಲಕ ತಮ್ಮದೇ ಸರ್ಕಾರದ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಮಹಾಸಭಾದ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಮಾಹಿತಿ ನೀಡಿದ ಅವರು, ಜಾತಿ ಜನಗಣತಿ ಲೋಪದೋಷ ಪರಿಹರಿಸಲು ವೀರಶೈವ ಲಿಂಗಾಯತ ಮಹಾಸಭಾ ಒತ್ತಾಯಿಸುತ್ತಿದೆ. ಜನಗಣತಿಯ ಅಂಕಿ ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿವೆ. ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿ ಗಣತಿ ಮಾಡಬೇಕು ಎಂದು ಹೇಳಿದ್ದಾರೆ.

ಈ ಜಾತಿಗಣತಿ ಸಮೀಕ್ಷೆಯೇ ಸಮರ್ಪಕವಾಗಿ ನಡೆದಿಲ್ಲ. ಹಲವರ ಮನೆಗಳಿಗೆ ಭೇಟಿಯನ್ನು ನೀಡದೆ ವರದಿ ಸಿದ್ಧಪಡಿಸಲಾಗಿದೆ ಎಂಬ ದೂರುಗಳು ಬಂದಿವೆ. ಈ ಸಮೀಕ್ಷೆಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಜನ ಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ. ಇದರಿಂದ ಸಮಾಜಕ್ಕೆ ತೀವ್ರ ಸ್ವರೂಪದ ನಷ್ಟವಾಗಲಿದೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಒಕ್ಕಲಿಗರ ಪ್ರಬಲ ವಿರೋಧಕ್ಕೆ ಮಣಿದ ಸರ್ಕಾರ? ಜಾತಿ ಗಣತಿ ವರದಿ ಸಲ್ಲಿಕೆಯಾದ ನಂತರ ಪರಿಶೀಲಿಸಿ ನಿರ್ಧರಿಸುತ್ತೇವೆ ಎಂದ ಸಿದ್ದರಾಮಯ್ಯ

ಎಲ್ಲರ ಒಳಿತನ್ನು ಬಯಸುವುದು ಸಮುದಾಯದ ಗುರಿಯಾಗಿದೆ. ನಾವು ಜಾತಿ ಗಣತಿಯ ವಿರೋಧಿಗಳಲ್ಲ, ಆದರೆ ಯಾವುದೇ ವರದಿ ವೈಜ್ಞಾನಿಕವಾಗಿರಬೇಕು ಎಂಬುದು ನಮ್ಮ ಒತ್ತಾಯ. ಈ ಜಾತಿ ಗಣತಿ ವರದಿ ಈಗಾಗಲೇ 8 ವರ್ಷದಷ್ಟು ಹಳೆಯದಾಗಿದೆ. ವರದಿಯು ಹಲವು ನ್ಯೂನತೆಗಳಿಂದ ಕೂಡಿದೆ . ಹೊಸದಾಗಿ ಮತ್ತು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಬೇಕು. ಸರ್ಕಾರ ಮತ್ತೊಮ್ಮೆ ಪರಾಮರ್ಶಿಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಶಾಮನೂರು ಒತ್ತಾಯಿಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ