AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಿಟ್ಟು ಹೋಗಬೇಡಿ, ಕಾರ್ಮಿಕರಿಗೆ ಎಲ್ಲಾ ಸೌಲಭ್ಯ ಕಲ್ಪಿಸುತ್ತೇವೆ -BSY

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ವಾಪಸ್ ತೆರಳುತ್ತಿದ್ದಾರೆ. ಹಾಗಾಗಿ ಬಿಲ್ಡರ್​ಗಳ ಜೊತೆ ಸಭೆ ನಡೆಸಿ ವಲಸೆ ಕಾರ್ಮಿಕರ ಬಗ್ಗೆ ಚರ್ಚೆ ನಡೆಸಲಾಗಿದೆ. ಕಾರ್ಮಿಕರು ಗಾಳಿ ಸುದ್ದಿಗೆ ಕಿವಿಗೊಡಬಾರದು. ತಪ್ಪುಗ್ರಹಿಕೆಯಿಂದ ಬೆಂಗಳೂರು ತೊರೆಯಬೇಡಿ. ಕಾರ್ಮಿಕರಿಗೆ ಎಲ್ಲ ಸೌಲಭ್ಯವನ್ನು ಕಲ್ಪಿಸುತ್ತೇವೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು. ರಾಜ್ಯದಲ್ಲಿ ಕೆಂಪು ವಲಯವನ್ನು ಹೊರತುಪಡಿಸಿ ಉಳಿದೆಡೆ ವ್ಯಾಪಾರ, ಕೈಗಾರಿಕೆಗಳು ಆರಂಭಿಸಬೇಕು. ಕಾರ್ಮಿಕರ ವಲಸೆ ತಪ್ಪಿಸಲು ಊಟ, ವಸತಿ ಸೌಲಭ್ಯ ನೀಡಲಾಗುತ್ತದೆ. […]

ಬೆಂಗಳೂರು ಬಿಟ್ಟು ಹೋಗಬೇಡಿ, ಕಾರ್ಮಿಕರಿಗೆ ಎಲ್ಲಾ ಸೌಲಭ್ಯ ಕಲ್ಪಿಸುತ್ತೇವೆ -BSY
ಸಿಎಂ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
|

Updated on:May 05, 2020 | 2:08 PM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ವಾಪಸ್ ತೆರಳುತ್ತಿದ್ದಾರೆ. ಹಾಗಾಗಿ ಬಿಲ್ಡರ್​ಗಳ ಜೊತೆ ಸಭೆ ನಡೆಸಿ ವಲಸೆ ಕಾರ್ಮಿಕರ ಬಗ್ಗೆ ಚರ್ಚೆ ನಡೆಸಲಾಗಿದೆ. ಕಾರ್ಮಿಕರು ಗಾಳಿ ಸುದ್ದಿಗೆ ಕಿವಿಗೊಡಬಾರದು. ತಪ್ಪುಗ್ರಹಿಕೆಯಿಂದ ಬೆಂಗಳೂರು ತೊರೆಯಬೇಡಿ. ಕಾರ್ಮಿಕರಿಗೆ ಎಲ್ಲ ಸೌಲಭ್ಯವನ್ನು ಕಲ್ಪಿಸುತ್ತೇವೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ರಾಜ್ಯದಲ್ಲಿ ಕೆಂಪು ವಲಯವನ್ನು ಹೊರತುಪಡಿಸಿ ಉಳಿದೆಡೆ ವ್ಯಾಪಾರ, ಕೈಗಾರಿಕೆಗಳು ಆರಂಭಿಸಬೇಕು. ಕಾರ್ಮಿಕರ ವಲಸೆ ತಪ್ಪಿಸಲು ಊಟ, ವಸತಿ ಸೌಲಭ್ಯ ನೀಡಲಾಗುತ್ತದೆ. ಇನ್ನು ಮುಂದೆಯೇ ಇದೇ ರೀತಿ ಸೌಲಭ್ಯ ನೀಡುತ್ತೇವೆ. ವಾಪಸ್ ಹೋಗುವ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಿ. ಕಾರ್ಮಿಕರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವ ಭರವಸೆ ಬಿಲ್ಡರ್​ಗಳು ನೀಡಿದ್ದಾರೆ. ಇಲ್ಲೇ ಇದ್ದು ಅಗತ್ಯ ಸೌಲಭ್ಯವನ್ನು ಪಡೆದುಕೊಳ್ಳಿ ಎಂದು ಬಿಎಸ್​ವೈ ಮನವಿ ಮಾಡಿದರು.

ರಿಯಾಯಿತಿ ದರದಲ್ಲಿ ಖಾಸಗಿ ಸಂಸ್ಥೆಗಳಿಗೆ ಬಸ್ ಸೇವೆಯನ್ನು ಒದಗಿಸಲು ಬಿಎಂಟಿಸಿ ಸಂಸ್ಥೆ ಮುಂದಾಗಿದೆ. ರೈತರಿಗೆ ಅಗತ್ಯ ಸವಲತ್ತು ಒದಗಿಸುವ ಸಂಬಂಧ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಚರ್ಚಿಸುತ್ತಿದ್ದೇನೆ ಎಂದು ಇದೇ ವೇಳೆ ಸಿಎಂ ಯಡಿಯೂರಪ್ಪ ತಿಳಿಸಿದರು.

Published On - 1:56 pm, Tue, 5 May 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್