AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕ್​ ವಿರುದ್ಧ ಸಿಎ ನಿವೇಶನ ಮಂಜೂರು ಆರೋಪ: ಸರ್ಕಾರಕ್ಕೆ ವಿವರಣೆ ಕೇಳಿದ ರಾಜ್ಯಪಾಲರು

ಪ್ರಭಾವ ಬಳಸಿ ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ ಮಂಜೂರು ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ ವಿರುದ್ಧ ಆರೋಪ ಕೇಳಿಬಂದಿದ್ದು, ಈ ಸಂಬಂಧ ವಿವರಣೆ ಕೇಳಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಪ್ರಿಯಾಂಕ್​ ವಿರುದ್ಧ ಸಿಎ ನಿವೇಶನ ಮಂಜೂರು ಆರೋಪ: ಸರ್ಕಾರಕ್ಕೆ ವಿವರಣೆ ಕೇಳಿದ ರಾಜ್ಯಪಾಲರು
ರಾಜ್ಯಪಾಲ ಥಾವರ್​ ಚಂದ್​​​ ಗೆಹ್ಲೋಟ್, ಪ್ರಿಯಾಂಕ್​ ಖರ್ಗೆ
ಪ್ರಸನ್ನ ಗಾಂವ್ಕರ್​
| Edited By: |

Updated on:Sep 02, 2024 | 2:59 PM

Share

ಬೆಂಗಳೂರು, ಸೆಪ್ಟೆಂಬರ್​ 02: ಪ್ರಭಾವ ಬಳಸಿ ಕೆಐಎಡಿಬಿಯಿಂದ (KIADB) ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ (CA Site) ಮಂಜೂರು ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ (Priyank Kharge) ಅವರ ವಿರುದ್ಧ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್​ ಚಂದ್​​​ ಗೆಹ್ಲೋಟ್​ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ.

ಸಚಿವ ಎಂ.ಬಿ.ಪಾಟೀಲ್​ ವಿರುದ್ಧ ಪ್ರಾಸಿಕ್ಯೂಷನ್​ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಈ ವಿಚಾರವಾಗಿ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ. ಎಂಬಿ ಪಾಟೀಲ್​ ಅವರ ವಿರುದ್ಧ ಸಿಎ ನಿವೇಶನ ಹಂಚಿಕೆ ವಿಚಾರದಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಏನಿದು ಆರೋಪ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಟ್ರಸ್ಟಿಗಳಾಗಿರವ ಸಿದ್ಧಾರ್ಥ ವಿಹಾರ ಟ್ರಸ್ಟ್​​ಗೆ ನಿಯಮ ಉಲ್ಲಂಘನೆಯ ಜೊತೆಗೆ ತರಾತುರಿಯಲ್ಲಿ ಕೆಐಎಡಿಬಿಯಿಂದ ಐದು ಎಕರೆ ಸಿ.ಎ ನಿವೇಶನ ಮಂಜೂರು ಮಾಡಲಾಗಿದೆ. ಪ್ರಿಯಾಂಕ್​ ಖರ್ಗೆ ಸಚಿವರಾಗಿದ್ದುಕೊಂಡು ಹೀಗೆ ಸರ್ಕಾರಿ ಸೌಲಭ್ಯ ಪಡೆದಿದ್ದು ಸರಿಯೇ ಎಂದು ವಿಧಾನ ಪರಿಷತ್​ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕ್​ ಖರ್ಗೆಯನ್ನ ಸಚಿವ ಸಂಪುಟದಿಂದ ವಜಾ ಮಾಡಿ: ಛಲವಾದಿ ನಾರಾಯಣಸ್ವಾಮಿ

ರಾಜ್ಯಪಾಲರಿಗೆ ಎರಡು ಸಂವಿಧಾನ ಇದೆ: ಪ್ರಿಯಾಂಕ್​

ರಾಜ್ಯಪಾಲರಿಗೆ ಎರಡು ಸಂವಿಧಾನ ಇದೆ. ಬಿಜೆಪಿ, ಜೆಡಿಎಸ್​ದು ಒಂದು ಸಂವಿಧಾನ, ಕಾಂಗ್ರೆಸ್​​ಗೊಂದು ಸಂವಿಧಾನ. ನಮ್ಮ ವಿಚಾರದಲ್ಲಿ ಬಿಜೆಪಿ ಮೊದಲು 10 ಆರೋಪ ಮಾಡುತ್ತಿತ್ತು. ಎರಡನೇ ದಿನ ಐದು ಆರೋಪಗಳನ್ನು ಮಾಡಿದ್ದರು, ಈಗ ಸುಮ್ಮನಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಬಿಟ್ಟು ಬೇರೆ ಯಾರೂ ಏಕೆ ಮಾತನಾಡುತ್ತಿಲ್ಲ ಎಂದು ಸಚಿವ ಪ್ರಿಯಾಂಕ್​ ಖರ್ಗೆ ಪ್ರಶ್ನಿಸಿದರು.

ಬಿವೈ ವಿಜಯೇಂದ್ರ, ಆರ್​.ಅಶೋಕ್ ಅವರು ನನ್ನ ವಿಚಾರದಲ್ಲಿ ಮಾತನಾಡುತ್ತಿಲ್ಲ. ನಾನು ಕೆಳಮನೆ ಸದಸ್ಯ ಅಲ್ವಾ, ಹಾಗಾದರೆ ಏಕೆ ಮಾತನಾಡುತ್ತಿಲ್ಲ. ದಲಿತರ ಜೊತೆ ಬಡಿದಾಡಿಸುವುದು ಕೋಮುವಾದ ಸೃಷ್ಟಿಸುವುದು, ಇದೆಲ್ಲ ಆರ್​​ಎಸ್​​ಎಸ್, ಬಿಜೆಪಿ ಸಂಚು ಎಂದು ವಾಗ್ದಾಳಿ ಮಾಡಿದರು. ಕಾನೂನಿನಲ್ಲಿ ಸರಿ ಇದೆ ಅಂತಾ ಗೊತ್ತಾದ್ಮೇಲೆ ಸುಮ್ಮನಾದರು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:25 pm, Mon, 2 September 24

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು