ಬೆಂಗಳೂರು, ಸೆಪ್ಟೆಂಬರ್ 02: ಪ್ರಭಾವ ಬಳಸಿ ಕೆಐಎಡಿಬಿಯಿಂದ (KIADB) ಸಿದ್ದಾರ್ಥ ಟ್ರಸ್ಟ್ಗೆ ಸಿಎ ನಿವೇಶನ (CA Site) ಮಂಜೂರು ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರ ವಿರುದ್ಧ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ.
ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಈ ವಿಚಾರವಾಗಿ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ. ಎಂಬಿ ಪಾಟೀಲ್ ಅವರ ವಿರುದ್ಧ ಸಿಎ ನಿವೇಶನ ಹಂಚಿಕೆ ವಿಚಾರದಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಟ್ರಸ್ಟಿಗಳಾಗಿರವ ಸಿದ್ಧಾರ್ಥ ವಿಹಾರ ಟ್ರಸ್ಟ್ಗೆ ನಿಯಮ ಉಲ್ಲಂಘನೆಯ ಜೊತೆಗೆ ತರಾತುರಿಯಲ್ಲಿ ಕೆಐಎಡಿಬಿಯಿಂದ ಐದು ಎಕರೆ ಸಿ.ಎ ನಿವೇಶನ ಮಂಜೂರು ಮಾಡಲಾಗಿದೆ. ಪ್ರಿಯಾಂಕ್ ಖರ್ಗೆ ಸಚಿವರಾಗಿದ್ದುಕೊಂಡು ಹೀಗೆ ಸರ್ಕಾರಿ ಸೌಲಭ್ಯ ಪಡೆದಿದ್ದು ಸರಿಯೇ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಇದನ್ನೂ ಓದಿ: ಪ್ರಿಯಾಂಕ್ ಖರ್ಗೆಯನ್ನ ಸಚಿವ ಸಂಪುಟದಿಂದ ವಜಾ ಮಾಡಿ: ಛಲವಾದಿ ನಾರಾಯಣಸ್ವಾಮಿ
ರಾಜ್ಯಪಾಲರಿಗೆ ಎರಡು ಸಂವಿಧಾನ ಇದೆ. ಬಿಜೆಪಿ, ಜೆಡಿಎಸ್ದು ಒಂದು ಸಂವಿಧಾನ, ಕಾಂಗ್ರೆಸ್ಗೊಂದು ಸಂವಿಧಾನ. ನಮ್ಮ ವಿಚಾರದಲ್ಲಿ ಬಿಜೆಪಿ ಮೊದಲು 10 ಆರೋಪ ಮಾಡುತ್ತಿತ್ತು. ಎರಡನೇ ದಿನ ಐದು ಆರೋಪಗಳನ್ನು ಮಾಡಿದ್ದರು, ಈಗ ಸುಮ್ಮನಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಬಿಟ್ಟು ಬೇರೆ ಯಾರೂ ಏಕೆ ಮಾತನಾಡುತ್ತಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.
ಬಿವೈ ವಿಜಯೇಂದ್ರ, ಆರ್.ಅಶೋಕ್ ಅವರು ನನ್ನ ವಿಚಾರದಲ್ಲಿ ಮಾತನಾಡುತ್ತಿಲ್ಲ. ನಾನು ಕೆಳಮನೆ ಸದಸ್ಯ ಅಲ್ವಾ, ಹಾಗಾದರೆ ಏಕೆ ಮಾತನಾಡುತ್ತಿಲ್ಲ. ದಲಿತರ ಜೊತೆ ಬಡಿದಾಡಿಸುವುದು ಕೋಮುವಾದ ಸೃಷ್ಟಿಸುವುದು, ಇದೆಲ್ಲ ಆರ್ಎಸ್ಎಸ್, ಬಿಜೆಪಿ ಸಂಚು ಎಂದು ವಾಗ್ದಾಳಿ ಮಾಡಿದರು. ಕಾನೂನಿನಲ್ಲಿ ಸರಿ ಇದೆ ಅಂತಾ ಗೊತ್ತಾದ್ಮೇಲೆ ಸುಮ್ಮನಾದರು ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:25 pm, Mon, 2 September 24