ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಆರೋಪ: ಕೆಎಸ್​ ಈಶ್ವರಪ್ಪ ವಿರುದ್ಧ ಕೇಸ್ ದಾಖಲು

ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಆರೋಪ ಹಿನ್ನೆಲೆ ಬಿಜೆಪಿ ಬಂಡಾಯ ನಾಯಕ ಕೆ.ಎಸ್​​ ಈಶ್ವರಪ್ಪ ವಿರುದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಶಿವಮೊಗ್ಗದ ಗೋಪಾಳದ ರಂಗನಾಥಸ್ವಾಮಿ ದೇವಾಲಯಕ್ಕೆ ತೆರಳಿದ್ದ ಈಶ್ವರಪ್ಪ ಈ ವೇಳೆ ಮತಪ್ರಚಾರ ಮಾಡಿದ್ದಾರೆ. ಹಾಗಾಗಿ ತುಂಗಾನಗರ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. 

ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಆರೋಪ: ಕೆಎಸ್​ ಈಶ್ವರಪ್ಪ ವಿರುದ್ಧ ಕೇಸ್ ದಾಖಲು
ಈಶ್ವರಪ್ಪ
Follow us
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ

Updated on:Mar 31, 2024 | 3:21 PM

ಶಿವಮೊಗ್ಗ, ಮಾರ್ಚ್​ 31: ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಆರೋಪ ಹಿನ್ನೆಲೆ ಬಿಜೆಪಿ ಬಂಡಾಯ ನಾಯಕ ಕೆ.ಎಸ್​​ ಈಶ್ವರಪ್ಪ (KS Eshwarappa) ವಿರುದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಶಿವಮೊಗ್ಗದ ಗೋಪಾಳದ ರಂಗನಾಥಸ್ವಾಮಿ ದೇವಾಲಯಕ್ಕೆ ತೆರಳಿದ್ದ ಈಶ್ವರಪ್ಪ ಈ ವೇಳೆ ಮತಪ್ರಚಾರ ಮಾಡಿದ್ದಾರೆ. ಧಾರ್ಮಿಕ ಕೇಂದ್ರದಲ್ಲಿ ಪ್ರಚಾರ ಮಾಡಿದ್ದಕ್ಕೆ ಚುನಾವಣಾ ಅಧಿಕಾರಿಗಳಿಂದ ತುಂಗಾನಗರ ಠಾಣೆಗೆ ದೂರು ಸಲ್ಲಿಸಲಾಗಿದೆ. ಹಾಗಾಗಿ ತುಂಗಾನಗರ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.

ಈಶ್ವರಪ್ಪ ಪುತ್ರ ಕಾಂತೇಶ್​ಗೆ ಹಾವೇರಿ ಟಿಕೆಟ್ ಕೈತಪ್ಪಿಸಿದ್ದು ಬಿಎಸ್ ಯಡಿಯೂರಪ್ಪ. ಯಡಿಯೂರಪ್ಪ ತಮ್ಮ ಮಕ್ಕಳ ಮೇಲೆ ಮಾತ್ರ ವ್ಯಾಮೋಹ. ಮತ್ತೊಬ್ಬರ ಮಕ್ಕಳು ರಾಜಕೀಯವಾಗಿ ಬೆಳೆಯಬಾರದು. ಬಿಜೆಪಿಯು ಒಂದೇ ಕುಟುಂಬದ ಕೈಯಲ್ಲಿ ಸಿಕ್ಕು ಒದ್ದಾಡುತ್ತಿದೆ. ರಾಜ್ಯದ ಕಾರ್ಯಕರ್ತರು ಈ ವ್ಯವಸ್ಥೆ ನೋಡಿ ನೊಂದುಕೊಂಡಿದ್ಧಾರೆ. ಈ ನಡುವೆ ಹಿಂದುತ್ವದ ಹಿನ್ನಲೆ ಇರುವ ಕಟೀಲು, ಪ್ರತಾಪ್ ಸಿಂಹ, ಸದಾನಂದ ಗೌಡ, ಸಿಟಿ ರವಿ ಇವರಿಗೆ ಟಿಕೆಟ್ ಕೊಟ್ಟಿಲ್ಲ. ಕೇವಲ ಬಿಎಸ್ ವೈ ಶೋಭಾಗೆ ಮತ್ತು ಬಸವರಾಜ್ ಬೊಮ್ಮಾಯಿಗೆ ಮಾತ್ರ ಹಠ ಹಿಡಿದು ಟಿಕೆಟ್ ಕೊಡಿಸಿದ್ದಾರೆ ಎಂದು ಇತ್ತೀಚೆಗೆ ಈಶ್ವರಪ್ಪ ಹೇಳಿದ್ದರು.

ಇದನ್ನೂ ಓದಿ: ಬಂಡಾಯ ಸ್ಪರ್ಧೆಗೆ ಪ್ರಧಾನಿ ಮೋದಿ, ಅಮಿತ್ ಶಾ ಕಾರಣವೇ? ಈಶ್ವರಪ್ಪ ಸ್ಫೋಟಕ ಹೇಳಿಕೆ

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಕ್ಷ ಉಳಿಸಲು ಮತ್ತು ಕುಟುಂಬ ರಾಜಕೀಯಕ್ಕೆ ಪಾಠ ಕಲಿಸಲು ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಸ್ಪರ್ಧೆಗೆ ಧುಮುಕಿರುವುದಾಗಿ ಈಶ್ವರಪ್ಪ ಅವರು ಸಾವಿರಾರು ತಮ್ಮ ಅಭಿಮಾನಿಗಳು ಮತ್ತು ಬೆಂಬಲಿಗರ ಮುಂದೆ ಘೋಷಣೆ ಮಾಡಿದ್ದಾರೆ. ಈಶ್ವರಪ್ಪ ಅವರಿಗೆ ನಗರದ ಬಂಜಾರ್ ಕನ್ವೇಕ್ಷನ್ ಹಾಲ್ ನಲ್ಲಿ ಅಭಿಮಾನಿಗಳ ಮುಖಂಡರ ಸಭೆಯಲ್ಲಿ ಈಶ್ವಪರಪ್ಪ ಪರ ಘೋಷಣೆ ಮೊಳಗಿವೆ. ಈಶ್ವರಪ್ಪ ಶಿವಮೊಗ್ಗದಿಂದ ಸ್ಪರ್ಧೆ ಮಾಡಬೇಕೆಂದು ಎಲ್ಲರೂ ಬೆಂಬಲ ಸೂಚಿಸಿದ್ದಾರೆ. ಈಶ್ವರಪ್ಪ ಆರಂಭದಿಂದ ಕೊನೆಯ ವರೆಗೂ ತಮ್ಮ ಭಾಷಣದಲ್ಲಿ ಬಿಎಸ್ ವೈ ವಿರುದ್ದ ವಾಗ್ದಾಳಿ ಮಾಡಿದ್ದರು.

ಆಯೋಗಕ್ಕೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ದೂರು

ವಿಧಾನಸೌಧದಲ್ಲಿ ಪಕ್ಷ ಸೇರ್ಪಡೆ ಮಾಡಿಕೊಂಡಿದ್ದಕ್ಕೆ ಆಯೋಗಕ್ಕೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ದೂರು ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ಮಾರ್ಚ್ 15ರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಸಚಿವರು ಕಟ್ಟುನಿಟ್ಟಾಗಿ ಚುನಾವಣಾ ನೀತಿ ಸಂಹಿತೆ ಪಾಲಿಸಬೇಕು. ನೀತಿ ಸಂಹಿತೆ ಜಾರಿ ನಂತರ ವಿಧಾನಸೌಧದ ಕಚೇರಿ ಬಳಸುವಂತಿಲ್ಲ. ನಿನ್ನೆ ಡಿಸಿಎಂ ಡಿಕೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ವಿಧಾನಸೌಧವನ್ನ ಅಟ್ಟಹಾಸವಾಗಿ ಬಳಕೆ ಮಾಡಿಕೊಂಡಂತಾಗಿದೆ. ಕ್ರಮ ಕೈಗೊಳ್ಳುವುದಾಗಿ ಆಯೋಗದವರು ಭರವಸೆ ನೀಡಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:20 pm, Sun, 31 March 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ