ಪತ್ನಿ ಪರ ಹೇಮಂತ್ ನಿಂಬಾಳ್ಕರ್ ಕೆಲಸ ಆರೋಪ: ಚುನಾವಣಾ ಆಯೋಗಕ್ಕೆ ಬಿಜೆಪಿಯಿಂದ 4 ದೂರು
ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗದಿಂದ ದೂರು ನೀಡಲಾಗಿದೆ. ಕಚೇರಿ ಉಪಯೋಗಿಸಿಕೊಂಡು ಕಾಂಗ್ರೆಸ್ಗೆ ಮತ ನೀಡುವಂತೆ ಹೇಳ್ತಿದ್ದಾರಂತೆ. ಕಚೇರಿ ಉಪಯೋಗಿಸಿಕೊಂಡು ಕಾಂಗ್ರೆಸ್ಗೆ ಮತ ನೀಡುವಂತೆ ಹೇಳ್ತಿದ್ದಾರಂತೆ. ಹೀಗಾಗಿ ಹೇಮಂತ್ ನಿಂಬಾಳ್ಕರ್ ಕರ್ನಾಟಕದಲ್ಲಿ ಇದ್ದರೆ ಮತ್ತೆ ಪ್ರಭಾವ ಬೀರಬಹುದು. ಆಯುಕ್ತ ಸ್ಥಾನದಿಂದ ಬಿಡುಗಡೆ ಮಾಡುವಂತೆ ಆಯೋಗಕ್ಕೆ ದೂರು ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.
ಬೆಂಗಳೂರು, ಮಾರ್ಚ್ 27: ರಾಜ್ಯ ಚುನಾವಣಾ ಆಯೋಗಕ್ಕೆ (Election Commission) ಬಿಜೆಪಿ ನಿಯೋಗದಿಂದ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ 4 ದೂರು ನೀಡಲಾಗಿದೆ. ಬಳಿಕ ಮಾತನಾಡಿದ ವಿಧಾನಪರಿಷತ್ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ, ವಾರ್ತಾ ಮತ್ತು ಸಂಪರ್ಕ ಇಲಾಖೆ ಆಯುಕ್ತರಾಗಿರುವ ಹೇಮಂತ್ ನಿಂಬಾಳ್ಕರ್ ತಮ್ಮ ಕಚೇರಿಯಲ್ಲಿ ಪತ್ನಿ ಅಂಜಲಿ ನಿಂಬಾಳ್ಕರ್ ಪರ ಕೆಲಸ ಮಾಡುತ್ತಿದ್ದಾರೆ. ಅಂಜಲಿ ನಿಂಬಾಳ್ಕರ್ ಉತ್ತರ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.
ಕಚೇರಿ ಉಪಯೋಗಿಸಿಕೊಂಡು ಕಾಂಗ್ರೆಸ್ಗೆ ಮತ ನೀಡುವಂತೆ ಹೇಳ್ತಿದ್ದಾರಂತೆ. ಹೀಗಾಗಿ ಹೇಮಂತ್ ನಿಂಬಾಳ್ಕರ್ ಕರ್ನಾಟಕದಲ್ಲಿ ಇದ್ದರೆ ಮತ್ತೆ ಪ್ರಭಾವ ಬೀರಬಹುದು. ಆಯುಕ್ತ ಸ್ಥಾನದಿಂದ ಬಿಡುಗಡೆ ಮಾಡುವಂತೆ ಆಯೋಗಕ್ಕೆ ದೂರು ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.
ಸರ್ಕಾರದ ಚಿಹ್ನೆ ದುರುಪಯೋಗ: ವಿವೇಕ್ ರೆಡ್ಡಿ
ಬಿಜೆಪಿ ಕಾನೂನು ಪ್ರಕೋಷ್ಠದ ಮುಖ್ಯಸ್ಥ ವಿವೇಕ್ ರೆಡ್ಡಿ ಪ್ರತಿಕ್ರಿಯಿಸಿದ್ದು, ಡಿಸಿಎಂ ಡಿಕೆ ಶಿವಕುಮಾರ ಸರ್ಕಾರದ ಚಿಹ್ನೆ ದುರುಪಯೋಗ ಮಾಡಿಕೊಂಡಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ. ನಿರ್ದೇಶನ ನೀಡುವುದಾಗಿ ಆಯೋಗ ಹೇಳಿದೆ ಎಂದರು.
ಇದನ್ನೂ ಓದಿ: ರಾಜರ ಬಾಯಿಂದ ರಾಜರ ಕಥೆಗಳು ಕಾರ್ಯಕ್ರಮ ನಿಲ್ಲಿಸುವಂತೆ ಯದುವೀರ್ ಒಡೆಯರ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಪ್ರಧಾನಿ ಮೋದಿಯವರ ಹೆಸರು ಹಾಗೂ ಬಿಜೆಪಿಯ ನಕಲಿ ಚಿಹ್ನೆ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಲಿಂಕ್ ಹಾಕಿದ್ದಾರೆ. ಇದರಿಂದ ಮತದಾರರು ಮೋಸ ಹೋಗುತ್ತಿದ್ದಾರೆ. ಹೀಗಾಗಿ ದೂರು ಕೊಟ್ಟಿದ್ದೇವೆ. ರಾಜ್ಯ ಸಚಿವರು ತಮ್ಮ ಅಧಿಕೃತ ಕಚೇರಿಗಳನ್ನು ಚುನಾವಣಾ ಪ್ರಚಾರಕ್ಕೆ ಬಳಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಸನಾತನ ಧರ್ಮಕ್ಕಾಗಿ ಒಗ್ಗೂಡುವ ಸಮಯ ಬಂದಿದೆ; ದ್ವೇಷದ ಪೋಸ್ಟ್ ಹಾಕಿದ್ದಕ್ಕೆ ಸಿ.ಟಿ. ರವಿ ವಿರುದ್ಧ ಎಫ್ಐಆರ್
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಆಯೋಗಕ್ಕೆ ಇತ್ತೀಚೆಗೆ ದೂರು ನೀಡಿದ್ದರು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಬಹಿರಂಗ ಪ್ರಚಾರ ಮತ್ತು ಭಾಷಣಗಳಿಗೆ ನಿರ್ಭಂದಿಸುವಂತೆ ರಾಜ್ಯ ಕಾಂಗ್ರೆಸ್ ಮುಖಂಡ ಕುಶಾಲ್ ಹರುವೇಗೌಡ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.