AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾರರಿಗೆ ಆಮಿಷ ಆರೋಪ: ಕೇಂದ್ರ, ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ವಿಧಾನಸಭೆ ಚುನಾವಣೆ 2023ರ ವೇಳೆ ಮತದಾರರಿಗೆ ಆಮಿಷವೊಡ್ಡಿದ ಆರೋಪ ಸಂಬಂಧ ಚುನಾವಣಾ ಅಕ್ರಮ ತಡೆಗಟ್ಟಲು ನಿರ್ದೇಶನ ಕೋರಿ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತಿತರರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆದ ಹೈಕೋರ್ಟ್, ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ಮತದಾರರಿಗೆ ಆಮಿಷ ಆರೋಪ: ಕೇಂದ್ರ, ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್
ಹೈಕೋರ್ಟ್
Ramesha M
| Updated By: Rakesh Nayak Manchi|

Updated on: Mar 11, 2024 | 9:41 PM

Share

ಬೆಂಗಳೂರು, ಮಾ.11: ವಿಧಾನಸಭೆ ಚುನಾವಣೆ 2023ರ ವೇಳೆ ಮತದಾರರಿಗೆ ಆಮಿಷವೊಡ್ಡಿದ ಆರೋಪ ಸಂಬಂಧ ಚುನಾವಣಾ ಅಕ್ರಮ ತಡೆಗಟ್ಟಲು ನಿರ್ದೇಶನ ಕೋರಿ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (Karnataka High Court), ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ. ಪ್ರತಿವಾದಿಗಳಿಗೆ ಪಿಐಎಲ್ ಪ್ರತಿ, ದಾಖಲೆ ಒದಗಿಸಲು ಸೂಚನೆ ನೀಡಿದ ಕೋರ್ಟ್, ವಿಚಾರಣೆಯನ್ನು ಏಪ್ರಿಲ್ 1ಕ್ಕೆ ಮುಂದೂಡಿತು.

ಆಧುನಿಕ ತಂತ್ರಜ್ಙಾನ ಬಳಸಿ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ. ಮತದಾರರಿಗೆ ಗ್ಯಾರಂಟಿ ಕಾರ್ಡ್ ನೀಡಿ ಆಮಿಷ ಒಡ್ಡಲಾಗಿದೆ. ಇದರಿಂದ ನಿಷ್ಪಕ್ಷಪಾತ ಚುನಾವಣೆ ನಡೆಯುವುದು ಸಾಧ್ಯವಿಲ್ಲ. ಕರ್ನಾಟಕ ಮಾಡಲ್ ಇನ್ನು ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ನಿಖಿಲ್ ಕುಮಾರಸ್ವಾಮಿ ಮತ್ತು ಇತರರು ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಿದ್ದರು.

ಇದನ್ನೂ ಓದಿ: ಶಾಲೆಗಳಲ್ಲಿ ನೀರು, ಶೌಚಾಲಯ ಸ್ಥಿತಿಗತಿ ವರದಿ ಸಲ್ಲಿಸದ ಬಿಬಿಎಂಪಿ: ವಿಳಂಬ ನೀತಿಗೆ ಹೈಕೋರ್ಟ್ ಅಸಮಾಧಾನ

ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಏರಲು ಮತದಾರರನ್ನು ತಮ್ಮ ಪಕ್ಷದತ್ತ ಸೆಳೆದುಕೊಳ್ಳಲು ವಿಧಾನಸಭೆ ಚುನಾವಣೆ ವೇಳೆಯಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅಲ್ಲದೆ, ಸರ್ಕಾರ ರಚನೆಯಾದ ದಿನವೇ ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಭರವಸೆ ನೀಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್​ಗಳನ್ನು ವಿತರಿಸಿತ್ತು.

60 ಸಾವಿರ ಗ್ಯಾರಂಟಿ ಕಾರ್ಡ್​ಗಳನ್ನ ಮನೆ ಮನೆಗೆ ಹೋಗಿ ವಿತರಣೆ ಮಾಡಲಾಗಿದೆ. ಕಾರ್ಡ್​ನ್ನ ಎಟಿಎಮ್ ರೀತಿ ಬಳಸಬಹುದು. ಅದರಲ್ಲಿ ಗಿಫ್ಟ್​​ನ್ನ ಖರೀದಿ ಮಾಡಬಹುದು ಎಂದು ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಅಲ್ಲದೆ, ಮತದಾನ ಬಳಿಕ ಕಾರ್ಡ್ ಬಳಸಬಹುದೆಂದು ಸುಳ್ಳು ಭರವಸೆ ನೀಡಿದ್ದಾರೆ. ಇದರಿಂದ ಚುನಾವಣೆಯಲ್ಲಿ ವ್ಯತ್ಯಾಸ ಆಗಿದೆ. ಮತಕ್ಕೆ ಪ್ರಚಾರ ಆಗಿದ್ದರೇ, ಬಾರ್ ಕೋಡ್ ಯಾಕೆ ಪ್ರಿಂಟ್ ಮಾಡಿದ್ದರು, ಮತದಾರರಿಗೆ ದಾರಿ ತಪ್ಪಿಸುವ ಕೆಲಸ ಆಗಿದೆ ಎನ್ನಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ