ಅಶ್ಲೀಲ ದೃಶ್ಯ ಹಂಚಿಕೆ ಆರೋಪ: ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ

ಅತ್ಯಾಚಾರ ಕೇಸ್​ನ ಉರುಳು ಪ್ರಜ್ವಲ್ ರೇವಣ್ಣಗೆ ಬೆಂಬಿಡದೆ ಕಾಡುತ್ತಿದ್ದರೆ, ಇತ್ತ ಇದೇ ಕೇಸ್ ಮಾಜಿ ಶಾಸಕ ಪ್ರೀತಂ ಗೌಡಗೆ ಸಂಕಷ್ಟ ತಂದೊಡ್ಡಿತ್ತು. ಪ್ರೀತಂ ಗೌಡ ವಿರುದ್ಧ ಅಶ್ಲೀಲ ದೃಶ್ಯ ಹಂಚಿಕೆ ಆರೋಪ ಮಾಡಲಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲೀಫ್ ಸಿಕ್ಕಿದೆ. ಪ್ರೀತಂ ಗೌಡರನ್ನು ಬಂಧಿಸದಂತೆ ಹೈಕೋರ್ಟ್ ಆದೇಶಿಸಿದೆ.

ಅಶ್ಲೀಲ ದೃಶ್ಯ ಹಂಚಿಕೆ ಆರೋಪ: ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ
ಅಶ್ಲೀಲ ದೃಶ್ಯ ಹಂಚಿಕೆ ಆರೋಪ: ಪ್ರೀತಮ್ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jun 28, 2024 | 4:59 PM

ಬೆಂಗಳೂರು, ಜೂನ್​ 28: ಅಶ್ಲೀಲ ದೃಶ್ಯ ಹಂಚಿಕೆ ಆರೋಪದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ (Preetham Gowda) ಬಂಧಿಸದಂತೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಅವರಿಗೆ ಬಂಧನದಿಂದ ಬಿಗ್​ ರಿಲೀಫ್ ಸಿಕ್ಕಿದೆ. ತನಿಖೆ ಮುಂದುವರಿಸಲು ಎಸ್ಐಟಿಗೆ ತಿಳಿಸಿದ್ದು, ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಂ ಗೌಡಗೆ ಹೈಕೋರ್ಟ್ ಸೂಚನೆ ನೀಡಿದೆ. ಪ್ರಜ್ವಲ್​ ರೇವಣ್ಣ (Prajwal Revanna) ಪೆನ್ ಡ್ರೈವ್ ಕೇಸ್ ಪ್ರೀತಂ ಗೌಡಗೆ ಸಂಕಷ್ಟ ತಂದೊಡ್ಡಿತ್ತು.

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ರಿಲೀಸ್ ಮಾಡಿದ್ದು ಯಾರು ಎನ್ನುವುದರ ಬಗ್ಗೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ಕೆಲ ಶಂಕಿತರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಆದರೆ ಸಂತ್ರಸ್ತ ಮಹಿಳೆಯೊಬ್ಬರು ಖುದ್ದು ಪ್ರಜ್ವಲ್‌ ರೇವಣ್ಣ, ಪ್ರೀತಂಗೌಡ ಸೇರಿದಂತೆ ನಾಲ್ವರ ವಿರುದ್ಧ ದೂರು ನೀಡಿದ್ದರು.

ಇದನ್ನೂ ಓದಿ: ಸಂತ್ರಸ್ತೆಯ ಖಾಸಗಿ ವಿಡಿಯೋ ಹರಿಬಿಟ್ಟ ಆರೋಪ: ಪ್ರಜ್ವಲ್​​, ಪ್ರೀತಂ ಗೌಡ ವಿರುದ್ಧ ಎಫ್​ಐಆರ್​

ಪೆನ್‌ಡ್ರೈವ್‌ ಖರೀದಿ ಮಾಡಿಸಿದ್ದೇ ಪ್ರೀತಂಗೌಡ. ಪ್ರೀತಂಗೌಡ ಸಹಚರರು ಪೆನ್‌ಡ್ರೈವ್‌ ಹಂಚಿದ್ದಾರೆ ಅಂತಾ ಆರೋಪಿಸಿದ್ದರು. ಮಹಿಳೆ ನೀಡಿರುವ ದೂರು ಆಧರಿಸಿ ಎಫ್​ಐಆರ್​ ದಾಖಲಿಸಿದ್ದ ಬೆಂಗಳೂರಿನ ಸೈಬರ್‌ ಕ್ರೈಂ ಪೊಲೀಸರು, ಪ್ರೀತಂಗೌಡ ವಿರುದ್ಧ ಕಠಿಣ ಸೆಕ್ಷನ್‌ಗಳನ್ನೇ ಹಾಕಿದ್ದರು.

ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ ವಿಡಿಯೋಗಳನ್ನ ಚಿತ್ರೀಕರಿಸಿದರೆ ಅದನ್ನ ಶೇರ್‌ ಮಾಡಿದ್ದಾರೆ ಅಂತಾ ಪ್ರೀತಂ ವಿರುದ್ಧ ಮಹಿಳೆ ಆರೋಪಿಸಿದ್ದರು. ಹೀಗಾಗಿ, ಪ್ರೀತಂಗೌಡ ವಿರುದ್ಧ ಕಠಿಣ ಸೆಕ್ಷನ್‌ಗಳನ್ನ ಎಫ್ಐಆರ್‌ನಲ್ಲಿ ಸೇರ್ಪಡೆ ಮಾಡಲಾಗಿತ್ತು.

ಇದನ್ನೂ ಓದಿ: ಪ್ರೀತಂ ಬಾಯಲ್ಲಿ ಬರಲಿಲ್ಲ ಪ್ರಜ್ವಲ್‌ ಹೆಸರು…ಜೆಡಿಎಸ್​​ಗೆ ಶಾಕ್ ಕೊಟ್ಟ ಬಿಜೆಪಿ ಉಸ್ತುವಾರಿ

ಐಟಿ ಕಾಯ್ದೆ 66ಇ ಅಡಿಯಲ್ಲಿ ಮಹಿಳೆಯರ ಖಾಸಗಿ ದೃಶ್ಯ ಸೆರೆ ಹಿಡಿದು ಬಹಿರಂಗ ಮಾಡಿರುವ ಆರೋಪದ ಸೆಕ್ಷನ್‌ ಸೇರಿಸಲಾಗಿತ್ತು. ಇದಷ್ಟೇ ಅಲ್ಲ, ಬೆಂಗಳೂರಿನಲ್ಲಿ ಪೆನ್‌ಡ್ರೈವ್‌ ಖರೀದಿ ಮಾಡಿಸಿದ್ದೇ ಪ್ರೀತಂಗೌಡ, ಅವರ ಸಹಚರರಾದ ಕಿರಣ್ ಮತ್ತು ಶರತ್‌ ಪೆನ್‌ಡ್ರೈವ್‌ ಹಂಚಿದ್ದಾರೆ ಎಂದು ಎಫ್​ಐಆರ್​ನಲ್ಲಿ ಉಲ್ಲೇಖಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:43 pm, Fri, 28 June 24

ತಾಜಾ ಸುದ್ದಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?