ಮುನಿರತ್ನ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ಇನ್ಸ್​​ಪೆಕ್ಟರ್​​ ವಿರುದ್ಧ ಸಿಎಂಗೆ ವೇಲು ದೂರು

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳ ಬಗ್ಗೆ ತನಿಖೆಗೆ ಸರ್ಕಾರದ ಮುಂದಾಗಿದೆ. ಇತ್ತೀಚೆಗೆ ಎಸ್​ಐಟಿ ರಚನೆ ಕೂಡ ಮಾಡಲಾಗಿದೆ. ಈ ಮಧ್ಯೆ ಶಾಸಕ ಮುನಿರತ್ನ ಬೆಂಬಲಿಗರಿಂದ ಜೀವ ಬೆದರಿಕೆ ಹಿನ್ನೆಲೆ ಮಾಜಿ ಕಾರ್ಪೊರೇಟರ್​ ವೇಲು ನಾಯಕ್ ಹಾಗೂ ದಲಿತ ಸಂಘಟನೆ ಮುಖಂಡರು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ.

ಮುನಿರತ್ನ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ಇನ್ಸ್​​ಪೆಕ್ಟರ್​​ ವಿರುದ್ಧ ಸಿಎಂಗೆ ವೇಲು ದೂರು
ಮುನಿರತ್ನ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ಇನ್ಸ್​​ಪೆಕ್ಟರ್​​ ವಿರುದ್ಧ ಸಿಎಂಗೆ ವೇಲು ದೂರು
Follow us
ಗಂಗಾಧರ​ ಬ. ಸಾಬೋಜಿ
|

Updated on: Sep 23, 2024 | 3:05 PM

ಬೆಂಗಳೂರು, ಸೆಪ್ಟೆಂಬರ್ 23: ಬಿಜೆಪಿ ಶಾಸಕ ಮುನಿರತ್ನ (Munirathna) ಮೂರು ಪ್ರಕರಣಗಳಲ್ಲಿ ಸಿಲುಕಿಕೊಂಡು  ಒದ್ದಾಡುತ್ತಿದ್ದಾರೆ. 2 ಕೇಸ್​ಗಳಿಂದ ಆಚೆ ಬಂದು ಮತ್ತೊಂದರಲ್ಲಿ ಜೈಲು ಪಾಲಾಗಿದ್ದಾರೆ. ಈ ಮಧ್ಯೆ ಅತ್ಯಾಚಾರ ಆರೋಪ ಮಾಡಿರುವ ಸಂತ್ರಸ್ತೆ ಪುತ್ರನಿಗೆ ಮುನಿರತ್ನ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿತ್ತು. ಮುನಿರತ್ನ ನಾಯ್ಡು ಬೆಂಬಲಿಗರಿಂದ ಜೀವ ಬೆದರಿಕೆ ಹಿನ್ನೆಲೆ ಮಾಜಿ ಕಾರ್ಪೊರೇಟರ್​ ವೇಲು ನಾಯಕ್ ಹಾಗೂ ದಲಿತ ಸಂಘಟನೆ ಮುಖಂಡರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ.

ದೂರು ನೀಡಿದ್ದವರಿಗೆ ಹಾಗೂ ನಮಗೆ ಜೀವ ಬೆದರಿಕೆ ಕರೆ ಬರುತ್ತಿವೆ. ನಿತ್ಯವೂ ಒಂದಿಲ್ಲೊಂದು ರೀತಿಯಲ್ಲಿ ನಮಗೆ ತೊಂದರೆ ಕೊಡುತ್ತಿದ್ದಾರೆ. ಮುನಿರತ್ನ ಆಪ್ತ ಹೆಬ್ಬಗೂಡಿ ಠಾಣೆ ಐ.ಎನ್.ರೆಡ್ಡಿ ಸಸ್ಪೆಂಡ್ ಮಾಡುವಂತೆಯೂ ಸಿಎಂಗೆ ಮನವಿ ಮಾಡಲಾಗಿದೆ.

ಹೆಬ್ಬಗೋಡಿ ಠಾಣೆ ಪಿಐ ಐಎನ್​​ ರೆಡ್ಡಿ ಸಾಕ್ಷಿನಾಶಕ್ಕೆ ಮುಂದಾಗುತ್ತಿದ್ದಾರೆ: ವೇಲು ನಾಯಕ್ ಗಂಭೀರ ಆರೋಪ

ಸಿಎಂ ಭೇಟಿ ಬಳಿಕ ಮಾತನಾಡಿದ ಮಾಜಿ ಕಾರ್ಪೊರೇಟರ್​ ವೇಲು ನಾಯಕ್, ಹೆಬ್ಬಗೋಡಿ ಠಾಣೆ ಪಿಐ ಐಎನ್​​ ರೆಡ್ಡಿ ಸಾಕ್ಷಿನಾಶಕ್ಕೆ ಮುಂದಾಗುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮುನಿರತ್ನ ನಾಯ್ಡುಗೆ ಐಎನ್​ ರೆಡ್ಡಿಯಿಂದ ವಿರೋಧಿಗಳ ಫೋನ್ ಟ್ಯಾಪ್​ನಿಂದ ಹಿಡಿದು ಎಲ್ಲಾ ರೀತಿಯ ಸಹಾಯ ಮಾಡಿದ್ದಾನೆ. ಸಾಕ್ಷಿ ನಾಶಪಡಿಸುವವರಲ್ಲಿ ಇನ್ಸ್​ಪೆಕ್ಟರ್​ ಐ.ಎನ್.ರೆಡ್ಡಿ ಪ್ರಮುಖರು. ಹೀಗಾಗಿ ಅವರನ್ನು ಅಮಾನತು ಮಾಡಬೇಕು. ಜೊತೆಗೆ ಪ್ರಕರಣದ ತನಿಖೆ ತೀವ್ರಗೊಳಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಾಸಕ ಮುನಿರತ್ನ ವಿರುದ್ಧದ ಕೇಸ್​ಗಳ ತನಿಖೆಗೆ ಎಸ್​ಐಟಿ ರಚನೆ ಮಾಡಿದ ಸರ್ಕಾರ

ಮುನಿರತ್ನ ನಾಯ್ಡು ಆಪ್ತೆ ಸುನಂದಮ್ಮ ನಿನ್ನೆ ಸಾಕ್ಷಿ ಹೇಳುವವರ ಮನೆಗೆ ನುಗ್ಗಿ ಸುನಂದಮ್ಮ ಬೆದರಿಕೆ ಹಾಕಿದ್ದಾರೆ. ಬೆದರಿಕೆ ಹಾಕಿದ್ದ ಬಗ್ಗೆ ಸಿಸಿಟಿವಿ ದೃಶ್ಯ ಸಮೇತ ದೂರು ಕೊಟ್ಟಿದ್ದೇವೆ.

ಅತ್ಯಾಚಾರ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನ ವಿರುದ್ಧ ಇದೀಗ ಮತ್ತೊಂದು ಗಂಭೀರ ಆರೋಪವೇ ಕೇಳಿ ಬಂದಿದೆ. ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಮಾಡಿರುವ ಸಂತ್ರಸ್ತೆಯ ಪುತ್ರನಿಗೇ ಬೆಂಬಲಿಗರು ಬೆದರಿಕೆ ಹಾಕಿದ್ದಾರಂತೆ.

ಇದನ್ನೂ ಓದಿ: ಬಿಜೆಪಿ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು ಸಹಕರಿಸಿ: ಕಾಂಗ್ರೆಸ್​ ವ್ಯಂಗ್ಯಭರಿತ ಸಲಹೆ!

ಎಲ್ಲಾದ್ರೂ ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ನಿಮ್ಮ ಮನೆಗೆ ಬೆಂಕಿಯನ್ನೇ ಹಚ್ಚುತ್ತೇವೆ. ನಿಮ್ಮ ವಂಶವೇ ಇರದಂತೆ ಮಾಡುತ್ತೇವೆ ಅಂತಾ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಸಾಕ್ಷಿಗಳ ಮನೆಗೆ ನುಗ್ಗಿ ಬಿಜೆಪಿ ಕಾರ್ಯಕರ್ತೆಯರೊಬ್ಬರು ಬೆದರಿಕೆ ಹಾಕಿದ್ದಾರಂತೆ. ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಗೆ ಸಂತ್ರಸ್ತೆಯ ಮಗ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ವರದಿ: ಈರಣ್ಣ ಬಸವ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP