AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಲಹಂಕ ಬಳಿ ಭೂಕಬಳಿಕೆ ಆರೋಪ: ಪೇಚಿಗೆ ಸಿಲುಕಿದ ಕಾಂಗ್ರೆಸ್ ಮುಖಂಡ

ದೇವನಹಳ್ಳಿ: ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್ ಹಾಗೂ ನಟ ಪುನೀತ್ ರಾಜ್‌ಕುಮಾರ್ ವಿರುದ್ಧ ಭೂಕಬಳಿಕೆ ಆರೋಪ ಕೇಳಿ ಬಂದಿದೆ. ಅಧಿಕಾರ ಬಳಸಿ ಸರ್ಕಾರಿ ಜಮೀನು ಕಬಳಿಕೆ ಮಾಡಿದ್ದಾರೆ ಎಂದು ಯಲಹಂಕ ಕಾಂಗ್ರೆಸ್ ಮುಖಂಡರು ಮತ್ತು ರೈತಸಂಘ ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಕಳೆದ ಸೋಮವಾರ ಶಾಸಕ ಮತ್ತು ನಟನ ವಿರುದ್ಧ ಆರೋಪಿಸಿ ಯಲಹಂಕ ಬಳಿಯ ಲಿಂಗರಾಜಪುರದಲ್ಲಿ ಪ್ರತಿಭಟನೆ ನಡೆಸಿದ್ದರು. ಲಿಂಗರಾಜಪುರ ಸರ್ವೆ ನಂ. 5ರ 8 ಎಕರೆ, ಮೈಲನಹಳ್ಳಿ ಸರ್ವೆ ನಂ. 25ರಲ್ಲಿ 10 ಎಕರೆ ಗೋಮಾಳ ಕಬಳಿಕೆ […]

ಯಲಹಂಕ ಬಳಿ ಭೂಕಬಳಿಕೆ ಆರೋಪ: ಪೇಚಿಗೆ ಸಿಲುಕಿದ ಕಾಂಗ್ರೆಸ್ ಮುಖಂಡ
ಆಯೇಷಾ ಬಾನು
ಆಯೇಷಾ ಬಾನು|

Updated on: Aug 13, 2020 | 11:05 AM

Share

ದೇವನಹಳ್ಳಿ: ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್ ಹಾಗೂ ನಟ ಪುನೀತ್ ರಾಜ್‌ಕುಮಾರ್ ವಿರುದ್ಧ ಭೂಕಬಳಿಕೆ ಆರೋಪ ಕೇಳಿ ಬಂದಿದೆ. ಅಧಿಕಾರ ಬಳಸಿ ಸರ್ಕಾರಿ ಜಮೀನು ಕಬಳಿಕೆ ಮಾಡಿದ್ದಾರೆ ಎಂದು ಯಲಹಂಕ ಕಾಂಗ್ರೆಸ್ ಮುಖಂಡರು ಮತ್ತು ರೈತಸಂಘ ಕಾರ್ಯಕರ್ತರು ಆರೋಪ ಮಾಡಿದ್ದಾರೆ.

ಕಳೆದ ಸೋಮವಾರ ಶಾಸಕ ಮತ್ತು ನಟನ ವಿರುದ್ಧ ಆರೋಪಿಸಿ ಯಲಹಂಕ ಬಳಿಯ ಲಿಂಗರಾಜಪುರದಲ್ಲಿ ಪ್ರತಿಭಟನೆ ನಡೆಸಿದ್ದರು. ಲಿಂಗರಾಜಪುರ ಸರ್ವೆ ನಂ. 5ರ 8 ಎಕರೆ, ಮೈಲನಹಳ್ಳಿ ಸರ್ವೆ ನಂ. 25ರಲ್ಲಿ 10 ಎಕರೆ ಗೋಮಾಳ ಕಬಳಿಕೆ ಮಾಡಲಾಗಿದೆಯಂತೆ.

ನಕಲಿ ದಾಖಲೆ ಸೃಷ್ಟಿಸಿ ಶಾಸಕರ ಪತ್ನಿ ಹೆಸರಲ್ಲಿ 5 ಎಕರೆ, ನಟ ಪುನಿತ್ ರಾಜಕುಮಾರ್ ಪತ್ನಿ ಹೆಸರಲ್ಲಿ 5 ಎಕರೆ ಭೂಕಬಳಿಕೆ ಮಾಡಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಅಕ್ರಮ ಬಯಲಿಗೆಳೆಯುವಂತೆ ಕೈ ಮುಖಂಡರು ಮತ್ತು ರೈತಸಂಘ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

ಪೇಚಿಗೆ ಸಿಲುಕಿದ ಕಾಂಗ್ರೆಸ್ ಮುಖಂಡ ಆದರೆ ಜಮೀನಿನ ಖಾತೆದಾರರು ಆರೋಪವನ್ನ ತಳ್ಳಿ ಹಾಕಿದ್ದಾರೆ. ಜಮೀನನ್ನ ಕಡಿಮೆ ಬೆಲೆಗೆ ಕೊಡುವಂತೆ ಕೆಲವರು ಕಿರುಕುಳ ನೀಡಿದ್ರು ಜಮೀನು ಕೊಡದಿದ್ದಕ್ಕೆ ಸರ್ಕಾರಿ ಭೂಮಿ ಕಬಳಿಕೆ ಎಂದು ಆರೋಪ ಮಾಡಿದ್ದಾರೆ. ಇಲ್ಲಿ ಯಾವುದೇ ಅಕ್ರಮವಾಗಿಲ್ಲ ಎಂದು ಮೂಲ ರೈತರು ಸ್ಪಷ್ಟ ಪಡಿಸಿದ್ದಾರೆ. ಇತ್ತ ದಾಖಲೆ ಬಿಡುಗಡೆ ಮಾಡದೆ ರೈತಸಂಘ ಕಾರ್ಯಕರ್ತರು, ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಪೇಚಿಗೆ ಸಿಲುಕಿದ್ದಾರೆ.

ಜಮೀನನ್ನ ಯಾರು ಬೇಕಾದ್ರೂ ಖರೀದಿ ಮಾಡಬಹುದು. ಹಿಡುವಳಿ ಜಮೀನಿಗೆ ಸೂಕ್ತ ದಾಖಲೆ ಕೊಟ್ಟು ಖರೀದಿಸಿದ್ದೇವೆ ಕಾಂಗ್ರೆಸ್ ಮುಖಂಡರು ಅರ್ಥವಿಲ್ಲದೆ ಆರೋಪ ಮಾಡ್ತಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಿದ್ರೆ ತನಿಖೆ ಮಾಡಿಸಲಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಸ್. ಆರ್ ವಿಶ್ವನಾಥ್ ಸವಾಲು ಹಾಕಿದ್ದಾರೆ.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು