AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಎಸ್​ಸಿ, ಕೆಇಸಿ, ಕೆಎಸ್​ಪಿ ನೇಮಕಾತಿಯಲ್ಲಿ ಅಕ್ರಮ ಖಂಡಿಸಿ ಪ್ರತಿಭಟನೆಗೆ ಮುಂದಾದ ಅಭ್ಯರ್ಥಿಗಳು; ಪೊಲೀಸರಿಂದ ತಡೆ

ಕೆಪಿಎಸ್​ಸಿ, ಕೆಇಸಿ ಮಯ್ಯು ಕೆಎಸ್​ಪಿ ನೇಮಕಾತಿಯಲ್ಲಿನ ಅಕ್ರಮ ವಿರೋಧಿಸಿ ಪ್ರತಿಭಟನೆಗೆ ಮುಂದಾಗಿದ್ದ ಅಭ್ಯರ್ಥಿಗಳನ್ನು ಪೊಲೀಸರು ತಡೆದಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ವಕ್ತಾರೆ ಭವ್ಯಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೆಪಿಎಸ್​ಸಿ, ಕೆಇಸಿ, ಕೆಎಸ್​ಪಿ ನೇಮಕಾತಿಯಲ್ಲಿ ಅಕ್ರಮ ಖಂಡಿಸಿ ಪ್ರತಿಭಟನೆಗೆ ಮುಂದಾದ ಅಭ್ಯರ್ಥಿಗಳು; ಪೊಲೀಸರಿಂದ ತಡೆ
ಕಾಂಗ್ರೆಸ್ ವಕ್ತಾರೆ ಭವ್ಯಾನರಸಿಂಹಮೂರ್ತಿ ಪೊಲೀಸರ ವಶಕ್ಕೆ
TV9 Web
| Edited By: |

Updated on:Aug 19, 2022 | 11:26 AM

Share

ಬೆಂಗಳೂರು: ಕೆಪಿಎಸ್​ಸಿ, ಕೆಇಸಿ ಮತ್ತು ಕೆಎಸ್​ಪಿ ನೇಮಕಾತಿಯಲ್ಲಿನ ಅಕ್ರಮ, ಭ್ರಷ್ಟಾಚಾರ, ವಿಳಂಬ ನೀತಿ ವಿರೋಧಿಸಿ ಕರ್ನಾಟಕ ಸ್ಫರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳ ಒಕ್ಕೂಟದಿಂದ ಪ್ರತಿಭಟನಾ ರ್ಯಾಲಿಗೆ ಮುಂದಾಗಿದ್ದು, ಅಭ್ಯರ್ಥಿಗಳನ್ನು ಪೊಲೀಸರು ತಡೆದಿದ್ದಾರೆ. ನೋಂದ ಯುವಜನತೆಯ ನಡೆ ರಾಜಭವನದ ಕಡೆ ಅಂತಾ ಅಭ್ಯರ್ಥಿಗಳು ರ್ಯಾಲಿ ನಡೆಸಲು ಸಿದ್ಧತೆ ನಡೆಸಲಾಗಿದ್ದು, ವಿಜಯಗರದಲ್ಲಿರುವ ಹಂಪಿನಗರದ ಗ್ರಂಥಾಲಯದಿಂದ ರಾಜಭವನದವರೆಗೂ ರ್ಯಾಲಿಗೆ ಸಾಗಲಿತ್ತು. ಆದರೆ ಪೊಲೀಸರು ಮಧ್ಯಪ್ರವೇಶಿಸಿ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಜಮಾಯಿಸಿದ ನೂರಾರು ಅಭ್ಯರ್ಥಿಗಳನ್ನು ತಡೆದರು.

ರ್ಯಾಲಿ ನಡೆಸದಿರಲು ನ್ಯಾಯಾಲಯದ ಸೂಚನೆ ಇದೆ ಎಂದು ಹೇಳಿದ ಪೊಲೀಸರು ಅಭ್ಯರ್ಥಿಗಳನ್ನು ತಡೆದಿದ್ದಾರೆ. ಆ ಮೂಲಕ ಹಂಪಿನಗರದ ಮುಂದೆ ಪ್ರತಿಭಟನಾ ನಡೆಗೆ ಬಂದ ಅಭ್ಯರ್ಥಿಗಳನ್ನ ಪೊಲೀಸರು ವಶಕ್ಕೆ ಪಡೆದರು. ಅಷ್ಟೇ ಅಲ್ಲದೆ ಅಭ್ಯರ್ಥಿಗಳು ಹಂಪಿನಗರದ ಗ್ರಂಥಾಲಯದ ಬಳಿ ಅಭ್ಯರ್ಥಿಗಳು ಬರದಂತೆ ನೂರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳಿಂದ ಸರ್ಪಗಾವಲು ನಡೆಸಲಾಗಿದೆ. ಇದರ ಜೊತೆಗೆ ಪ್ರತಿಭಟನೆಗೆ ಬರುವ ಅಭ್ಯರ್ಥಿಗಳನ್ನ ವಶಕ್ಕೆ ಪಡೆಯಲು ಎರಡು ಬಿಎಂಟಿಸಿ ಬಸ್ ಕೂಡ ಪೊಲೀಸರು ತಂದಿದ್ದಾರೆ. ಇಲ್ಲಿಂದ ಪ್ರತಿಭಟನಾ ರ್ಯಾಲಿಗೆ ಯಾವುದೇ ಅವಕಾಶ ಇಲ್ಲ ಎಂದು ಪೊಲೀಸರು ಅಭ್ಯರ್ಥಿಗಳಿಗೆ ಮನವರಿಕೆ ಮಾಡಿದ್ದಾರೆ.

ಕಾಂಗ್ರೆಸ್ ವಕ್ತಾರೆ ಪೊಲೀಸರ ವಶಕ್ಕೆ

ಕೆಪಿಎಸ್​ಸಿ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದ ಕಾಂಗ್ರೆಸ್ ವಕ್ತಾರೆ ಭವ್ಯಾನರಸಿಂಹಮೂರ್ತಿ ಅವರನ್ನು ಬೆಂಗಳೂರಿನ ವಿಜಯನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. KPSCಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪ ಸಂಬಂಧ ಸರ್ಕಾರದ ವಿರುದ್ಧ ಭವ್ಯಾ ಅವರು ವಿಜಯನಗರದಲ್ಲಿ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಿದ್ದರು. ಪೊಲೀಸರ ಅನುಮತಿ ಪಡೆಯದೆ 2 ಸಾವಿರ ಅಭ್ಯರ್ಥಿಗಳನ್ನ ಸೇರಿಸಿಕೊಂಡು ಇಂದು ಪ್ರತಿಭಟನಾ ಜಾಥಾ ನಡೆಸಲು ಮುಂದಾಗಿದ್ದರು. ಅನುಮತಿ ಪಡೆಯದೆ ಪ್ರತಿಭಟನೆಗೆ ಮುಂದಾದ ಹಿನ್ನೆಲೆ ಪೊಲೀಸರು ಭವ್ಯಾ ಅವರನ್ನು ವಶಕ್ಕೆ ಪಡೆದು ವಿಜಯನಗರ ಠಾಣೆಯಿಂದ ಜ್ಞಾನಭಾರತಿ ಠಾಣೆಗೆ ಸ್ಥಳಾಂತರಿಸಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:26 am, Fri, 19 August 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ