AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿ.ವಿಯಲ್ಲಿ ಮತ್ತೊಂದು ಹಗರಣದ ವಾಸನೆ: ಹಣಕ್ಕಾಗಿ ಅಂಕಪಟ್ಟಿಗಳ ಅಕ್ರಮ ತಿದ್ದುಪಡಿ ಆರೋಪ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹಣಕ್ಕಾಗಿ ಕೆಲ ಅಂಕಪಟ್ಟಿಗಳಲ್ಲಿ ಅಂಕಗಳ ಅಕ್ರಮ ತಿದ್ದುಪಡಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಸ್ತುತ ಪರೀಕ್ಷಾ ಮೌಲ್ಯಮಾಪನ ರಿಜಿಸ್ಟ್ರಾರ್ ಆಗಿರುವ ದೇವರಾಜು ಆಪ್ತರ ವಿರುದ್ಧ ಅಕ್ರಮದ ಆರೋಪ ಕೇಳಿಬಂದಿದೆ.

ಬೆಂಗಳೂರು ವಿ.ವಿಯಲ್ಲಿ ಮತ್ತೊಂದು ಹಗರಣದ ವಾಸನೆ: ಹಣಕ್ಕಾಗಿ ಅಂಕಪಟ್ಟಿಗಳ ಅಕ್ರಮ ತಿದ್ದುಪಡಿ ಆರೋಪ
ಬೆಂಗಳೂರು ವಿಶ್ವವಿದ್ಯಾಲಯ
KUSHAL V
|

Updated on: Jan 05, 2021 | 11:01 PM

Share

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹಣಕ್ಕಾಗಿ ಕೆಲ ಅಂಕಪಟ್ಟಿಗಳಲ್ಲಿ ಅಂಕಗಳ ಅಕ್ರಮ ತಿದ್ದುಪಡಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಸ್ತುತ ಪರೀಕ್ಷಾ ಮೌಲ್ಯಮಾಪನ ರಿಜಿಸ್ಟ್ರಾರ್ ಆಗಿರುವ ದೇವರಾಜು ಆಪ್ತರ ವಿರುದ್ಧ ಅಕ್ರಮದ ಆರೋಪ ಕೇಳಿಬಂದಿದೆ.

ಬೆಂಗಳೂರು ವಿವಿಯ ಪರೀಕ್ಷಾ ವಿಭಾಗದಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದ್ದು ವಿಶ್ವವಿದ್ಯಾಲಯದ ಅಂಕಪಟ್ಟಿಗಳಲ್ಲಿ ಕಂಪ್ಯೂಟರ್ ವಿಭಾಗದ ಕೆಲ ಸಿಬ್ಬಂದಿಯಿಂದ ಅಕ್ರಮ ನಡೆದಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ವಿಭಾಗದ ನಾಗೇಶ್, ಕೆ.ಎನ್.ಪ್ರಧಾನ್, ರಾಜಕುಮಾರ್, ಕಾಂತಿಮತಿ, ಶಿವರಾಜ್ ರಾಮಕೃಷ್ಣ, ‌ಮಧುಕರ್ ಮತ್ತು ವೀಣಾ ವಿರುದ್ಧ ಆರೋಪ ಕೇಳಿಬಂದಿದೆ.

ಅಂದ ಹಾಗೆ, ಈ ಹಿಂದೆಯೂ ಇವರ ಮೇಲೆ ಅಂಕಗಳ ತಿದ್ದುಪಡಿ ಆರೋಪ ಕೇಳಿಬಂದಿತ್ತು. ಹಾಗಾಗಿ, ಇವರನ್ನು ಬೇರೆ ವಿಭಾಗಗಳಿಗೆ ವರ್ಗಾವಣೆ ಮಾಡಲಾಗಿತ್ತಂತೆ. ಆದರೆ, ಡಾ.ವೇಣುಗೋಪಾಲ್ ವಿ.ಸಿ ಆಗುತ್ತಿದ್ದಂತೆ ಇವರೆಲ್ಲಾ ಮತ್ತೆ ಅದೇ ಜಾಗಕ್ಕೆ ವರ್ಗಾವಣೆ‌ ಮಾಡಿಸಿಕೊಂಡು ಅಕ್ರಮ ಮುಂದುವರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಸ್ತುತ ಇವರು ಅದೇ ವಿಭಾಗದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಸುಮಾರು 804 ಅಂಕಪಟ್ಟಿಗಳಲ್ಲಿ ಅಂಕಗಳ ಬದಲಾವಣೆಯ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದ್ದು ಒಂದು ಪೇಪರ್​ಗೆ ₹20 ಸಾವಿರದವರೆಗೂ ಹಣ ನಿಗದಿ ಸಹ ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ.

ಸದ್ಯ, ಅಂಕಪಟ್ಟಿಗಳ ಅಂಕ ತಿದ್ದುಪಡಿ ಅಕ್ರಮದ ಬಗ್ಗೆ ಬೆಂಗಳೂರು ವಿವಿ ರಿಜಿಸ್ಟ್ರಾರ್ ಜ್ಯೋತಿ ಅವರಿಂದ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ. TRS ಎಂಬ ಖಾಸಗಿ ಕಂಪನಿಗೆ ಟೆಂಡರ್ ಕೊಡಲಾಗಿದ್ದು, ಇವರ ಮೇಲೂ ಸಹ ದೂರು ಕೊಡಲಾಗಿದೆ ಎಂಬ ಮಾಹಿತಿ ದೊರೆತಿದೆ. ಜೊತೆಗೆ, ಸುಮಾರು ₹4ರಿಂದ 5 ಕೋಟಿ ಅಕ್ರಮ ನಡೆದಿರುವ ಸಾಧ್ಯತೆಯಿದೆ ಎಂದು ಜ್ಯೋತಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಹೇಳಲಾಗಿದೆ.

ಬೆಂಗಳೂರು ವಿವಿ ಕುಲಪತಿ ವಿರುದ್ಧ ಡಿಸಿಎಂಗೆ ಸಿಂಡಿಕೇಟ್ ಸದಸ್ಯರ ದೂರು

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ