ಸರ್ಕಾರದಲ್ಲಿ ಮತ್ತೆ ಪ್ರತಿಧ್ವನಿಸಿದ ವರ್ಗಾವಣೆ ದಂಧೆ ಆರೋಪ; ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ಇಡಿಗೆ ದೂರು

| Updated By: ಆಯೇಷಾ ಬಾನು

Updated on: Jan 23, 2024 | 7:23 AM

ಸಚಿವ ತಿಮ್ಮಾಪುರ ಅವರು ಲೋಕಸಭಾ ಚುನಾವಣೆಗೆ ಹಣ ಹೊಂದಿಸಲು ಇಲಾಖಾಧಿಕಾರಿಗಳ ವರ್ಗಾವಣೆಗೆ ಲಂಚ ಸ್ವೀಕರಿಸಿದ್ದಾರೆ. ವರ್ಗಾವಣೆ ಹೆಸರಿನಲ್ಲಿ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿದ್ದಾರೆ.

ಸರ್ಕಾರದಲ್ಲಿ ಮತ್ತೆ ಪ್ರತಿಧ್ವನಿಸಿದ ವರ್ಗಾವಣೆ ದಂಧೆ ಆರೋಪ; ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ಇಡಿಗೆ ದೂರು
ಸಚಿವ ಆರ್.ಬಿ.ತಿಮ್ಮಾಪುರ
Follow us on

ಬೆಂಗಳೂರು, ಜ.23: ರಾಜ್ಯ ಸರ್ಕಾರದಲ್ಲಿ ಮತ್ತೆ ವರ್ಗಾವಣೆ ದಂಧೆ ಆರೋಪ ಪ್ರತಿಧ್ವನಿಸಿದೆ. ಅಬಕಾರಿ ಖಾತೆ ಸಚಿವ ಆರ್.ಬಿ.ತಿಮ್ಮಾಪುರ (RB Thimmapur) ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ (Dinesh Kallahalli) ಅವರು ಜಾರಿ ನಿರ್ದೇಶನಾಲಯಕ್ಕೆ (Enforcement Directorate) ದೂರು ಸಲ್ಲಿಸಿದ್ದಾರೆ. ಅಬಕಾರಿ ಇಲಾಖೆ ಡಿಸಿ, ಡಿವೈಎಸ್​ಪಿಗಳಿಂದ ಹಣ ಪಡೆದು ವರ್ಗಾವಣೆ ದಂಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ಸಲ್ಲಿಸಿದ್ದಾರೆ.

ಸಚಿವ ತಿಮ್ಮಾಪುರ ಅವರು ಲೋಕಸಭಾ ಚುನಾವಣೆಗೆ ಹಣ ಹೊಂದಿಸಲು ಇಲಾಖಾಧಿಕಾರಿಗಳ ವರ್ಗಾವಣೆಗೆ ಲಂಚ ಸ್ವೀಕರಿಸಿದ್ದಾರೆ. ವರ್ಗಾವಣೆ ಹೆಸರಿನಲ್ಲಿ ದಂಧೆ ನಡೆಸುತ್ತಿದ್ದಾರೆ. ಇಲ್ಲಿವರೆಗೆ 18 ಕೋಟಿ ಲಂಚ ಸ್ವೀಕರಿಸಿದ್ದಾರೆ. ಲಂಚದ ಹಣದಲ್ಲಿ ಸಚಿವರಿಗೆ ಸಿಂಹಪಾಲು ನೀಡಲಾಗಿದೆ. 18 ಕೋಟಿ ಹಣದಲ್ಲಿ 13 ಕೋಟಿ ಸಚಿವರ ಖಾತೆಗೆ ಬಿದ್ದಿದೆ. ಉಳಿದ ಹಣ ಸಹಾಯಕ ಕಾರ್ಯದರ್ಶಿ ಸೇರಿದಂತೆ ಕೋಲಾರ ಅಬಕಾರಿ ಡಿಸಿ ಬಸವರಾಜ ಸಂದಿಗ್ವಾಡ್, ರಂಗಪ್ಪ, ಬೆಂಗಳೂರು ದಕ್ಷಿಣ ಅಬಕಾರಿ ಡಿಸಿ ವಿವೇಕ್ ಖಾತೆಗೆ ತಲುಪಿದೆ ಎಂದು ದಿನೇಶ್ ಕಲ್ಲಹಳ್ಳಿ ಅವರು ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಲಂಚದ ಹಣದಲ್ಲಿ ಅಧಿಕಾರಿಗಳು ಸಹ ಶಾಮೀಲಾಗಿದ್ದಾರೆ. ಅಬಕಾರಿ ಸಚಿವರ ಲಂಚಾವತಾರಕ್ಕೆ ಸರ್ಕಾರ ಕುಮ್ಮಕ್ಕು ನೀಡುತ್ತಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸೂಕ್ತ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಇಡಿಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ನೀಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಜೈ ಶ್ರೀರಾಮ್ ಎಂದ ಸಿದ್ದರಾಮಯ್ಯ; ಕೆಟ್ಟ ಮೇಲೆ ಬುದ್ಧಿ ಬಂದಂತಾಗಿದೆ ಎಂದ ಕೆಎಸ್ ಈಶ್ವರಪ್ಪ

ಲಂಚ ಸ್ವೀಕರಿಸುತ್ತಿದ್ದ ಜೆಸ್ಕಾಂ AEE ‘ಲೋಕಾ’ ಬಲೆಗೆ

ಐದು ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಜೆಸ್ಕಾಂ AEE ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸುಗೂರಿನ ಜೆಸ್ಕಾಂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿತ್ತು. ಜೆಸ್ಕಾಂ ಎಇಇ ಕೆಂಚಪ್ಪ ಅರೆಸ್ಟ್ ಆಗಿದ್ದು, ಜೆಸ್ಕಾಂ ಗುತ್ತಿಗೆದಾರ ನಾಯಕ್​ನಿಂದ 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಫೋನ್​ಪೇ ಮೂಲಕ 5 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ರು.

ಇಂದು 545 ಪಿಎಸ್ಐ ನೇಮಕಾತಿ ಮರು ಪರೀಕ್ಷೆ

ಬೆಂಗಳೂರಿನಲ್ಲಿಂದು 545 ಪಿಎಸ್ಐ ನೇಮಕಾತಿ ಮರು ಪರೀಕ್ಷೆ ನಡೆಯಲಿದೆ. ಬೆಂಗಳೂರಿನಲ್ಲಿ 117 ಕೇಂದ್ರಗಳಲ್ಲಿ ಮರುಪರೀಕ್ಷೆ ನಿಗಧಿಯಾಗಿದ್ದು, ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಜೆರಾಕ್ಸ್‌ ಅಂಗಡಿ ಬಂದ್ ಮಾಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:20 am, Tue, 23 January 24