ಬಿಜೆಪಿ ಮುಖಂಡರಿಂದ ಕಾಂಗ್ರೆಸ್ ಅಭ್ಯರ್ಥಿಗೆ ಬೆದರಿಕೆ: ರಾಮಾಂಜನೇಯ ಆರೋಪ
ನಿನ್ನೆ ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಸೀತರಾಮ್ ಹಾಗೂ ಶಾಸಕ ಸೋಮಶೇಖರ್ ರೆಡ್ಡಿ ಜೀವ ಬೆದರಿಕೆ ಹಾಕಿದ್ದಾರೆ ಅಂತಾ ಆರೋಪಿಸಿ ಕಾಂಗ್ರೆಸ್ ಅಭ್ಯರ್ಥಿ ರಾಮಾಂಜನೇಯ ಎಪಿಎಂಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೇ ಸೀತರಾಮ್ ಕೆಲ ಕೈ ಕಾರ್ಯಕರ್ತರ ನಿವಾಸಗಳಿಗೆ ತೆರಳಿ ಬೆದರಿಕೆ ಹಾಕುತ್ತಿದ್ದಾರೆ ಅಂತಾ ಆರೋಪಿಸಿದ್ದಾರೆ.
ಬಳ್ಳಾರಿ: ಗಣಿನಾಡು ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ಕಾವು ರಂಗೇರಿದೆ. ಮಹಾನಗರ ಪಾಲಿಕೆಯನ್ನ ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಬಿಜೆಪಿ ಹಾಗೂ ಕಾಂಗ್ರೆಸ್ ಈ ಚುನಾವಣೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ. ಈ ನಡುವೆ ವಾರ್ಡ್ ನಂಬರ್ 8 ರ ಕಾಂಗ್ರೆಸ್ ಅಭ್ಯರ್ಥಿ ರಾಮಾಂಜನೇಯ ಎಂಬುವರಿಗೆ ಬಿಜೆಪಿ ಅಭ್ಯರ್ಥಿ ಹಂದ್ರಾಳು ಸೀತರಾಮ್ ಹಾಗೂ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಜೀವ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿವೆ.
ನಿನ್ನೆ (ಏಪ್ರಿಲ್ 19) ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಸೀತರಾಮ್ ಹಾಗೂ ಶಾಸಕ ಸೋಮಶೇಖರ್ ರೆಡ್ಡಿ ಜೀವ ಬೆದರಿಕೆ ಹಾಕಿದ್ದಾರೆ ಅಂತಾ ಆರೋಪಿಸಿ ಕಾಂಗ್ರೆಸ್ ಅಭ್ಯರ್ಥಿ ರಾಮಾಂಜನೇಯ ಎಪಿಎಂಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೇ ಸೀತರಾಮ್ ಕೆಲ ಕೈ ಕಾರ್ಯಕರ್ತರ ನಿವಾಸಗಳಿಗೆ ತೆರಳಿ ಬೆದರಿಕೆ ಹಾಕುತ್ತಿದ್ದಾರೆ ಅಂತಾ ಆರೋಪಿಸಿದ್ದಾರೆ. ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ಪಡೆಯಲಾಗಿದ್ದು, ಯಾವುದೇ ಎಫ್ಐಆರ್ ದಾಖಲು ಮಾಡಿಲ್ಲ. ಕೋರ್ಟ್ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಳ್ಳುವುದಾಗಿ ಠಾಣಾಧಿಕಾರಿಗಳು ತಿಳಿಸಿದ್ದಾರೆ.
ನೀವು ಚುನಾವಣೆಗೆ ಸ್ಪರ್ಧಿಸುವಷ್ಟು ದೊಡ್ಡ ವ್ಯಕ್ತಿನಾ? ಚುನಾವಣೆ ಪ್ರಚಾರ ಮಾಡಬಾರದು, ಇಲ್ಲದಿದ್ದರೆ ಸರಿ ಇರಲ್ಲ ಅಂತಾ ನನಗೆ ಬಿಜೆಪಿ ಅಭ್ಯರ್ಥಿ ಸೀತರಾಮ್ ಹಾಗೂ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಜೀವ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಎಪಿಎಂಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ ಎಂದು 8 ನೇ ವಾರ್ಡ್ ಕಾಂಗ್ರೆಸ್ ಅಭ್ಯರ್ಥಿ ರಾಮಾಂಜನೇಯ ತಿಳಿಸಿದರು.
ಜನರಿಂದ ಮತ ಪಡೆದ ಶಾಸಕರು ಈ ರೀತಿಯಾಗಿ ದೌರ್ಜನ್ಯ ಮಾಡುವುದು ಸರಿಯಲ್ಲ, ಬಳ್ಳಾರಿಯನ್ನ ರಿಪಬ್ಲಿಕ್ ಮಾಡಲು ನಾವು ಬಿಡುವುದಿಲ್ಲ. ದೂರು ನೀಡಿದರೂ ಪೊಲೀಸರು ದೂರು ದಾಖಲಿಸಿಕೊಳ್ಳದೇ ಡ್ರಾಮಾ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಜೆ.ಎಸ್.ಆಂಜನೇಯಲು ಹೇಳಿದ್ದಾರೆ.
ಇದನ್ನೂ ಓದಿ
Traveling Tips: ಕೊರೊನಾ ಕಾಲದಲ್ಲಿ ಪ್ರಯಾಣಿಸುವಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು
ಸಾವಿಗೂ ಮುನ್ನ ಕೊರೊನಾ ಕರಾಳತೆ, ಆಸ್ಪತ್ರೆ ಅವ್ಯವಸ್ಥೆ ಬಯಲು ಮಾಡಿದ ಯುವಕ.. ಕೊನೆಗೆ ನರಳಿ ನರಳಿ ಪ್ರಾಣ ಬಿಟ್ಟ
(allegations that the Congress candidate has been threatened by BJP leaders at Bellary)