ಬೆಂಗಳೂರಿನಲ್ಲಿ ಮಾನವ ಕಳ್ಳ ಸಾಗಣೆ ಆರೋಪ: ಎನ್​​ಸಿಪಿಸಿಆರ್​​ ಅಧಿಕಾರಿಗಳ ದಾಳಿ ವೇಳೆ 20 ಬಾಲಕಿಯರು ಪತ್ತೆ

| Updated By: ಗಂಗಾಧರ​ ಬ. ಸಾಬೋಜಿ

Updated on: Mar 15, 2024 | 7:42 PM

ಬೆಂಗಳೂರಿನಲ್ಲಿ ಅಕ್ರಮ ಅನಾಥಾಶ್ರಮದ ಮೇಲೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ದಾಳಿ ಮಾಡಿದ್ದು, ಈ ವೇಳೆ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಮಾನವ ಕಳ್ಳ ಸಾಗಣೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ದಾಳಿ ಮಾಡಿದ್ದು, 20 ಬಾಲಕಿಯರು ಪತ್ತೆ ಆಗಿದ್ದಾರೆ. ಪತ್ತೆಯಾದವರನ್ನು ಗಲ್ಫ್​ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಬೆಂಗಳೂರಿನಲ್ಲಿ ಮಾನವ ಕಳ್ಳ ಸಾಗಣೆ ಆರೋಪ: ಎನ್​​ಸಿಪಿಸಿಆರ್​​ ಅಧಿಕಾರಿಗಳ ದಾಳಿ ವೇಳೆ 20 ಬಾಲಕಿಯರು ಪತ್ತೆ
ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ದಾಳಿ
Follow us on

ಬೆಂಗಳೂರು, ಮಾರ್ಚ್​ 15: ನಗರದಲ್ಲಿ ಮಾನವ ಕಳ್ಳ ಸಾಗಣೆ ಆರೋಪ ಹಿನ್ನೆಲೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ಅಧ್ಯಕ್ಷ ಹಾಗೂ ಸಿಬ್ಬಂದಿಗಳಿಂದ ದಾಳಿ ಮಾಡಿರುವಂತಹ ಘಟನೆ ನಡೆದಿದೆ. ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ದಾಳಿ ವೇಳೆ 20 ಬಾಲಕಿಯರು ಪತ್ತೆ ಆಗಿದ್ದಾರೆ. ಪತ್ತೆಯಾದವರನ್ನು ಗಲ್ಫ್​ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ. ದಕ್ಷಿಣ ಭಾರತದಲ್ಲಿ ಇಂತಹ ಪ್ರಕರಣಗಳು ಈಗಾಗಲೇ ವರದಿಯಾಗಿವೆ ಎನ್ನಲಾಗುತ್ತಿದೆ. ಸದ್ಯ ಎಫ್​​ಐಆರ್​ ದಾಖಲಿಸುವಂತೆ ಸಂಪಿಗೇಹಳ್ಳಿ ಠಾಣೆಯಲ್ಲಿ ಎನ್​​ಸಿಪಿಸಿಆರ್ ಅಧ್ಯಕ್ಷ ಹಾಗೂ ಸಿಬ್ಬಂದಿ ಆಗ್ರಹಿಸಿದ್ದಾರೆ.

ಸದ್ಯ ಎನ್​ಸಿಪಿಸಿಆರ್​ನಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.  ಮದರಸದಲ್ಲಿ ಸುಮಾರು 10-20 ಮಕ್ಕಳು ಇದ್ದರು. ಮಕ್ಕಳಿಗೆ ಸರಿಯಾಗಿ ಶಿಕ್ಷಣವನ್ನು ನೀಡುತ್ತಿಲ್ಲ. ಜೊತೆಗೆ ಧಾರ್ಮಿಕ‌ ಶಿಕ್ಷಣವನ್ನು ನೀಡುತ್ತಿದ್ದಾರೆ. ಯಾವುದೇ ಲೈಸೆನ್ಸ್ ಇಲ್ಲದೆ ಮದರಸವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಸದ್ಯ ಎನ್​ಸಿಪಿಸಿಆರ್​ ದೂರು ಆಧರಿಸಿ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಪ್ರಿಯಾಂಕ್ ಕಂಗೂನ್ ಟ್ವೀಟ್​

ಈ ಬಗ್ಗೆ ಎಕ್ಸ್​​ನಲ್ಲಿ ಬರೆದುಕೊಂಡಿರುವ ಪ್ರಿಯಾಂಕ ಕಂಗೂನ್​, ತನಿಖೆಯ ವೇಳೆ ಬಾಲಕಿಯರನ್ನು ಸಿಡಬ್ಲ್ಯುಸಿ ಮುಂದೆ ಹಾಜರುಪಡಿಸಲು ಮುಂದಾದಾಗ ಸಲ್ಮಾ ಎಂಬು ಮಹಿಳೆ ಮತ್ತು ಆಕೆಯ ಬಾಸ್ ಶಮೀರ್ ಗೂಂಡಾಗಳನ್ನು ಕರೆಸಿ ಜಗಳಕ್ಕೆ ಯತ್ನಿಸಿದ್ದಾರೆ. ಪೊಲೀಸರ ಮಧ್ಯಸ್ಥಿಕೆಯಲ್ಲಿ ಗೂಂಡಾಗಳನ್ನು  ನಿಯಂತ್ರಿಸಲಾಗಿದೆ. ಪೊಲೀಸರ ಸಲಹೆ ಮೇರೆಗೆ ಮಹಿಳಾ ಅಧಿಕಾರಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಠಾಣೆಗೆ ಬರಲಾಗಿದೆ.

ಇದನ್ನೂ ಓದಿ: ಗರ್ಭಿಣಿ ಹೆಂಡ್ತಿಯನ್ನೇ ಹತ್ಯೆ ಮಾಡಿದನೇ ಗಂಡ, ಅಪ್ರಾಪ್ತ ಬಾಲಕಿ ಕುಟುಂಬಸ್ಥರ ಆರೋಪವೇನು?

ದಾಳಿ ವೇಳೆ ಕೆಲ ಹುಡುಗಿಯರು ಮಾತನಾಡಿದ್ದು, ಸಲ್ಮಾ ಎಂಬ ಮಹಿಳೆ ಕುವೈತ್‌ನಲ್ಲಿರುವ ಹುಡುಗಿಯರ ಸಂಬಂಧಗಳನ್ನು ಏರ್ಪಡಿಸುತ್ತಾಳೆ ಎಂದು ಆರೋಪ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.