ಬೆಂಗಳೂರು, ಮೇ 19: ಹೊಂಚು ಹಾಕಿ ಸಂಚು ಮಾಡುವ ಕಾಂಗ್ರೆಸ್ನ ಅಸಲಿ ಮುಖ ಕಳಚಿ ಕೆಳಕ್ಕೆ ಬಿದ್ದಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಹೌದಲ್ಲವೇ ಕಾಂಗ್ರೆಸ್ಸಿಗರೇ? ಸತ್ಯ ನಿಮ್ಮ ಮುಂದೆಯೇ ಇದೆ ಎಂದು ಹೇಳುವ ಮೂಲಕ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ (HD Deve Gowda) ಜೀವ ಪಡೆಯಲು ಕಾಂಗ್ರೆಸ್ (Congress) ಸರ್ಕಾರ ಸಂಚು ಮಾಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ನೇರ ಆರೋಪ ಮಾಡಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಜೆಡಿಎಸ್, ನಿಮ್ಮ ಅಧ್ಯಕ್ಷರೇ ಪೆನ್ ಡ್ರೈವ್ ಫ್ಯಾಕ್ಟರಿಯ ಒರಿಜಿನಲ್ ಓನರ್. ಸಿಡಿ ಶಿವಕುಮಾರ್ ಗ್ಯಾಂಗ್ ನಡೆಸಿದ ಪೆನ್ ಡ್ರೈವ್ ಹಂಚಿಕೆಯ ಹೇಯ ಕೃತ್ಯದ ಸಂಚುಗಳೇ ಅವೆಲ್ಲಾ. ದೇವರಾಜೇಗೌಡರ ಹೇಳಿಕೆಯ ನಂತರ ಹೊರಬಿದ್ದಿರುವ ಆಡಿಯೋ ಟೇಪುಗಳೇ ಮಹಾಸಂಚಿನ ಮಹಾಕಥೆಯನ್ನು ಬಿಚ್ಚಿಟ್ಟಿವೆ. ಈಗ ಹೇಳಿ, ಯಾರು ಮೆಂಟಲ್ ಎಂದು ಪ್ರಶ್ನಿಸಲಾಗಿದೆ.
ನಿಮ್ಮ CD ಶಿವಕುಮಾರ್ ಗ್ಯಾಂಗಿನ ಸಂಚುಗಳು ಹೀಗಿವೆ
ಇದನ್ನೂ ಓದಿ: ಪೆನ್ಡ್ರೈವ್ ಕೇಸ್: ದೇವೇಗೌಡರ ವಿರುದ್ಧ ಅವಹೇಳನಕಾರಿ ಹೇಳಿಕೆ: ಡಿಕೆಶಿ, ಶಿವರಾಮೇಗೌಡ ವಿರುದ್ಧ ನಾಳೆ ಜೆಡಿಎಸ್ ಪ್ರತಿಭಟನೆ
ಈ ಸಂಚು ಜಾರಿಗೆ CDಶಿವಕುಮಾರ್ ಸ್ಲೀಪರ್ ಸೆಲ್ನ ಟೂಲ್ ಕಿಟ್ ವ್ಯವಹಾರ ಈ ಕೆಳಕಂಡಂತಿದೆ.
ಇದನ್ನೂ ಓದಿ: ಪೆನ್ಡ್ರೈವ್ ಕೇಸ್: ಶಿವರಾಮೇಗೌಡ, ದೇವರಾಜೇಗೌಡ, ಡಿಕೆಶಿ ಸೀಕ್ರೆಟ್ ಆಡಿಯೋ ವೈರಲ್
ವಕೀಲರಾದ ದೇವೇರಾಜೇಗೌಡರೇ ಸ್ವತಃ ಬಿಚ್ಚಿಟ್ಟ ಈ ಸತ್ಯಗಳು ಹಾಗೂ ಆಡಿಯೋ ಟೇಪುಗಳು ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್ ಮಾನವನ್ನು ಬೀದಿ ಬೀದಿಯಲ್ಲಿ ಹರಾಜು ಹಾಕಿವೆ. ಕಂಡವರ ಮನೆಯಲ್ಲಿ ಸಾವು ಬಯಸುವ ಕಾಂಗ್ರೆಸ್ಸಿಗೆ ಧಿಕ್ಕಾರ ಎಂದು ವಾಗ್ದಾಳಿ ಮಾಡಿದೆ.
ಹೊಂಚು ಹಾಕಿ ಸಂಚು ಮಾಡುವ @INCKarnataka ಅಸಲಿ ಮುಖ ಕಳಚಿ ಕೆಳಕ್ಕೆ ಬಿದ್ದಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ…
ಹೌದಲ್ಲವೇ ಕಾಂಗ್ರೆಸ್ಸಿಗರೇ? ಸತ್ಯ ನಿಮ್ಮ ಮುಂದೆಯೇ ಇದೆ.ನಿಮ್ಮ ಅಧ್ಯಕ್ಷರೇ ಪೆನ್ ಡ್ರೈವ್ ಫ್ಯಾಕ್ಟರಿಯ ಒರಿಜಿನಲ್ ಓನರ್.
CDಶಿವಕುಮಾರ್ ಗ್ಯಾಂಗ್ ನಡೆಸಿದ ಪೆನ್ ಡ್ರೈವ್ ಹಂಚಿಕೆಯ ಹೇಯ ಕೃತ್ಯದ ಸಂಚುಗಳೇ ಅವೆಲ್ಲಾ.…— Janata Dal Secular (@JanataDal_S) May 19, 2024
ಶಿವರಾಮೇಗೌಡ, ದೇವರಾಜೇಗೌಡ ಮಾತಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಹೆಚ್.ಡಿ.ದೇವೇಗೌಡ ಇನ್ನೂ ಆತ್ಮಹತ್ಯೆ ಮಾಡಿಕೊಳ್ಳಲಿಲ್ಲವಲ್ಲ. ಅವರನ್ನು ಬಲಿ ಹಾಕೋಕೆ ಸರ್ಕಾರ ತೀರ್ಮಾನ ಮಾಡಿದೆ ಎಂದು ಕೀಳುಮಟ್ಟದ ಅಭಿಪ್ರಾಯವನ್ನು ಶಿವರಾಮೇಗೌಡ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.