AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈತ್ರಿ ಪಕ್ಷದ ವಿರೋಧಿಯನ್ನು ಜೆಡಿಎಸ್​​​ಗೆ ಸೇರಿಸಿಕೊಂಡ ಕುಮಾರಣ್ಣ: ಭುಗಿಲೆದ್ದ ಅಸಮಾಧಾನ

ಭಾರೀ ವಿರೋಧದ ನಡುವೆಯೂ ಸ್ವಾಭಿಮಾನ ಜನತಾ ಪಕ್ಷದ ಮುಖಂಡ ಇದೀಗ ಮಿತ್ರ ಪಕ್ಷ ಜೆಡಿಎಸ್ (JDS)​ ಸರ್ಪಡೆಯಾಗಿದ್ದಾರೆ. 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡಿದ್ದ ನಾಯಕ ಇದೀಗ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿಯೊಂದಿಗೆ ಮೈತ್ರಿ ಇದ್ದರೂ ಸಹ ಬಂಡಾಯ ನಾಯಕ, ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.

ಮೈತ್ರಿ ಪಕ್ಷದ ವಿರೋಧಿಯನ್ನು ಜೆಡಿಎಸ್​​​ಗೆ ಸೇರಿಸಿಕೊಂಡ ಕುಮಾರಣ್ಣ: ಭುಗಿಲೆದ್ದ ಅಸಮಾಧಾನ
Hoodi Vijaykumar
ರಮೇಶ್ ಬಿ. ಜವಳಗೇರಾ
|

Updated on: Mar 05, 2026 | 6:27 PM

Share

ಬೆಂಗಳೂರು, (ಮಾರ್ಚ್ 05): ಕೋಲಾರ (Kolar) ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯದಿಂದ ಸ್ಪರ್ಧಿಸಿ ಸೋತಿದ್ದ ಹೂಡಿ ವಿಜಯ್ ಕುಮಾರ್ ( hoodi Vijaykumar) ಇಂದು (ಮಾರ್ಚ್ 05) ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಿಂದ ಬಂಡಾಯವೆದ್ದು ಮಾಲೂರು ಸ್ವಾಭಿಮಾನಿ‌ ಜನತಾ ಪಕ್ಷದಿಂದ ನಿಂತು ಸೋತಿದ್ದ ವಿಜಯ್ ಕುಮಾರ್ ಬೆಂಗಳೂರಿನ (Bengaluru) ಜೆಪಿ ಭವನದಲ್ಲಿಂದು ಕೇಂದ್ರ‌ ಸಚಿವ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​​ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಎಚ್​​ಡಿ ದೇವೇಗೌಡ, ನಿಖಿಲ್​ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು.

ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಂಡ ಬಳಿಕ ಮಾತನಾಡಿದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ನಾನು ವಿಜಯ್ ಕುಮಾರ್ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೆನೆ. ಮುಂದೆ ಒಂದು ದಿನ ಪಕ್ಷ ಸೇರುವ ಸಮಯ ಬರುತ್ತೆ ಎಂದು ಹೇಳಿದ್ದೆ. ದುಡಿಕೆ ರಾಜಕೀಯ ಜೀವನವನ್ನ ಹಾಳು ಮಾಡಬಾರದು.ಒಳ್ಳೆಯ ಉದ್ದೇಶಕ್ಕೆ ನಾವು ಕೈ ಜೋಡಿಸೊದ್ದೇವೆ. ಮಾಲೂರು ಅಭಿವೃದ್ಧಿಗೆ ಹೊಸ ಚೈತನ್ಯ ತುಂಬಬೇಕು. ವಿಧಾನಸಭಾ ಚುನಾವಣೆ ಇನ್ನೂ ದೂರ ಇದೆ. ಅದಕ್ಕೂ ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಇದೆ. ಅದು ಕಾರ್ಯಕರ್ತರ ಚುನಾವಣೆಯಾಗಿದೆ. ಮಾಲೂರು ಕ್ಷೇತ್ರದ ಕೆಲವರು ಕಾರಣಾಂತರದಿಂದ ಪಕ್ಷವನ್ನ ಬಿಟ್ಟು ಹೋಗಿದ್ರು. ಇವತ್ತು ಎಲ್ಲರು ಮತ್ತೆ ಪಕ್ಷ ಸೇರಿದ್ದಾರೆ. ಎಲ್ಲರಿಗೂ ಸ್ವಾಗತ ಕೋರುತ್ತೇನೆ ಎಂದರು.

ಇದನ್ನೂ ಓದಿ: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆ: ಮರು ಎಣಿಕೆಯಲ್ಲೂ ‘ಕೈ’ ನಾಯಕನದ್ದೇ ಮೇಲುಗೈ

ಬಿಜೆಪಿ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿದ್ದ ವಿಜಯಕುಮಾರ್​!

2023ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೆತ್ರದ ಬಿಜೆಪಿ ಟಿಕೆಟ್​ ಹೂಡಿ ವಿಜಯ್ ಕುಮಾರ್ ಅವರ ಬದಲಿಗೆ ಕೆ.ಎಸ್. ಮಂಜುನಾಥ್ ಗೌಡ ಅವರಿಗೆ ನೀಡಲಾಗಿತ್ತು. ಇದರಿಂದ ಅಸಮಾಧಾನಗೊಂಡು ಹೂಡಿ ವಿಜಯ್ ಕುಮಾರ್ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇದರಿಂದ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಗೌಡ ಅವರ ಸೋಲಿಸುವಲ್ಲಿ ಯಶಸ್ವಿಯಾಗಿದ್ದರು. ಯಾಕಂದ್ರೆ, ಕಾಂಗ್ರೆಸ್​​​ನ ನಂಜೇಗೌಡ ಅವರು ಕೇವಲ 250 ಮತಗಳಿಂದ ಮಾತ್ರ ಗೆದ್ದಿದ್ದರು. ಒಂದು ವೇಳೆ ಹೂಡಿ ವಿಜಯ್ ಕುಮಾರ್ ಬಂಡಾಯವಾಗಿ ಸ್ಪರ್ಧೆ ಮಾಡದಿದ್ದರೆ ಬಿಜೆಪಿ ಗೆಲ್ಲುತ್ತಿತ್ತು.

ಮೈತ್ರಿಯಲ್ಲಿ ಬಿರುಕು!

ಹೂಡಿ ವಿಜಯ್​​ ಕುಮಾರ್​​ ಜೆಡಿಎಸ್​​ ಸೇರ್ಪಡೆಗೆ ಸ್ಥಳೀಯ ಬಿಜೆಪಿ ನಾಯಕರು, ಮಂಜುನಾಥ್ ಗೌಡ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಜುನಾಥ್ ಗೌಡ ಆಕ್ರೋಶ ವ್ಯಕ್ತಪಡಿಸಿ, ಜೆಡಿಎಸ್ ವರಿಷ್ಠರು ಮೈತ್ರಿ ಧರ್ಮವನ್ನು ಮುರಿಯುತ್ತಿದ್ದಾರೆ ಆರೋಪಿಸಿದ್ದಾರೆ. ಹೀಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿಯ ನಡುವೆ ಇದು ಬಿರುಕು ಉಂಟುಮಾಡಿದೆ ಎಂಬ ಆತಂಕ ವ್ಯಕ್ತವಾಗಿದೆ.ಮಿತ್ರ ಪಕ್ಷ ಬಿಜೆಪಿ​ ವಿರೋಧದ ನಡುವೆಯೂ ಹೂಡಿ ವಿಜಯ್ ಕುಮಾರ್ ಅವರನ್ನು ಜೆಡಿಎಸ್​​​ಗೆ ಸೇರಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಕೋಲಾರ ಜಿಲ್ಲೆಯಲ್ಲಿ ಮಿತ್ರ ಪಕ್ಷಗಳ ನಡುವೆ ಸಂಬಂಧ ಹೇಗಿರುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ