ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಒಗ್ಗಟ್ಟು: ಕಾಂಗ್ರೆಸ್ ಅಭ್ಯರ್ಥಿಗೆ ಸವಾಲು
ಜೆಡಿಎಸ್ ಅಭ್ಯರ್ಥಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದರೆ, ಇತ್ತ ಕಾಂಗ್ರೆಸ್ ಅಭ್ಯರ್ಥಿಗೆ ಒಂದಾದ ಮೇಲೆ ಒಂದು ಸವಾಲುಗಳು ಎದುರಾಗುತ್ತಿವೆ, ಕೋಲಾರ ಜಿಲ್ಲಾ ಕಾಂಗ್ರೆಸ್ನಲ್ಲಿನ ಗುಂಪುಗಾರಿಕೆಯನ್ನು ಸರಿದೂಗಿಸಿಕೊಂಡು ಹೋಗುವುದೇ ದೊಡ್ಡ ಸವಾಲಾಗಿದೆ ಪರಿಣಮಿಸಿದೆ. ಸದ್ಯ ಕಾಂಗ್ರೆಸ್ ಗುಂಪುಗಾರಿಕೆಯನ್ನು ಬಂಡಾವಳ ಮಾಡಿಕೊಂಡು ಮೈತ್ರಿ ಪಕ್ಷಗಳು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.
ಕೋಲಾರ, ಏಪ್ರಿಲ್ 09: ಲೋಕಸಭಾ (Lok Sabha Elections) ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಚುನಾವಣೆ ಸವಾಲಾಗಿ ಪರಿಣಮಿಸಿದೆ. ಒಂದೆಡೆ ಎದುರಾಳಿ ಬಿಜೆಪಿ (bjp) ಮತ್ತು ಜೆಡಿಎಸ್ ಒಗ್ಗಟ್ಟು ಪ್ರದರ್ಶನ ಮಾಡುತ್ತಾ ಮೈತ್ರಿ ಅಭ್ಯರ್ಥಿ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದರೆ, ಕಾಂಗ್ರೆಸ್ ಅಭ್ಯರ್ಥಿಗೆ ಕ್ಷೇತ್ರದಲ್ಲಿನ ಭಿನ್ನಮತ ಸುಧಾರಿಸಿಕೊಂಡು ಹೋಗುವುದೇ ಸವಾಲಾಗಿ ಪರಿಣಮಿಸಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು, ಬಿಜೆಪಿ ಹಾಗೂ ಜೆಡಿಎಸ್ ಮುಖಂಡರೊಂದಿಗೆ ಈಗಾಗಲೇ ಕೋಲಾರ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಸಮನ್ವಯ ಸಭೆ ಮೂಲಕ ಕ್ಷೇತ್ರವನ್ನು ಒಂದು ಸುತ್ತು ಹಾಕಿದ್ದಾರೆ. ಈಗಾಗಲೇ ಹೋಬಳಿ ಮಟ್ಟದಲ್ಲಿ ಸಭೆಗಳನ್ನು ಮೂಲಕ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.
ಕೋಲಾರ ಕ್ಷೇತ್ರದಲ್ಲಿ ಆರಂಭವಾದ ಸಮನ್ವಯ ಸಭೆಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ, ಚಿಂತಾಮಣಿ ಸೇರಿ ಎಂಟು ವಿಧಾನಸಭಾ ಕ್ಷೇತ್ರದಲ್ಲೂ ಸಭೆಗಳು ಮುಕ್ತಾಯಗೊಂಡಿದೆ. ಬಿಜೆಪಿಯ ಸಂಸದ ಮುನಿಸ್ವಾಮಿ, ಐದು ಜನ ಮಾಜಿ ಶಾಸಕರುಗಳು ಹಾಗೂ ಜೆಡಿಎಸ್ನ ಮೂವರು ಶಾಸಕರುಗಳು ಹಾಗೂ ಮಾಜಿ ಶಾಸಕರುಗಳು ಕೂಡ ಈ ಸಮನ್ವಯ ಸಭೆಗಲ್ಲಿ ಒಂದಾಗಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ. ಬಿಜೆಪಿಯಿಂದ ಸಂಸದ ಮುನಿಸ್ವಾಮಿ ಮುಖಂಡತ್ವ ವಹಿಸಿದರೆ ಜೆಡಿಎಸ್ನಿಂದ ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ನೇತೃತ್ವ ವಹಿಸುತ್ತಿದ್ದಾರೆ.
ಇದನ್ನೂ ಓದಿ: ಕೋಲಾರ ಕಾಂಗ್ರೆಸ್ನಲ್ಲಿ ಬಂಡಾಯದ ಬಿಸಿ: ಸಿಎಂ, ಡಿಸಿಎಂ ಬಂದರೂ ಪ್ರಚಾರಕ್ಕೆ ಬಾರದ ಸಚಿವ ಕೆಎಚ್ ಮುನಿಯಪ್ಪ
ಈ ಮೂಲಕ ಜೆಡಿಎಸ್ ಅಭ್ಯರ್ಥಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದರೆ, ಇತ್ತ ಕಾಂಗ್ರೆಸ್ ಅಭ್ಯರ್ಥಿಗೆ ಒಂದಾದ ಮೇಲೆ ಒಂದು ಸವಾಲುಗಳು ಎದುರಾಗುತ್ತಿವೆ, ಕೋಲಾರ ಜಿಲ್ಲಾ ಕಾಂಗ್ರೆಸ್ನಲ್ಲಿನ ಗುಂಪುಗಾರಿಕೆಯನ್ನು ಸರಿದೂಗಿಸಿಕೊಂಡು ಹೋಗುವುದೇ ದೊಡ್ಡ ಸವಾಲಾಗಿದೆ ಪರಿಣಮಿಸಿದೆ. ಸದ್ಯ ಕಾಂಗ್ರೆಸ್ ಗುಂಪುಗಾರಿಕೆಯನ್ನು ಬಂಡಾವಳ ಮಾಡಿಕೊಂಡು ಮೈತ್ರಿ ಪಕ್ಷಗಳು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಮೂಲತ: ಬೆಂಗಳೂರಿನವರಾಗಿದ್ದು ಕೋಲಾರಕ್ಕೆ ಹೊಸ ಮೂಖ ಹೊಸ ಅಭ್ಯರ್ಥಿ, ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ತಮಗಿರುವ ಕಡಿಮೆ ಸಮಯದಲ್ಲಿ ಕ್ಷೇತ್ರವನ್ನು ಒಂದು ಸುತ್ತುಹಾಕಿ ಕ್ಷೇತ್ರ ಪರಿಚಯ ಮಾಡಿಕೊಳ್ಳುವುದರ ಜೊತೆಗೆ ಸದ್ಯ ಜಿಲ್ಲಾ ಕಾಂಗ್ರೆಸ್ನಲ್ಲಿರುವ ಕೆಹೆಚ್ ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಬಣದ ಗುಂಪುಗಾರಿಕೆಯನ್ನು ಸರಿಪಡಿಸಿಕೊಳ್ಳುವುದು, ಅದರ ಜೊತೆಗೆ ಚುನಾವಣೆಯನ್ನು ಸಮರ್ಥವಾಗಿ ಎದುರಿಸುವುದು ಸವಾಲಿನ ಕೆಲಸವಾಗಿದೆ.
ಇದನ್ನೂ ಓದಿ: ಮುಳುಬಾಗಿಲುನ ಅಪಾರ ಜನಸ್ತೋಮದ ನಡುವೆ ರ‍್ಯಾಲಿ ನಡೆಸಿ ರಾಜ್ಯದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ಕಾಂಗ್ರೆಸ್
ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಎರಡು ಗುಂಪುಗಳಾಗಿ ನಾಮಪತ್ರ ಸಲ್ಲಿಸಿದ್ದು, ಸಿಎಂ, ಡಿಸಿಎಂ ಪ್ರಚಾರದ ಕಾರ್ಯಕ್ರಮಕ್ಕೆ ಕೆಹೆಚ್ ಮುನಿಯಪ್ಪ ಅವರಿಗೆ ಆಹ್ವಾನ ನೀಡದೆ ಇರುವುದು, ಕಾಂಗ್ರೆಸ್ನಲ್ಲಿ ಎಲ್ಲವೂ ಸರಿ ಇಲ್ಲ ಅನ್ನೋದನ್ನ ಸಾರಿ ಹೇಳುತ್ತಿವೆ. ಆದರೆ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ರಮೇಶ್ ಕುಮಾರ್ ಬಣದ ಶಾಸಕರಿರುವುದು, ಎಲ್ಲ ಶಾಸಕರು ಸದ್ಯ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ಪ್ರಚಾರ ಮಾಡುತ್ತಿರುವುದು ಒಂದು ರೀತಿಯ ಆಕ್ಸಿಜನ್ ಕೊಟ್ಟಂತಾಗಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಎಲ್ಲವೂ ಸರಿಹೋಗಲಿದೆ ಅನ್ನೋದು ಕಾಂಗ್ರೆಸ್ ಅಭ್ಯರ್ಥಿಯ ವಿಶ್ವಾಸವಾಗಿದೆ.
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದರೆ, ಇತ್ತ ಕಾಂಗ್ರೆಸ್ ಅಭ್ಯರ್ಥಿಗೆ ಪಕ್ಷದಲ್ಲಿನ ಭಿನ್ನಮತ ಸವಾಲಾಗಿ ಪರಿಣಮಿಸಿದೆ. ಈ ಎಲ್ಲಾ ಸವಾಲುಗಳನ್ನು ಅಭ್ಯರ್ಥಿ ಹೇಗೆ ನಿಭಾಯಿಸುತ್ತಾರೆ, ಚುನಾವಣೆಯಲ್ಲಿ ಇದು ಅವರಿಗೆ ಎಷ್ಟರ ಮಟ್ಟಿನ ಯಶಸ್ಸು ನೀಡುತ್ತದೆ ಅನ್ನೋದನ್ನ ಕಾದು ನೋಡಬೇಕಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.