ಅಂತಾರಾಷ್ಟ್ರೀಯ ಆಟಗಾರರಿಗೆ ನಿವೇಶನ ಹಂಚಿಕೆಗೆ ಸಬೂಬು ಹೇಳುವುದು ಸರಿಯಲ್ಲ, ಮೊದಲು ಸೈಟ್​ ನೀಡಿ: ಹೈಕೋರ್ಟ್

ನಿವೇಶನ ಮಂಜೂರಾತಿ ಮಾಡಲು ಸ್ಮಿತಾ ಅವರು ಅಕ್ಷರಶಃ ಭಿಕ್ಷೆ ಬೇಡುವಂತೆ ಮಾಡಿದೆ. 2008 ರಲ್ಲಿಯೇ ನಿವೇಶನ ಮಂಜೂರಾತಿಗೆ ನಿರ್ಣಯ ಕೈಗೊಂಡಿದ್ದರೂ, 2020 ರಲ್ಲಿ ಅದರ ಜಾರಿಗೆ ಮುಂದಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಬಿಡಿಎ ನಂತಹ ಸಾಂವಿಧಾನಿಕ ಸಂಸ್ಥೆಯು ಕಡತ ಕಾಣೆಯಾಗಿತ್ತು ಎಂಬ ಕುಂಟು ನೆಪ ಹೇಳುತ್ತಿರುವುದು ನಿಜಕ್ಕೂ ಆಘಾತಕಾರಿ ವಿಷಯ.

ಅಂತಾರಾಷ್ಟ್ರೀಯ ಆಟಗಾರರಿಗೆ ನಿವೇಶನ ಹಂಚಿಕೆಗೆ ಸಬೂಬು ಹೇಳುವುದು ಸರಿಯಲ್ಲ, ಮೊದಲು ಸೈಟ್​ ನೀಡಿ: ಹೈಕೋರ್ಟ್
ಅಂತಾರಾಷ್ಟ್ರೀಯ ಆಟಗಾರರಿಗೆ ನಿವೇಶನ ಹಂಚಿಕೆಗೆ ಸಬೂಬು ಹೇಳುವುದು ಸರಿಯಲ್ಲ, ಮೊದಲು ಸೈಟ್​ ನೀಡಿ: ಹೈಕೋರ್ಟ್
Follow us
TV9 Web
| Updated By: ಸಾಧು ಶ್ರೀನಾಥ್​

Updated on: Aug 25, 2021 | 7:59 AM

ಮಾಜಿ ಅಂತರಾಷ್ಟ್ರೀಯ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ಮಿತಾ ಹರಿಕೃಷ್ಣ ಅವರಿಗೆ ನಿವೇಶನ ಮಂಜೂರು ಮಾಡುವಂತೆ ನಿರ್ದೇಶಿಸಿ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸಲ್ಲಿಸಿದ್ದ ಮೇಲ್ಮನವಿಯನ್ನು ವಿಭಾಗೀಯ ನ್ಯಾಯಪೀಠ ವಜಾಗೊಳಿಸಿದೆ. ಅಂತರರಾಷ್ಟ್ರೀಯ ಮಟ್ಟದ ಆಟದಲ್ಲಿ ಪಾಲ್ಗೊಂಡವರಿಗೆ ನಿವೇಶನ ಹಂಚಿಕೆಗೆ ಸಬೂಬು ಹೇಳುವುದು ಸರಿಯಲ್ಲವೆಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಸ್ಮಿತಾ ಹರಿಕೃಷ್ಣ ಅವರು ಎರಡು ಬಾರಿ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪರ ಆಡಿದ್ದರು.

ಕ್ರಿಕೆಟ್ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಸೇವೆ ಪರಿಗಣಿಸಿ ನಿವೇಶನ ಮಂಜೂರು ಮಾಡಲು ಬಿಡಿಎ 2008 ರಲ್ಲಿ ನಿರ್ಣಯ ಕೈಗೊಂಡಿತ್ತು. ಅದರಂತೆ 2014ರ ಜು.18 ಮತ್ತು 2018ರ ಫೆ.18 ಮತ್ತು 2019ರ ಡಿ.19ರಂದು ಬಿಡಿಎಗೆ ಮನವಿ ಸಲ್ಲಿಸಿದ್ದ ಸ್ಮಿತಾ ಹರಿಕೃಷ್ಣ, ತನಗೆ ನಿವೇಶನ ಮಂಜೂರು ಮಾಡುವಂತೆ ಕೋರಿದ್ದರು. ಇದರಿಂದ 2020 ರ ಜು. 3 ರಂದು ಮಂಜೂರಾತಿ ಪತ್ರವನ್ನು ವಿತರಿಸಿದ್ದ ಬಿಡಿಎ, ಒಟ್ಟು 77.22 ಲಕ್ಷ ರೂ. ಪಾವತಿಸಲು ಸೂಚಿಸಿತ್ತು.

ಅದನ್ನು ಪ್ರಶ್ನಿಸಿ ಸ್ಮಿತಾ ಹರಿಕೃಷ್ಣ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ್ದ ಏಕ ಸದಸ್ಯ ನ್ಯಾಯಪೀಠ, 2008 ರಲ್ಲಿ ಇದ್ದ ಮಾರುಕಟ್ಟೆ ದರ ದಂತೆ ಸ್ಮಿತಾ ಹರಿಕೃಷ್ಣಗೆ ನಿವೇಶನ ಮಂಜೂರು ಮಾಡುವಂತೆ ನಿರ್ದೇಶಿಸಿತ್ತು. ಅದನ್ನು ಪ್ರಶ್ನಿಸಿ ವಿಭಾಗೀಯ ನ್ಯಾಯಪೀಠಕ್ಕೆ ಬಿಡಿಎ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ನ್ಯಾಯಪೀಠ, ಸ್ಮಿತಾ ಹರಿಕೃಷ್ಣರಿಗೆ ನಿವೇಶನ ಮಂಜೂರು ಮಾಡಲು ಬಿಡಿಎ ನಿರ್ಣಯ ಕೈಗೊಂಡಿದೆ.

ಆದರೆ, ನಿವೇಶನ ಮಂಜೂರಾತಿ ಮಾಡಲು ಸ್ಮಿತಾ ಅವರು ಅಕ್ಷರಶಃ ಭಿಕ್ಷೆ ಬೇಡುವಂತೆ ಮಾಡಿದೆ. 2008 ರಲ್ಲಿಯೇ ನಿವೇಶನ ಮಂಜೂರಾತಿಗೆ ನಿರ್ಣಯ ಕೈಗೊಂಡಿದ್ದರೂ, 2020 ರಲ್ಲಿ ಅದರ ಜಾರಿಗೆ ಮುಂದಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಬಿಡಿಎ ನಂತಹ ಸಾಂವಿಧಾನಿಕ ಸಂಸ್ಥೆಯು ಕಡತ ಕಾಣೆಯಾಗಿತ್ತು ಎಂಬ ಕುಂಟು ನೆಪ ಹೇಳುತ್ತಿರುವುದು ನಿಜಕ್ಕೂ ಆಘಾತಕಾರಿ ವಿಷಯ. ಕಡತವನ್ನು ಕಳೆದುಕೊಳ್ಳುವ ಮೂಲಕ ಬಿಡಿಎ ಅಧಿಕಾರಿಗಳು ಮಾಡಿದ ತಪ್ಪಿಗೆ, ಅಂತರರಾಷ್ಟ್ರೀಯ ಮಟ್ಟದ ಆಟಗಾರ್ತಿಯೊಬ್ಬರಿಗೆ ಮಂಜೂರು ಮಾಡಬೇಕಾದ ನಿವೇಶನಕ್ಕೆ ಭಾರಿ ಮೊತ್ತ ವಿಧಿಸಿರುವುದು ಸರಿಯಲ್ಲ ಎಂದು ಚಾಟಿ ಬೀಸಿತು.

ಅಲ್ಲದೆ, ಪ್ರಕರಣ ಸಂಬಂಧ ಏಕ ಸದಸ್ಯ ನ್ಯಾಯಪೀಠದ ಆದೇಶವು ಸೂಕ್ತವಾಗಿದ್ದು, ಅದರಲ್ಲಿ ಮಧ್ಯ ಪ್ರವೇಶ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟ ವಿಭಾಗೀಯ ನ್ಯಾಯಪೀಠ, ಬಿಡಿಎ ಮೇಲ್ಮನವಿಯನ್ನು ವಜಾಗೊಳಿಸಿದೆ.

– ರಮೇಶ್

Also Read:

ಕೇಸ್ ಗೆಲ್ಲುವ ಬದಲು ತಾಯಿಯ ಹೃದಯ ಗೆಲ್ಲುವಂತೆ ಹೈಕೋರ್ಟ್​ನಿಂದ ಮಗಳಿಗೆ ಬುದ್ದಿಮಾತು

(allot site for international cricketer smitha harikrishna high court order to BDA)

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ