
ಬೆಂಗಳೂರು: ಬಿಬಿಎಂಪಿ ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ತಿಳಿಸಿರುವ ಕಮಲ್ ಪಂತ್, ಬಿಬಿಎಂಪಿ ಪೋರ್ಟಲ್ ಮೂಲಕ ಕೊವಿಡ್ ಸೋಂಕಿತರ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಬೆಡ್ ಕಾಯ್ದಿರಿಸುವ ವಿಧಾನದಲ್ಲಿ ಅಕ್ರಮ ಎಸಗಿದವರ ವಿರುದ್ಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರನ್ನು ಬಂಧಿಸಲಾಗಿದೆ. ಹಾಗೇ, ಅಕ್ರಮದಲ್ಲಿ ಭಾಗಿಯಾದವರ ಬಗೆಗಿನ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ ಎಂದಿದ್ದಾರೆ.
ಬಿಬಿಎಂಪಿ ಬೆಡ್ ಬ್ಲಾಕಿಂಗ್ ಹಗರಣವನ್ನು ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಸೇರಿ ಬಯಲಿಗೆಳೆದಿದ್ದು, ಇಂದಿನ ಸಭೆಯಲ್ಲಿ ಯಡಿಯೂರಪ್ಪನವರಿಗೂ ವರದಿ ನೀಡಿದ್ದಾರೆ. ಹಣಕೊಟ್ಟವರಿಗೆ ಹಾಸಿಗೆ ಮೀಸಲಿಡುವ ಈ ದಂಧೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸುವುದಾಗಿಯೂ ಯಡಿಯೂರಪ್ಪ ಹೇಳಿದ್ದಾರೆ. ಈ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರಾದ ಇಬ್ಬರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಕೊರೊನಾ ತೀವ್ರವಾಗಿರುವ ಹೊತ್ತಲ್ಲಿ ರೋಗಿಗಳು ಬೆಡ್ ಇಲ್ಲದೆ ಪರದಾಡುತ್ತಿರುವಾಗ ಬಿಬಿಎಂಪಿ ಅಧಿಕಾರಿಗಳು ಹಣ ಮಾಡುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.
ಇದನ್ನೂ ಓದಿ:ಆಕ್ಸಿಜನ್ ಖಾಲಿಯಾದ ವಿಷಯ ತಿಳಿದು ಗಂಟೆಯೊಳಗೆ 10 ಸಿಲಿಂಡರ್ ವ್ಯವಸ್ಥೆ ಮಾಡಿದ ಸಂಸದ ಪ್ರತಾಪ್ ಸಿಂಹ