AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂಪತಿ ಪರಸ್ಪರ ಒಪ್ಪಿದರೂ ನಿಯಮದಂತೆ 18 ತಿಂಗಳ ಬಳಿಕ ವಿಚ್ಚೇದನ: ಹೈಕೋರ್ಟ್

ಕರ್ನಾಟಕ ಹೈಕೋರ್ಟ್‌ ಹೀಗೆಂದು ಆದೇಶಿಸಿರುವುದಲ್ಲದೆ, ದಂಪತಿ ವಿಚ್ಚೇದನ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ವಿಚಾರಣಾ ಕೋರ್ಟ್‌ನ ಆದೇಶ ರದ್ದು ಮಾಡಿ ನ್ಯಾಯಮೂರ್ತಿ ಕೆ. ಎಸ್‌. ಮುದ್ಗಲ್‌ ಮತ್ತು ನ್ಯಾಯಮೂರ್ತಿ ಕೆ. ವಿ. ಅರವಿಂದ್‌ ಅವರಿದ್ದ ವಿಭಾಗೀಯ ಆದೇಶಿಸಿದೆ.

ದಂಪತಿ ಪರಸ್ಪರ ಒಪ್ಪಿದರೂ ನಿಯಮದಂತೆ 18 ತಿಂಗಳ ಬಳಿಕ ವಿಚ್ಚೇದನ: ಹೈಕೋರ್ಟ್
ಕರ್ನಾಟಕ ಹೈಕೋರ್ಟ್ (ಸಂಗ್ರಹ ಚಿತ್ರ)
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Dec 07, 2023 | 2:19 PM

Share

ಬೆಂಗಳೂರು, (ಡಿಸೆಂಬರ್ 07): ದಂಪತಿ ಪರಸ್ಪರ ಸಮ್ಮತಿಯ ಮೇರೆಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರೂ ಸಹ ಹಿಂದೂ ವಿವಾಹ ಕಾಯ್ದೆ(hindu marriage act) ಸೆಕ್ಷನ್ 13ಬಿ ಪ್ರಕಾರ 18 ತಿಂಗಳು ಕಾಯಬೇಕು. ಹೌದು…ಇದೇ ರೀತಿ ಪ್ರಕರಣವೊಂದರ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್(Karnataka High Court)​, ಹಿಂದೂ ವಿವಾಹ ಕಾಯ್ದೆ ಸೆಕ್ಷನ್ 13ಬಿ ಅನ್ವಯ ದಂಪತಿ 18 ತಿಂಗಳ ಬಳಿಕವೇ ವಿಚ್ಚೇದನ ಪಡೆದುಕೊಳ್ಳಬಹುದು ಎಂದು ಆದೇಶಿಸಿದೆ.

ದಂಪತಿ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶ ರದ್ದು ಮಾಡಿರುವ ನ್ಯಾಯಮೂರ್ತಿ ಕೆಎಸ್ ಮುದುಗಲ್​ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್ ಅವರಿದ್ದ ವಿಭಾಗೀಯ ಪೀಠ, ದಂಪತಿಗೆ ಬೆಂಗಳೂರು ಮಧ್ಯಸ್ಥಿಕೆ ಕೇಂದ್ರಕ್ಕೆ ತೆರಳುವಂತೆ ನಿರ್ದೇಶನ ನೀಡಿದೆ. ಅಲ್ಲದೇ ಮಧ್ಯಸ್ಥಿಕೆ ಕೇಂದ್ರವು ವಿಚಾರಣಾ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಬೇಕು. ಆ ವರದಿ ಆಧರಿಸಿ ವಿಚಾರಣಾ ನ್ಯಾಯಾಲಯವು ಕಾನೂನು ಪ್ರಕಾರ ವಿಚ್ಛೇದನ ಅರ್ಜಿಯನ್ನು ಇತ್ಯರ್ಥಪಡಿಸಬಹುದು ಎಂದು ತಿಳಿಸಿದೆ.

ಪ್ರಕರಣದ ಹಿನ್ನೆಲೆ

ಅರ್ಜಿದಾರ ದಂಪತಿ 2020ರ ನವೆಂಬರ್ 27ರಂದು ಮದುವೆಯಾಗಿದ್ದರು. ಆದ್ರೆ ಕೆಲ ಕಾರಣಾಂತರಗಳಿಂದ ದಂಪತಿ 2021ರ ಸೆಪ್ಟಂಬರ್‌ನಿಂದ ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದರು. ಅಲ್ಲದೇ ದಂಪತಿ ಪರಸ್ಪರ ಒಪ್ಪಿಗೆ ಮೇರೆಗೆ ವಿವಾಹ ವಿಚ್ಚೇದನ ಪಡೆದುಕೊಳ್ಳುವುದಾಗಿ ಅರ್ಜಿ ಸಲ್ಲಿಸಿದ್ದರು. ದಂಪತಿ ಪರಸ್ಪರ ಒಪ್ಪಿಗೆ ಮೇಲೆ ವಿಚ್ಛೇಧನ ಪಡೆಯುವುದಾಗಿ ಹೇಳಿದ್ದರು. ಆದರೆ ನ್ಯಾಯಾಲಯ ಮತ್ತೆ ಒಂದುಗೂಡುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ಮಾಡಿ ಎಂದು ಪ್ರಕರಣವನ್ನು ಮಧ್ಯಸ್ಥಿಕೆ ಕೇಂದ್ರಕ್ಕೆ ವರ್ಗಾಯಿಸಿದ್ದರು.

ಮಧ್ಯಸ್ಥಿಕೆದಾರರು ಇಬ್ಬರ ನಡುವೆ ಸಹಮತ ಮೂಡಿಸಿ ಮತ್ತೆ ಒಗ್ಗೂಡಿಸಲು ಪ್ರಯತ್ನಿಸಿದರಾದರೂ ಅದು ಫಲ ನೀಡಲಿಲ್ಲ, ಇಬ್ಬರೂ ಮಧ್ಯಸ್ಥಿಗೆ ಗೈರು ಹಾಜರಾಗಿದ್ದರು. ಹಾಗಾಗಿ ಮಧ್ಯಸ್ಥಿಕೆ ಕೇಂದ್ರ ವರದಿಯನ್ನು ಸಲ್ಲಿಸಿತ್ತು. ಅದನ್ನು ಆಧರಿಸಿ ವಿಚಾರಣಾ ನ್ಯಾಯಾಲಯ, ದಂಪತಿಗೆ ಈ ಪ್ರಕರಣವನ್ನು ಮುನ್ನಡೆಸಲು ಆಸಕ್ತಿ ಇಲ್ಲಎಂದು ದಾಖಲಿಸಿ ಕೇಸ್‌ ವಜಾ ಮಾಡಿತ್ತು. ಅದನ್ನು ಪ್ರಶ್ನಿಸಿ ಇಬ್ಬರೂ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ