Karnataka Dam Water Level: ಆಲಮಟ್ಟಿ ​ಭರ್ತಿಗೆ 1 ಅಡಿ ಬಾಕಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಇದರಿಂದ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ಆಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರಕ್ಕೆ (ಆಲಮಟ್ಟಿ ಜಲಾಶಯ) ಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಆಲಮಟ್ಟಿ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ವಿವರ ಇಲ್ಲಿದೆ.

Karnataka Dam Water Level: ಆಲಮಟ್ಟಿ ​ಭರ್ತಿಗೆ 1 ಅಡಿ ಬಾಕಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ಆಲಮಟ್ಟಿ ಜಲಾಶಯ
Follow us
| Updated By: ವಿವೇಕ ಬಿರಾದಾರ

Updated on: Jul 22, 2024 | 7:19 AM

519.60 ಮೀಟರ್ ಎತ್ತರದ ಆಲಮಟ್ಟಿ ಡ್ಯಾಂನಲ್ಲಿ ಇಂದು (ಜು.22) 517.90 ಮೀಟರ್ ನೀರು ಸಂಗ್ರಹವಾಗಿದೆ. ಡ್ಯಾಂಗೆ 87,217 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಡ್ಯಾಂನಿಂದ 26 ಕ್ರಸ್ಟ್ ಗೇಟ್ ಗಳ ಮೂಲಕ 1,00,064 ಕ್ಯೂಸೆಕ್ ನೀರನ್ನು ನದಿಗೆ ಹರಿ ಬಿಡಲಾಗುತ್ತಿದೆ. 123 ಟಿಎಂಸಿ ನೀರು ಸಂಗ್ರಹ ಮಾಡಿಕೊಳ್ಳುವ ಸಾಮರ್ಥ್ಯದ ಡ್ಯಾಂನಲ್ಲಿ ಸದ್ಯ 96.306 ಟಿಎಂಸಿ ನೀರು ಸಂಗ್ರಹವಾಗಿದೆ. ಡ್ಯಾಂ ಭರ್ತಿಗೆ ಇನ್ನೂ ಕೇವಲ 1.30 ಮೀಟರ್ ಮಾತ್ರ ಬಾಕಿಯಿದೆ. ಆಲಮಟ್ಟಿ ಜಲಾಶಯ ಸೇರಿದಂತೆ ಕರ್ನಾಟಕದ 14 ಜಲಾಶಯಗಳ (Karnataka Dam Water Level) ನೀರಿನ ಮಟ್ಟ ವಿವರ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 96.31 37.55 87,217 100064
ತುಂಗಭದ್ರಾ ಜಲಾಶಯ (Tungabhadra Dam) 497.71 105.79 74.58 13.72 1,12,101 2464
ಮಲಪ್ರಭಾ ಜಲಾಶಯ (Malaprabha Dam) 633.80 37.73 18.48 8.69 14824 194
ಕೆ.ಆರ್.ಎಸ್ (KRS Dam) 38.04 49.45 46.57 16.19 69617 27189
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 86.50 32.81 48793 0
ಕಬಿನಿ ಜಲಾಶಯ (Kabini Dam) 696.13 19.52 17.77 13.15 39396 35917
ಭದ್ರಾ ಜಲಾಶಯ (Bhadra Dam) 657.73 71.54 47.07 28.99 23674 191
ಘಟಪ್ರಭಾ ಜಲಾಶಯ (Ghataprabha Dam) 662.91 51.00 36.09 13.13 29991 1631
ಹೇಮಾವತಿ ಜಲಾಶಯ (Hemavathi Dam) 890.58 37.10 34.57 17.94 32141 27189
ವರಾಹಿ ಜಲಾಶಯ (Varahi Dam) 594.36 31.10 12.16 6.20 7524 0
ಹಾರಂಗಿ ಜಲಾಶಯ (Harangi Dam)​​ 871.38 8.50 6.95 6.23 8069 5750
ಸೂಫಾ (Supa Dam) 564.00 145.33 70.68 44.47 31597 0
ನಾರಾಯಣಪುರ ಜಲಾಶಯ (Narayanpura Dam) 492.25 33.31 28.90 13.94 96063 108773
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 17.94 24.73 0 147

ನದಿ ಪಾತ್ರದಲ್ಲಿನ ಜನರು ಹಾಗೂ ಡ್ಯಾಂ ಮುಂಭಾಗದ ಜನರು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಜಾನುವಾರುಗಳನ್ನು ನದಿ ತಟದಲ್ಲಿ ಬಿಡಬಾರದು. ಜನರು ಸಹ ಸುರಕ್ಷತಿತ ಪ್ರದೇಶಗಳಲ್ಲಿ ಇರಬೇಕು. ನದಿಯಲ್ಲಿ ಯಾರೂ ಇಳಿಯಬಾರದೆಂದು ಜಿಲ್ಲಾಡಳಿತ ಹಾಗೂ ಕೆಬಿಜೆಎನ್ಎಲ್ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ