AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್: ಶಾಕಿಂಗ್ ಅಂಕಿಅಂಶ ಬಿಚ್ಚಿಟ್ಟ ಇ ಗವರ್ನೆನ್ಸ್ ಇಲಾಖೆ!

ಬಿಪಿಎಲ್ ಕಾರ್ಡ್, ಬಡವರ ಪಾಲಿನ ಆಶಾಕಿರಣ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಅನುಕೂಲ. ಆದರೆ, ನಿಯಮಾವಳಿಗಳನ್ನೇ ಮೀರಿ ಬಿಪಿಎಲ್​ ಕಾರ್ಡ್​ ಸೌಲಭ್ಯ ಪಡೆಯುತ್ತಿರುವ ಜನರಿಗೆ ಇದೀಗ ಶಾಕ್​ ಎದುರಾಗಿದೆ. ಫಲಾನುಭವಿಗಳು ಅಲ್ಲದವರು ಬಿಪಿಎಲ್ ಕಾರ್ಡ್ ಬಳಸಿಕೊಂಡು ಸರ್ಕಾರದ ನಾನಾ ಯೋಜನೆಗಳನ್ನ ಪಡೆಯುತ್ತಿದ್ದಾರೆ. ಹೀಗಾಗಿ ಬಿಪಿಎಲ್ ಕಾರ್ಡ್​ನಲ್ಲಿ ಆಪರೇಷನ್ ಆಗ್ತಿದೆ. ಈಗಾಗಲೇ ಸುಮಾರು 10 ಸಾವಿರ ಬಿಪಿಎಲ್ ಕಾರ್ಡ್​ಗಳನ್ನು ರದ್ದು ಮಾಡಲಾಗಿದ್ದು, ಮತ್ತೆ ಮೆಗಾ ಆಪರೇಷನ್​ ನಡೆಯುವ ಸುಳಿವು ಸಿಕ್ಕಿದೆ.

ಬರೋಬ್ಬರಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್: ಶಾಕಿಂಗ್ ಅಂಕಿಅಂಶ ಬಿಚ್ಚಿಟ್ಟ ಇ ಗವರ್ನೆನ್ಸ್ ಇಲಾಖೆ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 20, 2024 | 2:39 PM

Share

ಬೆಂಗಳೂರು, ನವೆಂಬರ್ 20: ರಾಜ್ಯ ಸರ್ಕಾರದಿಂದ ಅನರ್ಹ ಬಿಪಿಎಲ್ ಕಾರ್ಡ್​ದಾರರ ಮೆಗಾ ಆಪರೇಷನ್​ ನಡೆಯುತ್ತಿದೆ. ಅನರ್ಹ ಬಿಪಿಎಲ್ ಕಾರ್ಡ್​ ಫಲಾನುಭವಿಗಳೇ ಹೆಚ್ಚು ಇರುವ ಶಾಕಿಂಗ್ ಮಾಹಿತಿ ಬಯಲಾಗಿದೆ. ರಾಜ್ಯದಲ್ಲಿ ಬರೋಬ್ಬರಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್​ದಾರರು ಇದ್ದಾರೆ ಎಂಬ ಸತ್ಯಸಂಗತಿ ಬಯಲಾಗಿದೆ. ಕಳೆದ ಆಗಸ್ಟ್​ ತಿಂಗಳಿನಲ್ಲೇ ಆಹಾರ ಇಲಾಖೆಗೆ ಇ ಗವರ್ನೆನ್ಸ್​ ಇಲಾಖೆ ಮಾಹಿತಿ ಕೊಟ್ಟಿದೆ. ಇದೇ ಮಾಹಿತಿ ಇಟ್ಟುಕೊಂಡೇ 22 ಲಕ್ಷ ಅನರ್ಹ ಬಿಪಿಎಲ್​ ಕಾರ್ಡ್​​ಗಳ ರದ್ದಾಗಲಿದೆಯೇ ಎಂಬ ಅನುಮಾನ ಈಗ ಮೂಡಿದೆ.

ಕಲಬುರಗಿಯಲ್ಲೇ ಅತಿಹೆಚ್ಚು ಅನರ್ಹರಿಗೆ ಬಿಪಿಎಲ್ ಕಾರ್ಡ್

ಕಲಬುರಗಿ ಜಿಲ್ಲೆಯಲ್ಲೇ ಅತಿಗಹೆಚ್ಚು ಅನರ್ಹರಿಗೆ ಬಿಪಿಎಲ್​ ಕಾರ್ಡ್​ ಕೊಟ್ಟಿರುವ ಮಾಹಿತಿ ಸಿಕ್ಕಿದೆ. ಕಲಬುರಗಿಯಲ್ಲಿ 78,058 ಮಂದಿ ಅನರ್ಹರಿಗೆ ಬಿಪಿಎಲ್ ಕಾರ್ಡ್​ ನೀಡಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 65,563 ಅನರ್ಹರ ಬಳಿ ಬಿಪಿಎಲ್ ಕಾರ್ಡ್​ ಇದೆ. ಬೆಂಗಳೂರು ಪೂರ್ವದಲ್ಲಿ 9,129 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರು ಉತ್ತರದಲ್ಲಿ 17,382 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರು ದಕ್ಷಿಣದಲ್ಲಿ 11,447 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ.

ಬಿಪಿಎಲ್ ಕಾರ್ಡ್ ರದ್ದು; ಪಡಿತರ ಸಿಗದೇ ವೃದ್ಧೆ ಕಣ್ಣೀರು

ಬಾಗಲಕೋಟೆಯಲ್ಲಿ ಬಿಪಿಎಲ್​ ಕಾರ್ಡ್​ ರದ್ದಿನಿಂದಾಗಿ ಪಡಿತರ ಸಿಗದೇ ವೃದ್ಧೆಯೊಬ್ಬರು ಕಣ್ಣೀರು ಹಾಕಿದ್ದಾರೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನ ವೃಷಭಾವತಿ ನಗರದಲ್ಲಿ ಹಲವು ಬಿಪಿಎಲ್ ಕಾರ್ಡ್ ಗಳು ರದ್ದುಗೊಂಡಿವೆ. ಮನೆಗೆಲಸ, ಹಪ್ಪಳ ಮಾರಾಟ ಮಾಡಿ ಬದುಕು ಸಾಗಿಸುತ್ತಿದ್ದ ಜನರು ಕಾರ್ಡ್ ರದ್ದತಿಯಿಂದ ಸಮಸ್ಯೆ ಎದುರಿಸುತ್ತಿದ್ದೇವೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್ನು ಬಿಪಿಎಲ್​ ಕಾರ್ಡ್​ ಪರಿಷ್ಕರಣೆಯನ್ನೇ ಅಸ್ತ್ರ ಮಾಡ್ಕೊಂಡಿರುವ ಬಿಜೆಪಿ, ಸತ್ಯಶೋಧನೆ ನಡೆಸುತ್ತಿದೆ. ಬಿಪಿಎಲ್ ಕಾರ್ಡ್​ ರದ್ದಾದವರ ಮನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್​ ಭೇಟಿ ನೀಡಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಜೈ ಮಾರುತಿ ನಗರದಲ್ಲಿ ಬಿಪಿಎಲ್ ಕಾರ್ಡ್ ರದ್ದಾದವರ ನಿವಾಶಕ್ಕೆ ಭೇಟಿ ನೀಡಿದ್ದಾರೆ. ಆರ್. ಅಶೋಕ್​ಗೆ ಅಶ್ವಥ್ ನಾರಾಯಣ, ಕೆ.ಗೋಪಾಲಯ್ಯ ಸಾಥ್ ನೀಡಿದ್ದಾರೆ.

ಇದನ್ನೂ ಓದಿ: ಬಡ ಚಾಲಕನ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು: ಪತ್ನಿಗೆ ಬ್ರೈನ್ ಟ್ಯೂಮರ್, ದುಡ್ಡಿಲ್ಲದೆ ಪರದಾಡುತ್ತಿರುವವರ ಮೇಲೆ ಪ್ರಹಾರ

ಏತನ್ಮಧ್ಯೆ, ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಭರವಸೆ ನೀಡಿದ್ದಾರೆ. ಅರ್ಹ ಬಿಪಿಎಲ್ ಕಾರ್ಡ್​ದಾರರು ಆತಂಕ ಆತಂಕಕ್ಕೊಳಗಾಗುವುದು ಬೇಡ ಎಂದಿದ್ದಾರೆ.

ಯಾರು ಬಡವರಿದ್ದಾರೆ, ಅವರಿಗೆ ಬಿಪಿಎಲ್ ಕಾರ್ಡ್​ ಸಿಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಚಿವ ಎಂಬಿ ಪಾಟೀಲ್ ಮಾತನಾಡಿ, ಬಡವರ ರೇಷನ್ ಕಾರ್ಡ್​ ರದ್ದು ಮಾಡಲ್ಲ ಎಂದಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು