ಬೆಂಗಳೂರು, ನವೆಂಬರ್ 20: ರಾಜ್ಯ ಸರ್ಕಾರದಿಂದ ಅನರ್ಹ ಬಿಪಿಎಲ್ ಕಾರ್ಡ್ದಾರರ ಮೆಗಾ ಆಪರೇಷನ್ ನಡೆಯುತ್ತಿದೆ. ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳೇ ಹೆಚ್ಚು ಇರುವ ಶಾಕಿಂಗ್ ಮಾಹಿತಿ ಬಯಲಾಗಿದೆ. ರಾಜ್ಯದಲ್ಲಿ ಬರೋಬ್ಬರಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ದಾರರು ಇದ್ದಾರೆ ಎಂಬ ಸತ್ಯಸಂಗತಿ ಬಯಲಾಗಿದೆ. ಕಳೆದ ಆಗಸ್ಟ್ ತಿಂಗಳಿನಲ್ಲೇ ಆಹಾರ ಇಲಾಖೆಗೆ ಇ ಗವರ್ನೆನ್ಸ್ ಇಲಾಖೆ ಮಾಹಿತಿ ಕೊಟ್ಟಿದೆ. ಇದೇ ಮಾಹಿತಿ ಇಟ್ಟುಕೊಂಡೇ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ಗಳ ರದ್ದಾಗಲಿದೆಯೇ ಎಂಬ ಅನುಮಾನ ಈಗ ಮೂಡಿದೆ.
ಕಲಬುರಗಿ ಜಿಲ್ಲೆಯಲ್ಲೇ ಅತಿಗಹೆಚ್ಚು ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಟ್ಟಿರುವ ಮಾಹಿತಿ ಸಿಕ್ಕಿದೆ. ಕಲಬುರಗಿಯಲ್ಲಿ 78,058 ಮಂದಿ ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 65,563 ಅನರ್ಹರ ಬಳಿ ಬಿಪಿಎಲ್ ಕಾರ್ಡ್ ಇದೆ. ಬೆಂಗಳೂರು ಪೂರ್ವದಲ್ಲಿ 9,129 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರು ಉತ್ತರದಲ್ಲಿ 17,382 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರು ದಕ್ಷಿಣದಲ್ಲಿ 11,447 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ.
ಬಾಗಲಕೋಟೆಯಲ್ಲಿ ಬಿಪಿಎಲ್ ಕಾರ್ಡ್ ರದ್ದಿನಿಂದಾಗಿ ಪಡಿತರ ಸಿಗದೇ ವೃದ್ಧೆಯೊಬ್ಬರು ಕಣ್ಣೀರು ಹಾಕಿದ್ದಾರೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನ ವೃಷಭಾವತಿ ನಗರದಲ್ಲಿ ಹಲವು ಬಿಪಿಎಲ್ ಕಾರ್ಡ್ ಗಳು ರದ್ದುಗೊಂಡಿವೆ. ಮನೆಗೆಲಸ, ಹಪ್ಪಳ ಮಾರಾಟ ಮಾಡಿ ಬದುಕು ಸಾಗಿಸುತ್ತಿದ್ದ ಜನರು ಕಾರ್ಡ್ ರದ್ದತಿಯಿಂದ ಸಮಸ್ಯೆ ಎದುರಿಸುತ್ತಿದ್ದೇವೆ ಎಂದು ಅಳಲು ತೋಡಿಕೊಂಡಿದ್ದಾರೆ.
ಇನ್ನು ಬಿಪಿಎಲ್ ಕಾರ್ಡ್ ಪರಿಷ್ಕರಣೆಯನ್ನೇ ಅಸ್ತ್ರ ಮಾಡ್ಕೊಂಡಿರುವ ಬಿಜೆಪಿ, ಸತ್ಯಶೋಧನೆ ನಡೆಸುತ್ತಿದೆ. ಬಿಪಿಎಲ್ ಕಾರ್ಡ್ ರದ್ದಾದವರ ಮನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಭೇಟಿ ನೀಡಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಜೈ ಮಾರುತಿ ನಗರದಲ್ಲಿ ಬಿಪಿಎಲ್ ಕಾರ್ಡ್ ರದ್ದಾದವರ ನಿವಾಶಕ್ಕೆ ಭೇಟಿ ನೀಡಿದ್ದಾರೆ. ಆರ್. ಅಶೋಕ್ಗೆ ಅಶ್ವಥ್ ನಾರಾಯಣ, ಕೆ.ಗೋಪಾಲಯ್ಯ ಸಾಥ್ ನೀಡಿದ್ದಾರೆ.
ಇದನ್ನೂ ಓದಿ: ಬಡ ಚಾಲಕನ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು: ಪತ್ನಿಗೆ ಬ್ರೈನ್ ಟ್ಯೂಮರ್, ದುಡ್ಡಿಲ್ಲದೆ ಪರದಾಡುತ್ತಿರುವವರ ಮೇಲೆ ಪ್ರಹಾರ
ಏತನ್ಮಧ್ಯೆ, ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಭರವಸೆ ನೀಡಿದ್ದಾರೆ. ಅರ್ಹ ಬಿಪಿಎಲ್ ಕಾರ್ಡ್ದಾರರು ಆತಂಕ ಆತಂಕಕ್ಕೊಳಗಾಗುವುದು ಬೇಡ ಎಂದಿದ್ದಾರೆ.
ಯಾರು ಬಡವರಿದ್ದಾರೆ, ಅವರಿಗೆ ಬಿಪಿಎಲ್ ಕಾರ್ಡ್ ಸಿಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಚಿವ ಎಂಬಿ ಪಾಟೀಲ್ ಮಾತನಾಡಿ, ಬಡವರ ರೇಷನ್ ಕಾರ್ಡ್ ರದ್ದು ಮಾಡಲ್ಲ ಎಂದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ