Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಡಿಜಿ ಐಜಿಪಿ ಆಗಿ ಅಲೋಕ್ ಮೋಹನ್ ನೇಮಕ

Karnataka Dg IGP Alok Mohan: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಮೋಹನ್ ಅವರು ನೇಮಕಗೊಂಡಿದ್ದಾರೆ.

ಕರ್ನಾಟಕ ಡಿಜಿ ಐಜಿಪಿ ಆಗಿ ಅಲೋಕ್ ಮೋಹನ್ ನೇಮಕ
ಕರ್ನಾಟಕ ಡಿಜಿ ಐಜಿಪಿ ಆಗಿ ಅಲೋಕ್ ಮೋಹನ್ ನೇಮಕ
Follow us
Rakesh Nayak Manchi
|

Updated on:May 20, 2023 | 8:57 PM

ಬೆಂಗಳೂರು: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (Dg IGP) ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿ ಡಾ.  ಅಲೋಕ್ ಮೋಹನ್ (Alok Mohan) ಅವರು ನೇಮಕಗೊಂಡಿದ್ದಾರೆ. ಇದಕ್ಕೂ ಮನ್ನಡ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ 1986ನೇ ಬ್ಯಾಚ್‌ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್  ಇದ್ದರು. ಸದ್ಯ ಇವರನ್ನು ಸಿಬಿಐನ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಹಾಗಿದ್ದರೆ ಡಾ. ಅಲೋಕ್‌ ಮೋಹನ್‌ ಯಾರು? ಅವರ ಹಿನ್ನೆಲೆ ಏನು ಎನ್ನುವುದನ್ನು ನೋಡುವುದಾದರೆ, ಬಿಹಾರ ಮೂಲದ ಡಾ. ಅಲೋಕ್‌ ಮೋಹನ್‌, 1987ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ ಐಪಿಎಸ್‌ ಅಧಿಕಾರಿ. 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಕಾರಾಗೃಹ ಇಲಾಖೆ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಸೇವಾ ಜೇಷ್ಠತೆ ಆಧಾರದಲ್ಲಿ ಡಿಜಿ-ಐಜಿ ಹುದ್ದೆಯ ಮೊದಲ ಆಯ್ಕೆಯಾಗಿದ್ದರು. ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕಗೊಳ್ಳುವ ಮುನ್ನ ಅಗ್ನಿಶಾಮಕದಳ ಹಾಗೂ ತುರ್ತು ಸೇವೆಗಳ ಡಿಜಿಪಿಯಾಗಿದ್ದರು. ಇವರು 2025ರ ಏಪ್ರಿಲ್‌ನಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದಾರೆ.

ಇದನ್ನೂ ಓದಿ: ಸಿಬಿಐ ನಿರ್ದೇಶಕರಾಗಿ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ನೇಮಕ

ಕೇಂದ್ರೀಯ ತನಿಖಾ ದಳದ ನಿರ್ದೇಶಕರಾಗಿ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ. 1964 ರಲ್ಲಿ ಜನಿಸಿದ ಪ್ರವೀಣ್ ಸೂದ್, IIT ದೆಹಲಿಯಿಂದ ಪದವಿ ಪಡೆದರು, 1986 ರಲ್ಲಿ IPS ಗೆ ಸೇರಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. 1989 ರಲ್ಲಿ ಮೈಸೂರು ಪೊಲೀಸ್ ಅಧೀಕ್ಷಕರಾಗಿ, ಬೆಂಗಳೂರು ನಗರಕ್ಕೆ ಕಾನೂನು ಮತ್ತು ಸುವ್ಯವಸ್ಥೆ, ಉಪ ಪೊಲೀಸ್ ಆಯುಕ್ತರಾಗಿ, ಬಳ್ಳಾರಿ ಮತ್ತು ರಾಯಚೂರು ಪೊಲೀಸ್ ಅಧೀಕ್ಷಕರಾಗಿ, ಮಾರಿಷಸ್ ಸರ್ಕಾರದ ಪೊಲೀಸ್ ಸಲಹೆಗಾರರಾಗಿ ಹೀಗೆ ಅನೇಕ ಉನ್ನತ ಹುದ್ದೆಗಳಲ್ಲಿ ಸೇವಾ ಅನುಭವವನ್ನು ಹೊಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:45 pm, Sat, 20 May 23