ಸ್ಮಶಾನದಲ್ಲಿ ಅಂತ್ಯಕ್ರಿಯೆಗೆ ಅವಕಾಶ ಕೊಡದ ಪೊಲೀಸರು, ಮುಂದೇನಾಯ್ತು?

ಯಾದಗಿರಿ: ಗುರುಮಠಕಲ್ ತಾಲೂಕಿನ ತುರಕಲ್ ದೊಡ್ಡಿ ಗ್ರಾಮದ ಸ್ಮಶಾನದಲ್ಲಿ ಅಂತ್ಯಕ್ರಿಯೆ ಸಂಬಂಧ ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ವಾಗ್ವಾದವಾಗಿದೆ. ಗ್ರಾಮದ ವ್ಯಕ್ತಿಯೋರ್ವ ಸ್ಮಶಾನ ಜಾಗ ತನ್ನದೆಂದು ಸ್ಟೇ ತಂದಿದ್ದ. ಹೀಗಾಗಿ ಪೊಲೀಸರು ಸ್ಮಶಾನದಲ್ಲಿ ಅಂತ್ಯಕ್ರಿಯೆಗೆ ಅವಕಾಶ ಮಾಡಿಕೊಡಲಿಲ್ಲ. ಈ ವೇಳೆ ಪೊಲೀಸರು ಜೊತೆ ಪುರುಷರು ವಾಗ್ವಾದಕ್ಕಿಳಿದಿದ್ದಾರೆ. ಆಗ ಮಹಿಳೆಯರೇ ಮುಂದೆ ನಿಂತು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ಸಂಬಂಧ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಮಶಾನದಲ್ಲಿ ಅಂತ್ಯಕ್ರಿಯೆಗೆ ಅವಕಾಶ ಕೊಡದ ಪೊಲೀಸರು, ಮುಂದೇನಾಯ್ತು?
ಸಾಧು ಶ್ರೀನಾಥ್​

Updated on: Dec 07, 2019 | 9:56 AM

ಯಾದಗಿರಿ: ಗುರುಮಠಕಲ್ ತಾಲೂಕಿನ ತುರಕಲ್ ದೊಡ್ಡಿ ಗ್ರಾಮದ ಸ್ಮಶಾನದಲ್ಲಿ ಅಂತ್ಯಕ್ರಿಯೆ ಸಂಬಂಧ ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ವಾಗ್ವಾದವಾಗಿದೆ.

ಗ್ರಾಮದ ವ್ಯಕ್ತಿಯೋರ್ವ ಸ್ಮಶಾನ ಜಾಗ ತನ್ನದೆಂದು ಸ್ಟೇ ತಂದಿದ್ದ. ಹೀಗಾಗಿ ಪೊಲೀಸರು ಸ್ಮಶಾನದಲ್ಲಿ ಅಂತ್ಯಕ್ರಿಯೆಗೆ ಅವಕಾಶ ಮಾಡಿಕೊಡಲಿಲ್ಲ. ಈ ವೇಳೆ ಪೊಲೀಸರು ಜೊತೆ ಪುರುಷರು ವಾಗ್ವಾದಕ್ಕಿಳಿದಿದ್ದಾರೆ. ಆಗ ಮಹಿಳೆಯರೇ ಮುಂದೆ ನಿಂತು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ಸಂಬಂಧ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us