ಶುಲ್ಕ ಪಾವತಿಸಿಲ್ಲವೆಂದು SSLC ಪರೀಕ್ಷೆಗೆ ಅವಕಾಶ ನಿರಾಕರಣೆ; ಆತ್ಮಹತ್ಯೆಗೆ ಯತ್ನಿಸಿದ ಆಳ್ವಾಸ್​ ಸಂಸ್ಥೆ ವಿದ್ಯಾರ್ಥಿನಿ

ಪರೀಕ್ಷೆ ಬರೆಯಲೇಬೇಕು ಎಂದು ನಿರ್ಧರಿಸಿದ ವಿದ್ಯಾರ್ಥಿನಿ ನಿನ್ನೆಯಷ್ಟೇ ನ್ಯಾಯಕ್ಕಾಗಿ ಮಕ್ಕಳ ಹಕ್ಕುಗಳ ಆಯೋಗದ ಮೊರೆ ಹೋಗುವುದಾಗಿ ತಿಳಿಸಿದ್ದು, ಇದೀಗ ಆತ್ಮಹತ್ಯೆ ಯತ್ನ ಮಾಡಿರುವುದು ಬೆಳಕಿಗೆ ಬಂದಿದೆ.

ಶುಲ್ಕ ಪಾವತಿಸಿಲ್ಲವೆಂದು SSLC ಪರೀಕ್ಷೆಗೆ ಅವಕಾಶ ನಿರಾಕರಣೆ; ಆತ್ಮಹತ್ಯೆಗೆ ಯತ್ನಿಸಿದ ಆಳ್ವಾಸ್​ ಸಂಸ್ಥೆ ವಿದ್ಯಾರ್ಥಿನಿ
ಸಾಂಕೇತಿಕ ಚಿತ್ರ
Follow us
TV9 Web
| Updated By: Skanda

Updated on:Jul 17, 2021 | 9:13 AM

ಬೆಂಗಳೂರು: ಶುಲ್ಕ ಪಾವತಿಸದ ಹಿನ್ನೆಲೆ ಎಸ್​ಎಸ್​ಎಲ್​ಸಿ ಪರೀಕ್ಷೆಗೆ (SSLC Exam 2021) ಅವಕಾಶ ಸಿಗದೇ ಇರುವುದರಿಂದ ಮನನೊಂದ ಮೂಡಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ (Alva’s College student) ಆತ್ಮಹತ್ಯೆಗೆ (Suicide attempt) ಪ್ರಯತ್ನಿಸಿದ್ದಾರೆ ಎನ್ನುವುದು ಬೆಳಕಿಗೆ ಬಂದಿದೆ. ಕೊರಟಗೆರೆ ಮೂಲದ ವಿದ್ಯಾರ್ಥಿನಿ ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ 2020-21ನೇ ಶೈಕ್ಷಣಿಕ ಸಾಲಿನ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯಾಗಿದ್ದು, ಕಳೆದ ವರ್ಷದ ಶಾಲಾ ಶುಲ್ಕ, ವಸತಿ ಮತ್ತು ಊಟದ ಶುಲ್ಕ ಬಾಕಿಯಿರುವ ಕಾರಣಕ್ಕೆ ಪರೀಕ್ಷೆಯಿಂದ ವಂಚಿತರಾಗಿದ್ದಾರೆ. 9ನೇ ತರಗತಿಯಲ್ಲಿ ಶೇ.96 ಅಂಕ ಗಳಿಸಿರುವ ವಿದ್ಯಾರ್ಥಿನಿ ಈ ಬಾರಿ ಹಣವಿಲ್ಲದ ಕಾರಣಕ್ಕೆ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಳ್ಳುವುದು (Registration) ಸಾಧ್ಯವಾಗಿಲ್ಲ.

ಶುಲ್ಕ ಪಾವತಿಸಲು ಹಣವಿಲ್ಲ, ಪರೀಕ್ಷೆಗೆ ಅವಕಾಶ ಮಾಡಿಕೊಡಿ ಎಂದರೂ ಶಿಕ್ಷಣ ಸಂಸ್ಥೆ ಪ್ರತಿಭಾನ್ವಿತ ವಿದ್ಯಾರ್ಥಿನಿಗೆ ಪರೀಕ್ಷೆಗೆ ಕೂರಲು ಅನುಮತಿ ನೀಡಿಲ್ಲ ಎನ್ನುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ವಿದ್ಯಾರ್ಥಿನಿ ಡಿಸೆಂಬರ್ ತಿಂಗಳಲ್ಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್​ ಅವರ ಬಳಿ ತನ್ನ ಸಮಸ್ಯೆಯನ್ನು ಹೇಳಿಕೊಂಡರೂ ಯಾವುದೇ ಪ್ರಯೋಜನ ಆಗಿಲ್ಲ ಎನ್ನಲಾಗಿದೆ. ಪರೀಕ್ಷೆ ಬರೆಯಲೇಬೇಕು ಎಂದು ನಿರ್ಧರಿಸಿದ ವಿದ್ಯಾರ್ಥಿನಿ ನಿನ್ನೆಯಷ್ಟೇ ನ್ಯಾಯಕ್ಕಾಗಿ ಮಕ್ಕಳ ಹಕ್ಕುಗಳ ಆಯೋಗದ ಮೊರೆ ಹೋಗುವುದಾಗಿ ತಿಳಿಸಿದ್ದು, ಇದೀಗ ಆತ್ಮಹತ್ಯೆ ಯತ್ನ ಮಾಡಿರುವುದು ಬೆಳಕಿಗೆ ಬಂದಿದೆ.

ಕೊರಟಗೆರೆಯ ಹನುಮಂತಪುರ ನಿವಾಸಿಯಾದ ವಿದ್ಯಾರ್ಥಿನಿ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ 2020-21 ನೇ ಸಾಲಿನ 10 ನೇ ತರಗತಿ ಅಭ್ಯಾಸ ಮಾಡುತ್ತಿದ್ದಾರೆ. ಕಳೆದ ವರ್ಷದ ಶಾಲಾ ಶುಲ್ಕ ಮತ್ತು ವಸತಿ ಮತ್ತು ಊಟದ ಶುಲ್ಕ ಬಾಕಿಯಿರುವುದಕ್ಕೆ, ಶಾಲಾ ಸಂಸ್ಥೆ ಎಸ್ಎಸ್ಎಲ್​ಸಿ ಪರೀಕ್ಷೆಗೆ ನೋಂದಾಯಿಸಿಲ್ಲ. 9ನೇ ತರಗತಿಯಲ್ಲಿ ಶೇ.96 ಅಂಕ ಗಳಿಸಿದ್ದೇನೆ, ಹೀಗಾಗಿ 10 ನೇ ತರಗತಿ ಪರೀಕ್ಷೆ ಬರೆಯಲು ಅವಕಾಶ ಕೊಡಿಸಿ ಎಂದು ವಿದ್ಯಾರ್ಥಿನಿ ಮನವಿ ಮಾಡಿಕೊಂಡರೂ ಸ್ಪಂದಿಸಿಲ್ಲ ಎನ್ನಲಾಗಿದೆ.

ಈ ಸಮಸ್ಯೆ ಗಮನಕ್ಕೆ ತಂದ ಮೇಲೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿನಿಗೆ ಬರುವ ಆಗಸ್ಟ್​ನಲ್ಲಿ ಪರೀಕ್ಷೆ ತೆಗೆದುಕೊಳ್ಳಲು ತಿಳಿಸಿದ್ದರು. ಆದರೆ, ನೊಂದ ವಿದ್ಯಾರ್ಥಿನಿ ಪ್ರಸಕ್ತ ಸಾಲಿನಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಅಲ್ಲದೇ ಕೊರೊನಾ ಸೋಂಕಿತ ಮಕ್ಕಳಿಗೂ ಎಕ್ಸಾಂ ಬರೆಯಲು ಅವಕಾಶ ನೀಡಿದ್ದೀರಾ, ಅವರಿಗೆ ಪ್ರತ್ಯೇಕ ಕೊಠಡಿ ಅಥವಾ ಕೊವಿಡ್ ಕೇರ್ ಸೆಂಟರ್​ನಲ್ಲಿ ಪರೀಕ್ಷೆ ವ್ಯವಸ್ಥೆ ಮಾಡಿದ್ದೀರಾ, ಪರೀಕ್ಷೆ ಬರೆಯುವ ಉತ್ಸಾಹ ಇರುವ ನನಗೆ ಮಾತ್ರ ಅವಕಾಶ ಏಕಿಲ್ಲ ಎಂದು ಅಳಲು ತೋಡಿಕೊಂಡಿದ್ದರು.

ನೀವು ನಿಗದಿಪಡಿಸಿದ ಎಕ್ಸಾಂ ಸೆಂಟರ್​ಗೆ ಬಂದು ಪರೀಕ್ಷೆ ಎದುರಿಸಲು ವಿದ್ಯಾರ್ಥಿನಿ ಸಿದ್ಧವಾಗಿದ್ದಾಳೆ ಎಂದು ಪೋಷಕರು ತಿಳಿಸಿದ್ದು, ಇದೇ 19 ಮತ್ತು 22 ರಂದು ಪರೀಕ್ಷೆಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ದರು. ಆದರೆ ಶಿಕ್ಷಣ ಇಲಾಖೆಯಿಂದ ನ್ಯಾಯ ಸಿಗದ ಕಾರಣ ಮಕ್ಕಳ ಹಕ್ಕುಗಳ ಮೊರೆ ಹೋದ ವಿದ್ಯಾರ್ಥಿನಿ ಮತ್ತು ಆಕೆಯ ಪೋಷಕರು ನ್ಯಾಯಕ್ಕಾಗಿ ಕಾಯುತ್ತಿದ್ದ ವೇಳೆಯಲ್ಲೇ ಆಕೆ ಆತ್ಮಹತ್ಯೆಗೆ ಪ್ರಯತ್ನಿಸಿರುವುದು ಆತಂಕ ಮೂಡಿಸಿದೆ.

ಇದನ್ನೂ ಓದಿ: ಶುಲ್ಕ ಸಮರಕ್ಕೆ ಎಸ್​ಎಸ್​ಎಲ್​ಸಿ ಪರೀಕ್ಷೆಯಿಂದ ವಂಚಿತಳಾದ ಪ್ರತಿಭಾನ್ವಿತ ವಿದ್ಯಾರ್ಥಿನಿ

Published On - 9:12 am, Sat, 17 July 21

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ