‘ಪ್ರಾಣ ಹೋದ್ರೂ ಮೆಡಿಕಲ್ ಕಾಲೇಜು ಸ್ಥಳಾಂತರಕ್ಕೆ ಬಿಡಲ್ಲ, ಅದು ಕನಕಪುರದಲ್ಲೇ ಆಗ್ಬೇಕು’
ಬೆಂಗಳೂರು: ಯಾವುದೇ ಕಾರಣಕ್ಕೂ ನಾನು ಮೆಡಿಕಲ್ ಕಾಲೇಜನ್ನು ಸ್ಥಳಾಂತರಿಸಲು ಬಿಡುವುದಿಲ್ಲ. ನನ್ನ ಪ್ರಾಣ ಹೋದರೂ ಪರವಾಗಿಲ್ಲ. ಮೆಡಿಕಲ್ ಕಾಲೇಜು ಮಾತ್ರ ಚಿಕ್ಕಬಳ್ಳಾಪುರಕ್ಕೆ ಬಿಟ್ಟುಕೊಡುವುದಿಲ್ಲ ಎಂದು ಮೆಡಿಕಲ್ ಕಾಲೇಜು ಸ್ಥಳಾಂತರದ ಬಗ್ಗೆ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ. ಕನಕಪುರದಲ್ಲೇ ಮೆಡಿಕಲ್ ಕಾಲೇಜು ಆಗಬೇಕು. ಈ ಕುರಿತು ನಮ್ಮ ಸರ್ಕಾರದಲ್ಲಿ ಈಗಾಗಲೇ ತೀರ್ಮಾನವಾಗಿದೆ. ಆದರೆ ಬಿಜೆಪಿ ಸರ್ಕಾರ ಅದನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರಿಸಿದೆ. ಈ ವಿಷಯದಲ್ಲಿ ಬಿ.ಎಸ್.ಯಡಿಯೂರಪ್ಪ ಧೋರಣೆ ಸರಿಯಲ್ಲ. ಇದರ ವಿರುದ್ಧ ನಾನು ಹೋರಾಟ ಮಾಡುತ್ತೇನೆ. ವಿಧಾನಸೌಧದಲ್ಲಿ ನನ್ನ ಪ್ರಾಣ ಬೇಕಾದ್ರೂ ಹೋಗಲಿ […]
ಬೆಂಗಳೂರು: ಯಾವುದೇ ಕಾರಣಕ್ಕೂ ನಾನು ಮೆಡಿಕಲ್ ಕಾಲೇಜನ್ನು ಸ್ಥಳಾಂತರಿಸಲು ಬಿಡುವುದಿಲ್ಲ. ನನ್ನ ಪ್ರಾಣ ಹೋದರೂ ಪರವಾಗಿಲ್ಲ. ಮೆಡಿಕಲ್ ಕಾಲೇಜು ಮಾತ್ರ ಚಿಕ್ಕಬಳ್ಳಾಪುರಕ್ಕೆ ಬಿಟ್ಟುಕೊಡುವುದಿಲ್ಲ ಎಂದು ಮೆಡಿಕಲ್ ಕಾಲೇಜು ಸ್ಥಳಾಂತರದ ಬಗ್ಗೆ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ.
ಕನಕಪುರದಲ್ಲೇ ಮೆಡಿಕಲ್ ಕಾಲೇಜು ಆಗಬೇಕು. ಈ ಕುರಿತು ನಮ್ಮ ಸರ್ಕಾರದಲ್ಲಿ ಈಗಾಗಲೇ ತೀರ್ಮಾನವಾಗಿದೆ. ಆದರೆ ಬಿಜೆಪಿ ಸರ್ಕಾರ ಅದನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರಿಸಿದೆ. ಈ ವಿಷಯದಲ್ಲಿ ಬಿ.ಎಸ್.ಯಡಿಯೂರಪ್ಪ ಧೋರಣೆ ಸರಿಯಲ್ಲ. ಇದರ ವಿರುದ್ಧ ನಾನು ಹೋರಾಟ ಮಾಡುತ್ತೇನೆ. ವಿಧಾನಸೌಧದಲ್ಲಿ ನನ್ನ ಪ್ರಾಣ ಬೇಕಾದ್ರೂ ಹೋಗಲಿ ಆದರೆ ಮೆಡಿಕಲ್ ಕಾಲೇಜು ಮಾತ್ರ ಬಿಟ್ಟುಕೊಡುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ಬಿಜೆಪಿ ಸರ್ಕಾರಕ್ಕೆ ಕಡಕ್ ಎಚ್ಚರಿಕೆ ನೀಡಿದ್ದಾರೆ.
Published On - 5:02 pm, Tue, 29 October 19