
ಬೆಂಗಳೂರು: ಸಾರ್ವಜನಿಕರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಬಿಡೆಂಟ್ ಕಂಪನಿಗೆ ಸೇರಿದ ಚಿರಾಸ್ತಿ ಮತ್ತು ಚರಾಸ್ತಿಗಳನ್ನು ಇ.ಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಒಟ್ಟು 10.2ಕೋಟಿ ರೂ. ಮೌಲ್ಯದ ಚಿರಾಸ್ತಿ ಮತ್ತು ಚರಾಸ್ತಿ ವಶಕ್ಕೆ ಪಡೆದಿದ್ದಾರೆ.
ಆರಂಭದಲ್ಲಿ ಗ್ರಾಹಕರಿಗೆ ಕಮೀಷನ್ ನೀಡಿ ಹೆಚ್ಚು ಹಣವನ್ನ ಹೂಡಿಕೆ ಮಾಡಿಸಿಕೊಂಡಿತ್ತು. ಬಳಿಕ 15% ಕಮೀಷನ್ ಆಸೆ ತೋರಿಸಿ ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿತ್ತು. ಈ ಬಗ್ಗೆ ಸಿಸಿಬಿಯಲ್ಲಿ ಪ್ರಕರಣ ದಾಖಲಾಗಿತ್ತು.
Published On - 2:10 pm, Fri, 13 December 19