ಕೊವಿಡ್ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ, ವ್ಯಕ್ತಿ ಅರೆಸ್ಟ್
ಕೊರೊನಾ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ 25 ವರ್ಷದ ಸೋಂಕಿತೆ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ರಾತ್ರಿ ಆಂಬ್ಯುಲೆನ್ಸ್ ಚಾಲಕ ಪಿಂಟು ಸೋಂಕಿತೆಯ ಬಳಿ ಬಂದು ಅತ್ಯಾಚಾರಕ್ಕೆ ಯತ್ನಿಸಿದ್ದನಂತೆ. ಮಲಗಿದ್ದಾಗ ಆಕೆಯ ಡೈಪರ್ ಮತ್ತು ಯೂರಿನ್ ಪೈಪ್ ತೆಗೆದಿದ್ದನಂತೆ. ಹೀಗಾಗಿ ತಕ್ಷಣ ನಿದ್ದೆಯಿಂದ ಎಚ್ಚರಗೊಂಡ ಸೋಂಕಿತೆ ಚೀರಾಡಿದ್ದಾಳೆ.
ಕಲಬುರಗಿ: ಕೊರೊನಾ ಸೋಂಕು ಮಾನವನ ದೇಹ ಸೇರುತ್ತಿದ್ದಂತೆ ಅವನ ಹತ್ತಿರ ಯಾರು ಸುಳಿಯದಂತಾದ್ರು. ಸೋಂಕು ಅಂಟಿದೆ ಎಂದು ತಿಳಿಯುತ್ತಿದ್ದಂತೆ ಅವರನ್ನು ದೂರ ತಳ್ಳಲಾಗುತ್ತಿದೆ. ಕೊರೊನಾಗೆ ಸತ್ತವರನ್ನು ಕುಟುಂಬದವರೂ ಸಹ ನೋಡಲು ಬರುತ್ತಿಲ್ಲ. ಇಂತಹ ಪರಿಸ್ಥಿತಿ ನಡುವೆ ಕಲಬುರಗಿಯಲ್ಲಿ ಆರೋಪವೊಂದು ಹೇಳಿ ಬರುತ್ತಿದೆ. ಕೊವಿಡ್ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಕಲಬುರಗಿ ನಗರದ ಜಿಮ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇಂತಹದೊಂದು ಘಟನೆ ನಡೆದಿದೆ. ಖಾಸಗಿ ಆಂಬ್ಯುಲೆನ್ಸ್ ಚಾಲಕ ಪಿಂಟು ಎಂಬ ವ್ಯಕ್ತಿ ಕಳೆದ ರಾತ್ರಿ ಮಲಗಿದ್ದ ಕೊವಿಡ್ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಸೋಂಕಿತೆ ಚೀರಾಟ ಹಿನ್ನೆಲೆಯಲ್ಲಿ ಆರೋಪಿ ಪರಾರಿಯಾಗಿದ್ದು ಪಿಂಟುನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊರೊನಾ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ 25 ವರ್ಷದ ಸೋಂಕಿತೆ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ರಾತ್ರಿ ಆಂಬ್ಯುಲೆನ್ಸ್ ಚಾಲಕ ಪಿಂಟು ಸೋಂಕಿತೆಯ ಬಳಿ ಬಂದು ಅತ್ಯಾಚಾರಕ್ಕೆ ಯತ್ನಿಸಿದ್ದನಂತೆ. ಮಲಗಿದ್ದಾಗ ಆಕೆಯ ಡೈಪರ್ ಮತ್ತು ಯೂರಿನ್ ಪೈಪ್ ತೆಗೆದಿದ್ದನಂತೆ. ಹೀಗಾಗಿ ತಕ್ಷಣ ನಿದ್ದೆಯಿಂದ ಎಚ್ಚರಗೊಂಡ ಸೋಂಕಿತೆ ಚೀರಾಡಿದ್ದಾಳೆ. ಈ ವೇಳೆ ಅಕ್ಕ-ಪಕ್ಕದ ರೋಗಿಗಳು ಕೂಡ ಎಚ್ಚರಗೊಂಡಿದ್ದರಿಂದ ಆರೋಪಿ ಓಡಿಹೋಗಿದ್ದಾನೆ. ಸದ್ಯ ಆರೋಪಿ ಪಿಂಟುನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಲಬುರಗಿಯ ಬ್ರಹ್ಮಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಕೊರೊನಾದಿಂದ ಗುಣಮುಖರಾದವರಲ್ಲಿ ಮತ್ತೊಂದು ಸಮಸ್ಯೆ.. ಕಾಲುಗಳು ಕಟ್
Published On - 8:10 am, Wed, 9 June 21