AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GIMS Hospital: ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಚಾಲಕನ ಮತ್ತೊಂದು ಕಾಮದಾಟ ಬಯಲು.. ಬೌನ್ಸರ್‌ಗಳಿಂದ ಹಿಗ್ಗಾಮುಗ್ಗ ಏಟು ತಿಂದವ ಜೈಲಿಗೆ

ಕಾಮುಕ ಪ್ರೇಮಸಾಗರ್ ಅಲಿಯಾಸ್ ಪಿಂಟು, ಜೂನ್ 9ರಂದು ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಸದ್ಯ ಆಕೆ ಚೀರಾಡಿಕೊಂಡಿದ್ದ ಹಿನ್ನೆಲೆ ಆರೋಪಿ ಪಿಂಟು ಅಲ್ಲಿಂದ ಪರಾರಿಯಾಗಿದ್ದ ಆದರೆ ಈ ಘಟನೆಗೂ ಮುನ್ನವೇ ಕಾಮುಕ ಆ್ಯಂಬುಲೆನ್ಸ್ ಚಾಲಕ ಅದೇ ಆಸ್ಪತ್ರೆಯ ಲಿಫ್ಟ್‌ನಲ್ಲಿ ಬರುವಾಗ ಮಹಿಳೆಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ.

GIMS Hospital: ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಚಾಲಕನ ಮತ್ತೊಂದು ಕಾಮದಾಟ ಬಯಲು.. ಬೌನ್ಸರ್‌ಗಳಿಂದ ಹಿಗ್ಗಾಮುಗ್ಗ ಏಟು ತಿಂದವ ಜೈಲಿಗೆ
ಬೌನ್ಸರ್‌ಗಳಿಂದ ಹಿಗ್ಗಾಮುಗ್ಗ ಏಟು ತಿಂದವ ಜೈಲು
TV9 Web
| Edited By: ಸಾಧು ಶ್ರೀನಾಥ್​|

Updated on:Jun 22, 2021 | 10:18 AM

Share

ಕಲಬುರಗಿ: ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಬೌನ್ಸರ್‌ಗಳು ಹಿಗ್ಗಾಮುಗ್ಗ ಥಳಿಸಿದ ಘಟನೆ ಕಲಬುರಗಿ ಜಿಮ್ಸ್‌ನಲ್ಲಿ ನಡೆದಿದೆ. ಕಲಬುರಗಿ ನಗರದ ಜಿಮ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಖಾಸಗಿ ಆಂಬ್ಯುಲೆನ್ಸ್ ಚಾಲಕ ಪಿಂಟು ಎಂಬ ವ್ಯಕ್ತಿ ರಾತ್ರಿ ಮಲಗಿದ್ದ ಕೊವಿಡ್ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪ ಕೇಳಿ ಬಂದಿತ್ತು. ಈಗ ಅದೇ ಆರೋಪಿ ಆಸ್ಪತ್ರೆಯ ಲಿಫ್ಟ್‌ನಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.

ಕಾಮುಕ ಪ್ರೇಮಸಾಗರ್ ಅಲಿಯಾಸ್ ಪಿಂಟು, ಜೂನ್ 9ರಂದು ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಸದ್ಯ ಆಕೆ ಚೀರಾಡಿಕೊಂಡಿದ್ದ ಹಿನ್ನೆಲೆ ಆರೋಪಿ ಪಿಂಟು ಅಲ್ಲಿಂದ ಪರಾರಿಯಾಗಿದ್ದ ಆದರೆ ಈ ಘಟನೆಗೂ ಮುನ್ನವೇ ಕಾಮುಕ ಆ್ಯಂಬುಲೆನ್ಸ್ ಚಾಲಕ ಅದೇ ಆಸ್ಪತ್ರೆಯ ಲಿಫ್ಟ್‌ನಲ್ಲಿ ಬರುವಾಗ ಮಹಿಳೆಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ವೇಳೆ ಆಸ್ಪತ್ರೆಯ ಬೌನ್ಸರ್‌ಗಳು ಕಾಮುಕನನ್ನು ಥಳಿಸಿ ಬುದ್ಧಿ ಹೇಳಿದ್ದರು. ಸದ್ಯ ಈ ವಿಡಿಯೋ ವೈರಲ್ ಆಗಿದೆ. ಜಿಮ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಎರಡು ಬಾರಿ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಪೊಲೀಸರು ಅರೆಸ್ಟ್ ಮಾಡಿ ಜೈಲಿಗೆ ಹಾಕಿದ್ದಾರೆ.

ಖಿನ್ನತೆಯಿಂದ ಕೊರೊನಾ ಸೋಂಕಿತ ಮಹಿಳೆ ಸಾವು ಕೊರೊನಾ ಹಿನ್ನೆಲೆ 25 ವರ್ಷದ ಸೋಂಕಿತೆ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜೂ.9ರ ರಾತ್ರಿ ಆಂಬ್ಯುಲೆನ್ಸ್ ಚಾಲಕ ಪಿಂಟು ಸೋಂಕಿತೆಯ ಬಳಿ ಬಂದು ಅತ್ಯಾಚಾರಕ್ಕೆ ಯತ್ನಿಸಿದ. ಮಲಗಿದ್ದಾಗ ಆಕೆಯ ಡೈಪರ್ ಮತ್ತು ಯೂರಿನ್ ಪೈಪ್ ತೆಗೆದಿದ್ದ. ಹೀಗಾಗಿ ತಕ್ಷಣ ನಿದ್ದೆಯಿಂದ ಎಚ್ಚರಗೊಂಡ ಸೋಂಕಿತೆ ಚೀರಾಡಿದ್ದಳು. ಈ ವೇಳೆ ಅಕ್ಕ-ಪಕ್ಕದ ರೋಗಿಗಳು ಕೂಡ ಎಚ್ಚರಗೊಂಡಿದ್ದರಿಂದ ಆರೋಪಿ ಓಡಿಹೋಗಿದ್ದ. ಬಳಿಕ ಆರೋಪಿ ಪಿಂಟುನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಮತ್ತೊಂದು ಕಡೆ ಖಿನ್ನತೆಯಿಂದ ಕೊರೊನಾ ಸೋಂಕಿತ ಮಹಿಳೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕೊವಿಡ್ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ, ವ್ಯಕ್ತಿ ಅರೆಸ್ಟ್

Published On - 10:03 am, Tue, 22 June 21

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು